ಮಹಿಳೆಯರಿಗೆ ಪ್ರೋತ್ಸಾಹಿಸೋ ಸಲುವಾಗಿ ಸರ್ಕಾರ ಜಾರಿಗೆ ತಂದಿರುವಂತ ಯೋಜನೆ ಈಗಾಗಲೇ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದಿದ್ದು, ಪಡಿತರ ಚೀಟಿ ಹೊಂದಿದ ‘ಕುಟುಂಬದ ಯಜಮಾನಿ’ ಎಂದು ಗುರುತಿಸಲ್ಪಟ್ಟ ಮಹಿಳೆಯರಿಗೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ಆಗಸ್ಟ್ – 2023 ರಿಂದ ಪ್ರತಿ ತಿಂಗಳು 2000 ರೂ.ಗಳನ್ನು ಡಿಬಿಟಿ ಮೂಲಕ ಹಣ ಜಮೆ ಮಾಡಲಾಗುತ್ತಿದೆ. ಅನೇಕ ಮಹಿಳೆಯರಿಗೆ 2000 ರೂಗಳು ಜಮಾ ಆಗಿದೆ. ಆದರೆ ಇನ್ನೂ ಕೆಲ ಮಹಿಳೆಯರಿಗೆ ಇನ್ನೂ ಹಣ ಬಂದಿಲ್ಲ ಎಂಬ ಗೊಂದಲದಲ್ಲಿದ್ದಾರೆ. ಯಾವ ಕಾರಣಕ್ಕಾಗಿ ಹಣ ಬಂದಿಲ್ಲ ಎನ್ನುವ ಗೊಂದಲದಲ್ಲಿರುವ ಇವರಿಗೆ ಸುದ್ದಿಗೋಷ್ಠಿಯ ಮುಖಾಂತರ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ.
ಈ ಜಿಲ್ಲೆಗಳಿಗೆ ಮೂರನೇ ಕಂತಿನ ಹಣ ಬಿಡುಗಡೆ!
ಈಗಾಗಲೇ ಪ್ರತಿಯೊಬ್ಬ ಫಲಾನುಭವಿಗಳ ಖಾತೆಗೆ ಮೂರನೇ ಕಂತಿನ ಹಣ ಜಮಾ ಆಗುತ್ತದೆ, ಈಗಾಗಲೇ ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ ಮಂಡ್ಯ ಮತ್ತು ಮೈಸೂರು ಮೊದಲದ ಕಡೆ ಮೂರನೇ ಕಂತಿನ ಹಣ ಜಮಾ ಆಗುತ್ತಿದೆ. ಇನ್ನು ಮುಂದಿನ ತಿಂಗಳಿಂದ ಪ್ರತಿ ತಿಂಗಳು 15 ರಿಂದ 20ನೇ ತಾರೀಕಿನೊಳಗೆ ಎಲ್ಲಾ ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ರೂ.2000 ಜಮಾ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಇದುವರೆಗೂ ಹಣ ಬರದೇ ಇದ್ದವರಿಗೆ ಒಟ್ಟಿಗೆ 6 ಸಾವಿರ ರೂ. ಖಾತೆಗೆ ಬರುತ್ತೆ
ಬುಧವಾರ ಬೆಂಗಳೂರಿನ ಮಲ್ಲೇಶ್ವರಂ ನ ಬೆಂಗಳೂರು ಒನ್ ಕೇಂದ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಗಸ್ಟ್ 15 ರೊಳಗೆ ನೋಂದಣಿ ಮಾಡಿಕೊಂಡು ಇದುವರೆಗೂ ಹಣ ಬರದೇ ಇರುವ ಫಲಾನುಭವಿಗಳು ಚಿಂತೆ ಮಾಡಬೇಕಿಲ್ಲ, ಮೂರು ತಿಂಗಳ ಒಟ್ಟು ಬಾಕಿಯಾದ 6000 ರೂಪಾಯಿಯನ್ನು ಪೂರ್ಣವಾಗಿ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು. ದೀಪಾವಳಿ ಹಬ್ಬದ ವೇಳೆಗೆ ಅಥವಾ ಮುಂದಿನ 15 ದಿನಗಳೊಳಗೆ ಎಲ್ಲಾ ಫಲಾನುಭವಿಗಳಿಗೆ ಹಣ ಹೋಗುವಂತೆ ನೋಡಿಕೊಳ್ಳಲಾಗುವುದು ಎಂದರು.ಹೀಗಾಗಿ ಅಧಿಕಾರಿಗಳಿಗೆ ಟ್ರೈನಿಂಗ್ ನೀಡಲಾಗುತ್ತಿದ್ದು, ಇನ್ನು ಹತ್ತು ದಿನದಲ್ಲಿ ಗೃಹಲಕ್ಷ್ಮಿ ಗೊಂದಲ ಕ್ಲಿಯರ್ ಆಗಲಿದೆ ಎಂದು ತಿಳಿಸಿದರು. ಇದರ ಜೊತೆಗೆ ‘1902’ ಹೆಲ್ಪ್ ಲೈನ್ ನಂಬರ್ ಇದ್ದು, ಇದಕ್ಕೆ ಕೆರೆಮಾಡಿ ಮಹಿಳೆಯರು ಮಾಹಿತಿಯನ್ನ ಪಡೆದುಕೊಳ್ಳಬಹುದು ಎಂದರು.
