Gruhalakshmi – 3ನೇ ಕಂತಿನ 2000/- ಹಣ ಈ 26 ಜಿಲ್ಲೆಗಳ ಮಹಿಳೆಯರಿಗೆ ಬಿಡುಗಡೆ. ನಿಮಗೂ ಬಂತಾ ಚೆಕ್ ಮಾಡಿಕೊಳ್ಳಿ

gruhalakshmi 59

ಕರ್ನಾಟಕ ಕಾಂಗ್ರೆಸ್‌ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ, ಮನೆಯೊಡತಿಗೆ ಪ್ರತಿತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆಗೆ ಬುಧವಾರ ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಯಿತು. ಇದಾದ ಬಳಿಕ ಈ ಯೋಜನೆಗೆ ನೋಂದಾಯಿಸಿಕೊಂಡಿರುವ ರಾಜ್ಯದ ಮಹಿಳೆಯರ ಬ್ಯಾಂಕ್‌ ಖಾತೆಗಳಿಗೆ 2 ಸಾವಿರ ರೂಪಾಯಿ ಜಮಾ ಆಗುತ್ತಿದೆ  ಆದರೆ ಇನ್ನೂ ಕೆಲ ಮಹಿಳೆಯರಿಗೆ ಇನ್ನೂ ಹಣ ಬಂದಿಲ್ಲ ಎಂಬ ಗೊಂದಲದಲ್ಲಿದ್ದಾರೆ. ಯಾವ ಕಾರಣಕ್ಕಾಗಿ ಹಣ ಬಂದಿಲ್ಲ ಎನ್ನುವ ಗೊಂದಲದಲ್ಲಿರುವ ಇವರಿಗೆ ಸುದ್ದಿಗೋಷ್ಠಿಯ ಮುಖಾಂತರ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಫಾಲೋ (Follow) ಮಾಡಿ.

ಈ 26 ಜಿಲ್ಲೆಗಳಿಗೆ ಮೂರನೇ ಕಂತಿನ ಹಣ ಬಿಡುಗಡೆ!

ಈಗಾಗಲೇ ಪ್ರತಿಯೊಬ್ಬ ಫಲಾನುಭವಿಗಳ ಖಾತೆಗೆ ಮೂರನೇ ಕಂತಿನ ಹಣ ಜಮಾ ಆಗುತ್ತದೆ, ಈಗಾಗಲೇ ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ ಮಂಡ್ಯ ಮತ್ತು ಮೈಸೂರು , ಎರಡನೇ ಹಂತವಾಗಿ,ಬಿಜಾಪುರ,ಬಾಗಲಕೋಟೆ,ಹಾವೇರಿ, ಗದಗ,ಧಾರವಾಡ,,ಬೆಳಗಾವಿ,ಬಳ್ಳಾರಿ,ಬೀದರ,ಕಲಬುರಗಿ ಕೊಪ್ಪಳ,ರಾಯಚೂರು, ವಿಜಯನಗರ,ಯಾದಗಿರಿ,ಮೈಸೂರು,ಮಂಡ್ಯ, ಕೊಡಗು,ಚಿಕ್ಕಮಗಳೂರು,ಶಿವಮೊಗ್ಗ ತುಮಕೂರು,ಹಾಸನ,ಚಾಮರಾಜನಗರ, ಚಿತ್ರದುರ್ಗ, ರಾಮನಗರ, ದಾವಣಗೆರೆ, ಮೂರನೇ ಕಂತಿನ ಹಣ ಜಮಾ ಆಗುತ್ತಿದೆ. ಇನ್ನು ಮುಂದಿನ ತಿಂಗಳಿಂದ ಪ್ರತಿ ತಿಂಗಳು 15ರಿಂದ 20ನೇ ತಾರೀಕಿನೊಳಗೆ ಎಲ್ಲಾ ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ರೂ.2000 ಜಮಾ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

3 ತಿಂಗಳಿಂದ ಬಾಕಿ ಇದ್ದರೆ 6 ಸಾವಿರ ರೂ. ಖಾತೆಗೆ ಬರುತ್ತೆ.

