ಕ್ರಿಸ್‌ಮಸ್ ರಜೆಗೆ ವಿಶೇಷ ಬಸ್‌ಗಳ ಬಿಡುಗಡೆ ಜೊತೆಗೆ ಶೇ. 10 ರಷ್ಟು ಟಿಕೆಟ್‌ ದರ ರಿಯಾಯಿತಿ ಘೋಷಣೆ ಮಾಡಿದ KSRTC

1000 special buses for cristmas leave

ಹಬ್ಬ ಹರಿದಿನಗಳಂದು ಮಕ್ಕಳು, ವಿದ್ಯಾರ್ಥಿಗಳಿಂದ ಹಿಡಿದು ಹಿರಿಯರ ತನಕವೂ ರಜೆ ಇದ್ದೇ ಇರುತ್ತದೆ. ಈ ಹಬ್ಬ ಹರಿದಿಂಗಳಂದು ಎಲ್ಲರಿಗೂ ಸಾಲು ಸಾಲು ರಜೆ ಸಿಕ್ಕೇ ಸಿಗುತ್ತದೆ. ದೂರದ ಊರಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ಕೆಲಸಕ್ಕೆ ಹೋದವರು, ಎಲ್ಲರೂ ಮತ್ತೆ ತಮ್ಮ ಮನೆಗೆ ಮರಳಿ ಬರುತ್ತಾರೆ. ಹೀಗೆ ಒಮ್ಮಿಂದೊಮ್ಮೆಗೆ ಎಲ್ಲರೂ ಒಂದೇ ಸಲ ಪ್ರಯಾಣ ಬೆಳೆಸುವುದರಿಂದ ಸಾರ್ವಜಿನಿಕ ಸಂಪರ್ಕಗಳಲ್ಲಿ ( Government Vehicles ) ಓಡಾಟ ಮಾಡಲು ಬಹಳ ತೊಂದರೆ ಆಗುತ್ತದೆ. ಅವರ ಬಳಿ ಸ್ವಂತ ವಾಹನಗಳು ಇದ್ದರೆ ಏನು ತೊಂದರೆ ಇಲ್ಲ. ಇಂತ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂದು ಓಡಾಡಲು ಕೆ ಎಸ್ ಆರ್ ಟಿ ಸಿ(KSRTC) 1000 ವಿಶೇಷ ಬಸ್ ಗಳ ವ್ಯವಸ್ಥೆ ಮಾಡಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

1000 ವಿಶೇಷ ಬಸ್ ಗಳ ವ್ಯವಸ್ಥೆ:

ಇನ್ನೇನು ಕ್ರಿಸ್ ಮಸ್ ಹಬ್ಬಕ್ಕೆ ( Christmas ) ಕೇವಲ 3 ದಿನಗಳು ಬಾಕಿ ಇವೆ. ಈ ಕ್ರಿಸ್‌ಮಸ್‌ ಹಬ್ಬದ ಸಂದರ್ಭದ ಸಾಲು ಸಾಲು ರಜೆ ನೀಡುತ್ತಾರೆ. ಈ ಸಂಧರ್ಭದಲ್ಲಿ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ಪ್ರಯಾಣ ಬೆಳೆಸುತ್ತಾರೆ. ಆ ಒಂದು ಕಾರಣಕ್ಕೆ ಮತ್ತು ಅವರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ( KSRTC ) ಬರೋಬ್ಬರಿ 1000 ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ. ಈ ಬಸ್ ಗಳ ಟಿಕೆಟ್ ಹೇಗೆ ಕಾಯ್ದಿರಿಸುವುದು, ಮತ್ತು ಎಲ್ಲಿ ಟಿಕೆಟ್ ಬುಕ್ಕಿಂಗ್ ಮಾಡಬಹುದು ಎಂಬುದರ ಬಗ್ಗೆ ತಿಳಿದು ಕೊಳ್ಳೋಣ.

ಯಾವ ದಿನಾಂಕಗಳಂದು ಈ ವಿಶೇಷ ಬಸ್‌ ಸಂಚಾರವಿದೆ ?