ಅಂಚೆ ಕಚೇರಿ ಸಹಾಯ ಪಡೆದುಕೊಳ್ಳಿ..! ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ (IPPB)
ದೇಶಾದ್ಯಂತದ ಸುಮಾರು ಶೇ.77 ಗ್ರಾಮೀಣ ಖಾತೆದಾರರಿಗೆ ಮನೆಯಲ್ಲಿ ಕುಳಿತು ಬ್ಯಾಂಕಿನಿ೦ದ ಹಣವನ್ನು ಹಿಂಪಡೆಯುವ ಅಥವಾ ಜಮಾ ಮಾಡುವ ಅನುಕೂಲವಿದೆ. ಅಂಚೆ ಉಳಿತಾಯ ಖಾತೆಯನ್ನು ಕೇವಲ 5 ನಿಮಿಷದಲ್ಲಿ ತೆರೆಯಬಹುದಾಗಿದೆ. ಕರ್ನಾಟಕದಲ್ಲಿ ಐಪಿಪಿಬಿ 33 ಶಾಖೆಗಳಿವೆ. ಐಪಿಪಿಬಿ ಖಾತೆ ತೆರೆದರೆ ಶೀಘ್ರವೇ ಗೃಹಲಕ್ಷ್ಮಿ ಯೋಜನೆಯ ನೇರ ನಗದು ವರ್ಗಾವಣೆ ಆಗಲಿದೆ ಎನ್ನುತ್ತಾರೆ ಅಧಿಕಾರಿಗಳು. ಇದುವರೆಗೂ ಹಣ ಬಾರದೇ ಇರುವ ಎಷ್ಟೋ ಜನರು ಪೋಸ್ಟ್ ಆಫೀಸ್ ಬ್ಯಾಂಕ್ ನಲ್ಲಿ ಖಾತೆ ತೆರೆದ ಎರಡೇ ದಿನಗಳಲ್ಲಿ ಹಣ ಬಂದಿರುವ ಉದಾಹರಣೆಗಳಿವೆ, ಹಣ ಬರದಿರುವ ಎಷ್ಟೋ ಫಲಾನುಭವಿಗಳ ಬ್ಯಾಂಕಿಂಗ್ ಕೆವೈಸಿನಲ್ಲಿ ಸಮಸ್ಯೆ ಇರುವ ಕಾರಣ DBT ವರ್ಗಾವಣೆ ಕಷ್ಟಕರವಾಗಿದೆ, ಹಾಗಾಗಿ ಇದುವರೆಗೂ ಒಂದು ಕಂತಿನ ಹಣ ಬಂದಿಲ್ಲ ಎನ್ನುವರು ಇದೊಂದು ಪ್ರಯತ್ನ ಮಾಡಿ ನೋಡಿ.
ಗೃಹ ಲಕ್ಷ್ಮಿ ಹಣ DBT ಆಪ್ ನಲ್ಲಿ ಈಗ ತೋರಿಸುತ್ತಿದೆ ಚೆಕ್ ಮಾಡಿ
ಕೆಲವೊಮ್ಮೆ ಮನೆ ಯಜಮಾನಿಯರಿಗೆ ಹಣ ಜಮಾ ಆಗಿರುತ್ತದೆ. ಆದರೆ ಹಲವು ಬ್ಯಾಂಕ್ ಖಾತೆಗಳು ನಿಮ್ಮ ಹೆಸರಲ್ಲಿ ಇದ್ದಾಗ ಯಾವ ಖಾತೆಗೆ ಜಮೆ ಆಗಿದೆ ಅಂತ ನಿಮಗೆ ಗೊತ್ತಾಗುವುದಿಲ್ಲ ಸಂದರ್ಭದಲ್ಲಿ ನೀವು ಡಿ ಬಿ ಟಿ ಆಪ್ ಮೂಲಕ ಈ ಮಾಹಿತಿಯನ್ನು ತಿಳಿದುಕೊಳ್ಳಬಹುದು. ಹೌದು, ಡಿಬಿಟಿ ಆಪ್ ನಲ್ಲಿ ಈಗ ಗೃಹಲಕ್ಷ್ಮಿ ಹಣ ಅಪ್ಡೇಟ್ ಆಗುತ್ತಿದೆ. ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಮಾಹಿತಿಯನ್ನು ಪಡೆದುಕೊಳ್ಳಬಹುದು
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
I i have not got from august