ರಾಜ್ಯದ ಯಜಮಾನಿ ಮಹಿಳೆಯರಿಗೆ ಪ್ರೋತ್ಸಾಹಿಸೋ ಸಲುವಾಗಿ ಸರ್ಕಾರ ಜಾರಿಗೆ ತಂದಿರುವಂತ ಯೋಜನೆ ಈಗಾಗಲೇ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದಿದ್ದು, ಅನೇಕ ಮಹಿಳೆಯರಿಗೆ 2000 ರೂಗಳು ಜಮಾ ಆಗಿದೆ. ಆದರೆ ಇನ್ನೂ ಕೆಲ ಮಹಿಳೆಯರಿಗೆ ಇನ್ನೂ ಹಣ ಬಂದಿಲ್ಲ ಎಂಬ ಗೊಂದಲದಲ್ಲಿದ್ದಾರೆ. ಯಾವ ಕಾರಣಕ್ಕಾಗಿ ಹಣ ಬಂದಿಲ್ಲ ಎನ್ನುವ ಗೊಂದಲದಲ್ಲಿರುವ ಇವರಿಗೆ ಸುದ್ದಿಗೋಷ್ಠಿಯ ಮುಖಾಂತರ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ.ಆಗಸ್ಟ್ 15 ರೊಳಗೆ ನೋಂದಣಿ ಮಾಡಿಕೊಂಡವರಿಗೆ ಇದುವರೆಗೆ ದುಡ್ಡು ಬಾರದೇ ಇದ್ರೆ, ಒಟ್ಟಿಗೆ ಮೂರು ತಿಂಗಳ ಹಣ ಹಾಕಲಾಗುತ್ತದೆ. ಇದುವರೆಗೆ ಹಣ ಬಾರದೇ ಇದ್ರೂ ಪೂರ್ಣ ಬಾಕಿ ಹಣ ಹಾಕಲಾಗುವುದು ಎಂದರು. ದೀಪಾವಳಿ ಹಬ್ಬದ ವೇಳೆಗೆ ಅಥವಾ ಮುಂದಿನ 15 ದಿನಗಳೊಳಗೆ ಎಲ್ಲಾ ಫಲಾನುಭವಿಗಳಿಗೆ ಹಣ ಹೋಗುವಂತೆ ನೋಡಿಕೊಳ್ಳಲಾಗುವುದು ಎಂದರು.

ಹಣ ಬರದೆ ಇದ್ದವರು ಏನು ಮಾಡಬೇಕು..?

ಗೃಹಲಕ್ಷ್ಮಿ ಯೋಜನೆಯಡಿ 7.9 ಲಕ್ಷ ಮಹಿಳೆಯರಿಗೆ ಹಣ ಪಾವತಿ ಬಾಕಿ ಇದೆ. ತಾಂತ್ರಿಕ ಸಮಸ್ಯೆ ಸರಿಪಡಿಸಿ ಆಯಾ ಫಲಾನುಭವಿಗಳ ಖಾತೆಗೆ ಬಾಕಿ ತಿಂಗಳ ಮೊತ್ತವು ಸೇರಿಸಿ ಇನ್ನು 15 ದಿನಗಳೊಳಗೆ ಸಹಾಯಧನ ಪಾವತಿ ಮಾಡಲಾಗುತ್ತದೆ. ಬಹುತೇಕರ ಆಧಾರ್‌ ಜೋಡಣೆ ಇಲ್ಲವೇ ಬ್ಯಾಂಕ್‌ ಖಾತೆಯ ಗೊಂದಲ ಆಗಿದೆ. ಅಂತವರು ಈ ಹಿಂದೆ ನೊಂದಣಿ ಮಾಡಿಸಿಕೊಂಡಿದ್ದ ಗ್ರಾಮ ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರ ಗಳಿಗೆ ತೆರಳಿ ಸಮಸ್ಯೆಯನ್ನು ವಿವರಿಸಬೇಕು. ಅದಕ್ಕಾಗಿ ಆಧಾರ್‌ ಕಾರ್ಡ್‌ ನೀಡಿ ಜೋಡಣೆ ಆಗಿದೆಯೋ ಇಲ್ಲವೇ ಖಚಿತಪಡಿಸಿಕೊಂಡು ಸರಿಪಡಿಸಿಕೊಳ್ಳಬೇಕು.