ಮುಖ್ಯವಾಗಿ ಡಿಸೆಂಬರ್‌ 22 , 23 ಹಾಗೂ 24 ರಂದು ಬೆಂಗಳೂರಿನಿಂದ ಈ ವಿಶೇಷ ಬಸ್‌ಗಳು ಸಂಚಾರ ನಡೆಸಲಿವೆ. ಸದ್ಯ ಲಭ್ಯವಿರುವ ಬಸ್‌ಗಳ ಜತೆಗೆ ಈ 1,000 ವಿಶೇಷ ಬಸ್‌ಗಳ ಲಭ್ಯವಿರುತ್ತವೆ. ಪ್ರಯಾಣಿಕರು ಯಾವುದೇ ಜನ ದಟ್ಟಣೆ ಇಲ್ಲದೇ ಅರಾಮಾವಾಗಿ ಪ್ರಯಾಣ ಮಾಡಬಹುದು.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹಬ್ಬ ಮುಗಿದ ಮೇಲೂ ಬಸ್ ವ್ಯವಸ್ಥೆ :

ಕ್ರಿಸ್ ಮಸ್ ಹಬ್ಬ 25 ಕ್ಕೆ ಮುಗಿಯುತ್ತದೆ. ಹಾಗೆಯೇ ಹಬ್ಬ ಮುಗಿಸಿ ಮತ್ತೆ ತಮ್ಮ ಊರುಗಳಿಂದ ಸಾರ್ವಜನಿಕರು ಮತ್ತೆ ತಮ್ಮ ಕೆಲಸ ಅಥವಾ ವ್ಯಾಸಂಗಕ್ಕೆ ತೆರಳುತ್ತಾರೆ. ಈ ಸಂಧರ್ಭದಲ್ಲಿ ಮತ್ತೆ ಬಸ್ ಗಳಲ್ಲಿ ಪ್ರಯಾಣ ಬೆಳಸಲು ಬಹಳ ಕಷ್ಟ ಆಗುತ್ತದೆ. ಹೀಗಾಗಿ ಕ್ರಿಸ್‌ಮಸ್‌ ರಜೆ ಮುಗಿದ ಬಳಿಕ ಊರುಗಳಿಂದ ಮತ್ತೆ ಬೆಂಗಳೂರಿಗೆ ವಾಪಸ್‌ ಹೋಗುವವರಿಗೆ ಡಿಸೆಂಬರ್‌ 25 ರಂದು ವಿವಿಧ ಜಿಲ್ಲಾ ಕೇಂದ್ರಗಳಿಂದ ಹಾಗೂ ಹೊರ ರಾಜ್ಯಗಳಿಂದ ವಿಶೇಷ ಬಸ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಅದರ ಜೊತೆಗೆ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುತ್ತದೆ.

whatss

ಇನ್ನು ಯಾವ ನಿಲ್ದಾಣಗಳಿಂದ ಯಾವ ಯಾವ ಸ್ಥಳಗಳಿಗೆ ಬಸ್ ವ್ಯವಸ್ಥೆ ಇದೆ ಎಂದು ತಿಳಿದುಕೊಳ್ಳೋಣ ಬನ್ನಿ.

ಕೆಂಪೇಗೌಡ ಬಸ್ ನಿಲ್ದಾಣದಿಂದ – ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ಮಾಡಿ ಬಸ್ ವ್ಯವಸ್ಥೆ ಮಾಡಲಾಗುತ್ತದೆ.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ – ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಬಸ್ ವ್ಯವಸ್ಥೆ ಕಲ್ಪಿಸುವ ವ್ಯವಸ್ಥೆ ಮಾಡಲಾಗುತ್ತದೆ.
ಶಾಂತಿನಗರತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣ, ಚೆನ್ನೆ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಬಸ್ ವ್ಯವಸ್ಥೆ ಮಾಡಲಾಗುವುದು.

ಪ್ರೀ ಬುಕ್ಕಿಂಗ್‌ಗೆ ( Pree Ticket Bukking ) ಮಾಡಿದವರಿಗೆ ಶೇ 10 ರಷ್ಟು ರಿಯಾಯಿತಿ ನೀಡಲಾಗುತ್ತದೆ.

