ರಾಜ್ಯ ಸರ್ಕಾರಿ ನೌಕರರಿಗೆ(For State Government Employees) ಗುಡ್ ನ್ಯೂಸ್, ಸರ್ಕಾರಿ ನೌಕರರ ಸಂಘ ತುಟ್ಟಿಭತ್ಯೆ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರಿ ನೌಕರರು ಹಲವು ಹೋರಾಟದ ಫಲದಿಂದ ಇಂದು ತುಟ್ಟಿಭತ್ಯೆಯನ್ನು ಪಡೆಯುತ್ತಿದ್ದಾರೆ. ಅಷ್ಟೇ ಅಲ್ಲ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಪೂರ್ವದಲ್ಲಿಯೇ ತುಟ್ಟಿಭತ್ಯೆ (DA Hike) ಹಾಗೂ ತುಟ್ಟಿ ಪರಿಹಾರವನ್ನು (DR Hike) ಘೋಷಿಸಲಾಗಿದೆ. ಇನ್ನು ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರವೂ(State government) ಕೂಡ ಡಿಎ ಹೆಚ್ಚಳ ಮಾಡುತ್ತದೆ. ಆದರೆ ಈ ಕುರಿತಂತೆ ರಾಜ್ಯ ಸರ್ಕಾರ ಯಾವುದೇ ರೀತಿಯ ಆದೇಶವನ್ನು ಹೊರಡಿಸಿಲ್ಲ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು(Chief Minister Siddaramaiah) ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ಮನವಿಯನ್ನು ಮಾಡಿದ್ದರು. ಮನವಿ ಮಾಡಿದರು ಕೂಡ ಸರ್ಕಾರ ಯಾವುದೇ ರೀತಿಯ ತೀರ್ಮಾನವನ್ನು ಕೈಗೊಂಡಿರಲಿಲ್ಲ, ಆದರೆ ಇದೀಗ ಸರ್ಕಾರಿ ನೌಕರರ ಸಂಘ ಡಿಎ ಏರಿಕೆ ಕುರಿತು ಅಪ್‌ಡೇಟ್ ನೀಡಿದೆ. ಏನಿದು ಅಪ್‌ಡೇಟ್ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ರಾಜ್ಯ ಸರ್ಕಾರಿ ನೌಕರರು ನವೆಂಬರ್(November) ಮೊದಲ ವಾರದಲ್ಲಿಯೇ ಕರ್ನಾಟಕ ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಿದರು ಸಹ ತುಟ್ಟಿಭತ್ಯೆ ಹೆಚ್ಚಳದ ಕುರಿತು ಸರ್ಕಾರ ಯಾವುದೇ ರೀತಿಯ ಆದೇಶವನ್ನು ಹೊರಡಿಸಲಿಲ್ಲ. ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಹಬ್ಬದ ಉಡುಗೊರೆಯಾಗಿ ತುಟ್ಟಿಭತ್ಯೆ ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ ಏರಿಕೆ ಮಾಡಿತ್ತು. ಆದರೆ ರಾಜ್ಯ ಸರ್ಕಾರಿ ನೌಕರರಿಗೆ ಮಾತ್ರ ತುಟ್ಟಿಭತ್ಯೆ ಹೆಚ್ಚಳ ಮಾಡಲು ಮೀನಾ ಮೇಷ ಎಣಿಸುತ್ತಿದ್ದ ಕಾರಣ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆದೇಶ ಹೊರಡಿಸುವಂತೆ ಮುಖ್ಯಮಂತ್ರಿಗಳಿಗೆ ಮತ್ತೆ ಮನವಿಯನ್ನು ಸಲ್ಲಿಕೆ ಮಾಡಿತ್ತು, ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು ಕೂಡ ಯಾವುದೇ ಪ್ರಯೋಜನವಾಗಿರಲಿಲ್ಲ. ಆದರೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ (President of Government Employees Union)ಸಿ. ಎಸ್. ಷಡಾಕ್ಷರಿ, ಡಿಎ ಏರಿಕೆ ಕುರಿತು ಹೊಸ ಅಪ್‌ಡೇಟ್ ನೀಡಿದ್ದಾರೆ.