ಆಧಾರ್ ಲಿಂಕ್ ಆಗದೆ ಸುಮಾರು 12 ಲಕ್ಷ ಮಹಿಳೆಯರು ಹಣ ಸ್ವೀಕರಿಸಿಲ್ಲ. ಆದ್ದರಿಂದ ಇಂಥವರ ಖಾತೆಗೆ ಮುಂದಿನ ತಿಂಗಳಿನಿಂದ ಆಧಾರ್ ಕಾರ್ಡ್ ಲಿಂಕ್ ಆಗದೆ (Aadhaar link not compulsory) ಇದ್ದರೂ ಕೂಡ ಹಣ ಜಮಾ ಆಗಲಿದೆ. ನವೆಂಬರ್ ತಿಂಗಳ ಅಂತ್ಯದ ಒಳಗೆ ಅರ್ಜಿ ಸಲ್ಲಿಕೆ ಮಾಡಿದ ಪ್ರತಿಯೊಬ್ಬ ಫಲಾನುಭವಿಗಳ ಖಾತೆಗೆ ಪ್ರತಿಶತ ನೂರರಷ್ಟು ಮೂರು ತಿಂಗಳ ಹಣವನ್ನು ಪಾವತಿ ಮಾಡಲು ಸರ್ಕಾರ ನಿರ್ಧರಿಸಿದೆ. ಇದರ ಜೊತೆಗೆ ‘1902’ ಹೆಲ್ಪ್ ಲೈನ್ ನಂಬರ್ ಇದ್ದು, ಇದಕ್ಕೆ ಕೆರೆಮಾಡಿ ಮಹಿಳೆಯರು ಮಾಹಿತಿಯನ್ನ ಪಡೆದುಕೊಳ್ಳಬಹುದು ಎಂದರು.

ಅಂಚೆ ಕಚೇರಿ ಸಹಾಯ ಪಡೆದುಕೊಳ್ಳಿ..! ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ (IPPB)

ದೇಶಾದ್ಯಂತದ ಸುಮಾರು ಶೇ.77 ಗ್ರಾಮೀಣ ಖಾತೆದಾರರಿಗೆ ಮನೆಯಲ್ಲಿ ಕುಳಿತು ಬ್ಯಾಂಕಿನಿ೦ದ ಹಣವನ್ನು ಹಿಂಪಡೆಯುವ ಅಥವಾ ಜಮಾ ಮಾಡುವ ಅನುಕೂಲವಿದೆ. ಅಂಚೆ ಉಳಿತಾಯ ಖಾತೆಯನ್ನು ಕೇವಲ 5 ನಿಮಿಷದಲ್ಲಿ ತೆರೆಯಬಹುದಾಗಿದೆ. ಕರ್ನಾಟಕದಲ್ಲಿ ಐಪಿಪಿಬಿ 33 ಶಾಖೆಗಳಿವೆ. ಐಪಿಪಿಬಿ ಖಾತೆ ತೆರೆದರೆ ಶೀಘ್ರವೇ ಗೃಹಲಕ್ಷ್ಮಿ ಯೋಜನೆಯ ನೇರ ನಗದು ವರ್ಗಾವಣೆ ಆಗಲಿದೆ ಎನ್ನುತ್ತಾರೆ ಅಧಿಕಾರಿಗಳು. ಇದುವರೆಗೂ ಹಣ ಬಾರದೇ ಇರುವ ಎಷ್ಟೋ ಜನರು ಪೋಸ್ಟ್ ಆಫೀಸ್ ಬ್ಯಾಂಕ್ ನಲ್ಲಿ ಖಾತೆ ತೆರೆದ ಎರಡೇ ದಿನಗಳಲ್ಲಿ ಹಣ ಬಂದಿರುವ ಉದಾಹರಣೆಗಳಿವೆ, ಹಣ ಬರದಿರುವ ಎಷ್ಟೋ ಫಲಾನುಭವಿಗಳ ಬ್ಯಾಂಕಿಂಗ್ ಕೆವೈಸಿನಲ್ಲಿ ಸಮಸ್ಯೆ ಇರುವ ಕಾರಣ DBT ವರ್ಗಾವಣೆ ಕಷ್ಟಕರವಾಗಿದೆ, ಹಾಗಾಗಿ ಇದುವರೆಗೂ ಒಂದು ಕಂತಿನ ಹಣ ಬಂದಿಲ್ಲ ಎನ್ನುವರು ಇದೊಂದು ಪ್ರಯತ್ನ ಮಾಡಿ ನೋಡಿ.