1000 ಬಸ್ ಗಳ ವ್ಯವಸ್ಥೆ ಮಾಡಿದ್ದಾರೆ ಹಾಗೆಯೇ ಪ್ರೀ ಬುಕ್ಕಿಂಗ್ ವ್ಯವಸ್ಥೆಯನ್ನು ಕೂಡ ಸಾರ್ವಕನಿಕರಿಗೆ ಕಲ್ಪಿಸಲಾಗಿದೆ. ಹೌದು, ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಲ್ಲಿ ಮೊದಲೇ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯ ಇದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮೊದಲೇ ಟಿಕೇಟು ಕಾಯ್ದಿರಿಸಿದಲ್ಲಿ ಅವರಿಗೆ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುತ್ತದೆ. ಹಾಗೂ ಹೋಗುವ & ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ಹಾಗೆಯೇ ಕೆ ಎಸ್ ಆರ್ ಟಿ ಸಿ ವತಿಯಿಂದ ಮುಖ್ಯ ಸೂಚನೆ ನೀಡಲಾಗಿದೆ ಅದೇನೆಂದರೆ, ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸಬೇಕು. ಇದರಿಂದ ಸಮಯದ ಅಭಾವವನ್ನು ಕಡಿಮೆ ಮಾಡಬಹುದು.

tel share transformed

ಇನ್ನು ಪ್ರೀ ಟಿಕೆಟ್‌ ಬುಕ್ಕಿಂಗ್‌ ಎಲ್ಲಿ ಮಾಡಬಹುದು ?

ಮೊದಲನೆಯದಾಗಿ ಇ-ಟಿಕೇಟ್ ಬುಕಿಂಗ್‌ನ್ನು ಕೆಎಸ್‌ಆರ್‌ಟಿಸಿ ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.
ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ 691 ಗಣಕೀಕೃತ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.
ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ ಹಾಗೂ ಪುದುಚೆರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳ ವ್ಯವಸ್ಥೆ ಮಾಡಲಾಗಿದೆ.
ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.

ಸಾರ್ವಜನಿಕರಿಗೆ ಕೆ ಎಸ್ ಆರ್ ಟಿ ಸಿ ಮನವಿ :

KSRTC ವತಿಯಿಂದ ಕ್ರಿಸ್ ಮಸ್ ಹಬ್ಬಕ್ಕೆ ವ್ಯವಸ್ಥೆ ಮಾಡಲಾದ ಈ ಬಸ್ ಗಳು ಬೆಂಗಳೂರಿನಿಂದ ರಾಜ್ಯದ ವಿವಿಧೆಡೆ ಸಂಚಾರ ನಡೆಸಲಿವೆ. ಅಷ್ಟು ಮಾತ್ರವಲ್ಲದೇ ರಾಜ್ಯದ ಹಲವು ಪ್ರಮುಖ ಸ್ಥಳಗಳ ನಡುವೆಯೂ ಸಂಚಾರ ಮಾಡಲಿವೆ. ಪ್ರಯಾಣಿಕರು ಈ ಸೌಲಭ್ಯವನ್ನು ಬಳಕೆ ಮಾಡಿಕೊಳ್ಳಬೇಕು ಎಂದು ಕೆಎಸ್‌ಆರ್‌ಟಿಸಿ ಮನವಿ ಮಾಡಿದೆ.

ಇದರಿಂದ ಎಲ್ಲ ಸಾರ್ವಜನಿಕರಿಗೆ ಒಂದು ಕಡೆಯಿಂದ ಮತ್ತೊಂದು ಕಡೆಗೆ ಬಹಳ ಸುಲಭವಾಗಿ ಓಡಾಡಬಹುದು. ದಟ್ಟ ಜನ ಸಂದಣಿಯನ್ನು ಕಡಿಮೆ ಮಾಡಬಹುದು. ಆದಷ್ಟು ಬೇಗ ನೀವು ಟಿಕೆಟ್ ಬುಕ್ಕಿಂಗ್ ಮಾಡಿ ಈ ರಜಾ ದಿನಗಳಲ್ಲಿ ಸುಲಭವಾಗಿ ಓಡಾಡಬಹುದು.

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!