ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ರಾಜ್ಯದ ಯಜಮಾನಿ ಮಹಿಳೆಯರಿಗೆ ಮಾಸಿಕ 2,000 ರೂ ಸಹಾಯ ಧನವನ್ನು ನೀಡಲಾಗುತ್ತಿದೆ. ಇದೀಗ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಅವಧಿಗಾಗಿ ರಾಜ್ಯ ಸರ್ಕಾರ 4,600 ಕೋಟಿ ಅನುದಾನವನ್ನು ಬಿಡುಗಡೆ ಮಾಡಿ ಆದೇಶಿಸಿದೆ.
ಈಗಾಗಲೇ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದಿದ್ದು, 63 ಲಕ್ಷ ಮಹಿಳೆಯರಿಗೆ 2000 ರೂಗಳು ಜಮಾ ಆಗಿದೆ. ಆದರೆ ಇನ್ನೂ ಕೆಲ ಮಹಿಳೆಯರಿಗೆ ಇನ್ನೂ ಹಣ ಬಂದಿಲ್ಲ ಎಂಬ ಗೊಂದಲದಲ್ಲಿದ್ದಾರೆ. ಯಾವ ಕಾರಣಕ್ಕಾಗಿ ಹಣ ಬಂದಿಲ್ಲ ಎನ್ನುವ ಗೊಂದಲದಲ್ಲಿರುವ ಇವರಿಗೆ ಸುದ್ದಿಗೋಷ್ಠಿಯ ಮುಖಾಂತರ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ. ಮನೆಯೊಡತಿಗೆ ಪ್ರತಿ ತಿಂಗಳು ಎರಡು ಸಾವಿರ ಹಣ ಘೋಷಿಸಿದಂತೆ ಈಗಾಗಲೇ ಕಳೆದೊಂದು ವಾರದಿಂದ ಹಣ ಅವರ ಬ್ಯಾಂಕ್ ಖಾತೆಗೆ ಡಿಬಿಟಿ ಮಾಡಲಾಗುತ್ತಿದೆ. ರಾಜ್ಯಾದ್ಯಂತ ಇದರ ಪ್ರಮಾಣ ಶೇ.45ರಷ್ಟು ಇದ್ದರೆ ರಾಜಧಾನಿ ಬೆಂಗಳೂರಿನಲ್ಲಿಯೇ ಇದರ ಶೇಕಡಾ 20ರಷ್ಟು ತಲುಪಿಲ್ಲ. ಬೆಂಗಳೂರು ನಗರದಲ್ಲಿ 5,27,768 ಅರ್ಜಿಯಲ್ಲಿ 69, 642 ಮನೆಯೊಡತಿಗೆ ಎರಡು ಸಾವಿರ ಹಣ ಸಂದಾಯವಾಗಿದೆ.
ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕಾಗಿ 2023-24ನೇ ಸಾಲಿಗೆ 17,500 ಕೋಟಿ ರೂ ನಿಗದಿ ಪಡಿಸಲಾಗಿದೆ. ಅದರ ಮೊದಲ ಕಂತಾಗಿ 4,375 ಕೋಟಿ ಬಿಡುಗಡೆ ಮಾಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ಇಲಾಖೆಯ ಪ್ರಸ್ತಾವನೆಯಂತೆ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ಕ್ರಿಯಾ ಯೋಜನೆಗೆ ಅನುಮೋದನೆ ಪಡೆಯುವ ಷರತ್ತು ವಿಧಿಸಿ, ಮೊದಲ ಕಂತಿನ ಅನುದಾನವಾಗಿ ಅಂದರೆ ಆಗಸ್ಟ್, ಸೆಪ್ಟೆಂಬರ್ ಗೆ ರೂ.4,600 ಕೋಟಿ ಅನುದಾವನ್ನು ಬಿಡುಗಡೆ ಮಾಡಲಾಗಿದೆ. ಈ ಮೂಲಕ ಗೃಹಲಕ್ಷ್ಮಿಯರಿಗೆ ಆಗಸ್ಟ್, ಸೆಪ್ಟೆಂಬರ್ ತಿಂಗಳ 2000 ರೂ ಹಣವನ್ನು ಖಾತೆಗೆ ಜಮಾ ಮಾಡಲಾಗಿದೆ.
ಗೃಹಲಕ್ಷ್ಮಿ DBT ನೇರ ನಗದು ವರ್ಗಾವಣೆ ಸ್ಟೇಟಸ್ ಹೀಗೆ ಚೆಕ್ ಮಾಡಿ:
DBT-ಅನ್ನಭಾಗ್ಯ,ಗೃಹಲಕ್ಷ್ಮಿ ಹಾಗೂ ಸರ್ಕಾರದ ಯಾವುದೇ ಯೋಜನೆಯ ನೇರ ನಗದು ವರ್ಗಾವಣೆ ಸ್ಥಿತಿಯನ್ನು ನಾವು ನೇರವಾಗಿ ನಮ್ಮ ಮೊಬೈಲ್ ನಲ್ಲಿ ಆಂಡ್ರಾಯ್ಡ್ ಅಪ್ಲಿಕೇಶನ್ ಮೂಲಕ ಮಾಡಬಹುದು
ಹಂತ 1: ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಉಚಿತವಾಗಿ ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ಹಂತ 2: ಫಲಾನುಭವಿಯ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ಹಂತ 3: ಈಗ ನಿಮ್ಮ ಆಧಾರ್ ನಂಬರ್ ಅನ್ನು ಹಾಕಿ Get OTP ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿ ಹಾಕಿದ ನಂತರ verify OTP ಮೇಲೆ ಕ್ಲಿಕ್ ಮಾಡಿ ನಂತರ ಇಲ್ಲಿ ನಿಮ್ಮ ಆಧಾರ್ ಕಾರ್ಡ್ ಡೀಟೇಲ್ಸ್ ಕಾಣಿಸುತ್ತದೆ
ಹಂತ 4: ನಂತರ ಇಲ್ಲಿ ನೀವು ಪಾಸ್ವರ್ಡ್ ಅನ್ನು ಆಯ್ಕೆ ಮಾಡಬೇಕಾಗುತ್ತದೆ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ಹಂತ 4: ಈಗ ಹೋಂ ಪೇಜ್ ನಲ್ಲಿ ನೀವು Payment status ಮೇಲೆ ಕ್ಲಿಕ್ ಮಾಡಿ. ಅನ್ನಭಾಗ್ಯದ ಡಿಬಿಟಿ ಸ್ಟೇಟಸ್ ಅನ್ನು ತಿಳಿದುಕೊಳ್ಳಬಹುದು. ಮತ್ತು ಪಕ್ಕದಲ್ಲಿರುವ Seeding status of Adhaar in bank account ಮೇಲೆ ಕ್ಲಿಕ್ ಮಾಡುವ ಮೂಲಕ ನಿಮ್ಮ ಆಧಾರ್ ಸೀಡಿಂಗ್ ಸ್ಟೇಟಸ್ ಅನ್ನು ಮತ್ತು ಯಾವ ಬ್ಯಾಂಕಿಗೆ ಸೀಡಾಗಿದೆ ಎಂಬುದನ್ನು ತಿಳಿದುಕೊಳ್ಳಬಹುದು
ಹಂತ 5: ಇಲ್ಲಿ ನಿಮಗೆ ಸರ್ಕಾರದಿಂದ ಇದುವರೆಗೂ ಬಂದಿರುವ ಯಾವುದೇ ನೇರ ನಗದು ವರ್ಗಾವಣೆಯ ಸ್ಥಿತಿ ಕಾಣಿಸಿಕೊಳ್ಳುತ್ತದೆ