ನಿಮ್ಮ ಖಾತೆಗೆ ಹಣ ಜಮಾ ಆಗಿದೆಯಾ ಅಂತ ಈ ರೀತಿ ಪರಿಶೀಲಿಸಿಕೊಳ್ಳಿ

ಗೃಹಲಕ್ಷ್ಮಿ ಹಣ ಪಡೆದುಕೊಳ್ಳಲು ಅಗಸ್ಟ ತಿಂಗಳ ಮನೆ ಯಜಮಾನಿಯರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ನಿಮ್ಮ ಹೆಸರಿಗೆ ಚೆಕ್ ಮಾಡಿಕೊಳ್ಳಿ. ಕೆಳಗೆ ಕೊಟ್ಟಿರುವ ನೇರವಾದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://ahara.kar.nic.in/Home/EServices

ನಿಮ್ಮ ಮೊಬೈಲ್ ಫೋನ ಮುಖಪುಟದ ಎಡಭಾಗದಲ್ಲಿ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ ನಂತರ ಕೆಳಗಡೆ e-Ration card ಸೆಲೆಕ್ಟ್ ಮಾಡಿಕೊಂಡು ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

rat

ಇಲ್ಲಿ ತೋರಿಸುತ್ತಿರುವ ಬಾಕ್ಸ್ ನಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತಿ ಮತ್ತು ಗ್ರಾಮವನ್ನು ಸೆಲೆಕ್ಟ್ ಮಾಡಿ Go ಮೇಲೆ ಕ್ಲಿಕ್ ಮಾಡಿ. ಇಲ್ಲಿ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರ ಯಜಮಾನಿಯರ ಕಂಪ್ಲೀಟ್ ಡೀಟೇಲ್ಸ್ ಕಾಣಿಸುತ್ತದೆ

rat1

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

 

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download


Picsart 23 07 16 14 24 41 584 transformed 1

 

WhatsApp Group Join Now
Telegram Group Join Now

Related Posts

One thought on “Gruhalakshmi – 3ನೇ ಕಂತಿನ 2000/- ಹಣ ಈ 26 ಜಿಲ್ಲೆಗಳ ಮಹಿಳೆಯರಿಗೆ ಬಿಡುಗಡೆ. ನಿಮಗೂ ಬಂತಾ ಚೆಕ್ ಮಾಡಿಕೊಳ್ಳಿ

  1. ಮೂರನೇ ಕಂತು ಹಣ ಬಂದಿಲ್ಲ ವಿಜಯನಗರ ಡಿಸ್ಟ್ರಿಕ್ಟ್ ಹಡಗಲಿ ಹೂವಿನ ಹಡಗಲಿ ತಾಲೂಕು ಕುರುವತ್ತಿ ಗ್ರಾಮದಲ್ಲಿ ಲಿಂಗನಾಯಕನಹಳ್ಳಿ

Leave a Reply

Your email address will not be published. Required fields are marked *

error: Content is protected !!