ರಾಜ್ಯ ಸರ್ಕಾರಿ ನೌಕರರು ಡಿಎ ಹೆಚ್ಚಳದ ಕುರಿತು ಮುಖ್ಯಮಂತ್ರಿಗಳಿಗೆ ಸಿ. ಎಸ್. ಷಡಕ್ಷರಿ ಪತ್ರ ಬರೆದಿದ್ದರು:
ರಾಜ್ಯ ಸರ್ಕಾರಿ ನೌಕರರ ಸಿಗಬೇಕಿರುವ ತುಟ್ಟಿಭತ್ಯೆ ಕುರಿತು ರಾಜ್ಯ ಸರ್ಕಾರಿ ನೌಕರರ ಸಂಘದ ಮೂಲಕ ಸಿ. ಎಸ್. ಷಡಕ್ಷರಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮಾನ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಆರ್ಥಿಕ ಇಲಾಖೆ ಇವರಿಗೆ ಪತ್ರವನ್ನು ಬರೆದಿದ್ದು, ಬಾಕಿ ಇರುವ ನೌಕರರ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ(In cash)_ ನೀಡುವಂತೆ ಆದೇಶ ಹೊರಡಿಸಲು ಮನವಿ ಮಾಡಿಕೊಂಡಿದ್ದರು. ಇದೇ ವಿಚಾರವಾಗಿ ಎಲ್. ಕೆ. ಅತೀಕ್ ಅವರನ್ನು ಸಿ. ಎಸ್. ಷಡಕ್ಷರಿ ಅವರ ನೇತೃತ್ವದ ನಿಯೋಗ ಭೇಟಿಯಾಗಿತ್ತು. ಅವೇಳೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿತ್ತು, ಆದರೆ ಸರ್ಕಾರ ಈ ಕುರಿತು ಯಾವುದೇ ಆದೇಶವನ್ನು ಹೊರಡಿಸಿಲ್ಲ. ಆದ್ದರಿಂದ ರಾಜ್ಯದ ಸರ್ಕಾರಿ ನೌಕರರಿಗೆ ಬೇಸರವಾಗಿದೆ. ಆದರೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಕ್ಷರಿ, ಡಿಎ ಏರಿಕೆ ಕುರಿತು ಹೊಸ ಅಪ್‌ಡೇಟ್ ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಡಿಎ ಏರಿಕೆ ಕುರಿತು ಹೊಸ ಅಪ್‌ಡೇಟ್ :
ತುಟ್ಟಿಭತ್ಯೆ ಏರಿಕೆ ಕುರಿತ ಮಾಹಿತಿಯನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವೇದಿಕೆ ಟೆಲಿಗ್ರಾಮ್ ಗ್ರೂಪ್‌ನಲ್ಲಿ(Telegram group) ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ಹೆಸರಿನಲ್ಲಿ ಪೋಸ್ಟ್(post) ಹಾಕಲಾಗಿದ್ದು, ಈ ಒಂದು ಪೋಸ್ಟ್ ನಲ್ಲಿ ತುಟ್ಟಿಭತ್ಯೆ ಏರಿಕೆ ಕುರಿತ ಹಲವು ಮಾಹಿತಿಗಳನ್ನು ನೀಡಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ(social media) ಡಿಎ ಏರಿಕೆ ಕುರಿತ ಪೋಸ್ಟ್ ನಲ್ಲಿ ಏನಿದೆ?:
ಸಾಮಾಜಿಕ ಜಾಲತಾಣದಲ್ಲಿ ಡಿಎ ಏರಿಕೆ ಕುರಿತ ಹಾಕಿರುವ ಪೋಸ್ಟ್ ನಲ್ಲಿ ಬಾಕಿ ಇರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ದಿನಾಂಕ 01-07-2024ರಿಂದ ಅನ್ವಯವಾಗುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ್ದರು, ಇದರಂತೆ ಮುಖ್ಯಮಂತ್ರಿಗಳು ತುಟ್ಟಿಭತ್ಯೆಯನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸುವ ಕುರಿತು ಸಕಾರಾತ್ಮಕವಾಗಿ(Positively) ಸ್ಪಂದಿಸಿದ್ದಾರೆ. ಶೀಘ್ರದಲ್ಲೇ ಅಧಿಕೃತ ಆದೇಶ ಹೊರಬೀಳಲಿದೆ ಎಂದು ತಿಳಿಸಲಾಗಿದ್ದು, ಈ ಕುರಿತು ತೀರ್ಮಾನವನ್ನು ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡು ಆದೇಶ ಹೊರಡಿಸುವ ನಿರೀಕ್ಷೆ ಇದೆ. ನವಂಬರ್ 28(November 28) ಅಂದರೆ ನಾಳೆ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದ್ದು, ಬೆಳಗ್ಗೆ 11 ಗಂಟೆಗೆ ವಿಧಾನ ಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಸಚಿವ ಸಂಪುಟದ 2430 ಸಭೆಯನ್ನು ಕರೆಯಲಾಗಿತ್ತು ಆದರೆ ಅದನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ ಎಂದು ಹೇಳಿದ್ದಾರೆ. ಈ ಕುರಿತಂತೆ ಆರ್. ಚಂದ್ರಶೇಖರ್, ಸರ್ಕಾರದ ಅಪರ ಕಾರ್ಯದರ್ಶಿ ಸೂಚನಾ ಪತ್ರವನ್ನು ಹೊರಡಿಸಿದ್ದಾರೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.