Scholarship – ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ, ಜ.10 ರೊಳಗೆ ಅರ್ಜಿ ಸಲ್ಲಿಸಿ.

metric

ಇದೀಗ ವಿದ್ಯಾರ್ಥಿಗಳಿಗೆ ಒಂದು ಹೊಸ ಸುದ್ದಿ ತಿಳಿದು ಬಂದಿದೆ. ಹಿಂದುಳಿದ ವರ್ಗಗಳ ( Back word class ) ವಿದ್ಯಾರ್ಥಿಗಳು ಮತ್ತು ಪ್ರವರ್ಗ-1 ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು ಬಿಡಲಾಗಿದೆ. ಶುಲ್ಕ ವಿನಾಯಿತಿ ಸೇರಿದಂತೆ ವಿದ್ಯಾಸಿರಿ ಅಂದರೆ ಊಟ ಮತ್ತು ವಸತಿ ಸಹಾಯ ಯೋಜನೆ ಕೂಡ ಇದರ ಅಡಿಯಲ್ಲಿ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಈ ವಿದ್ಯಾರ್ಥಿ ವೇತ(Scholarship)ನಕ್ಕೆ ಕರ್ನಾಟಕದ ವಿಶ್ವ ವಿದ್ಯಾಲಯಗಳ ಅಧೀನಕ್ಕೆ ಒಳಪಡುವ ಸರ್ಕಾರಿ / ಸ್ಥಳೀಯ ಸಂಸ್ಥೆ ಅಥವಾ ಅನುದಾನಿತ ಸಂಸ್ಥೆ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಸಂಸ್ಥೆಗಳಲ್ಲಿ ಮೆಟ್ರಿಕ್-ನಂತರದ ಶಿಕ್ಷಣವನ್ನು ಪಡೆಯುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ ಪಡೆಯಲು ಅರ್ಹರಿರುತ್ತಾರೆ.

ಇದರಲ್ಲಿ ವಿಶೇಷ ಸೂಚನೆ ನೀಡಲಾಗಿದೆ :

ಈ ಒಂದು ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆ ಗೆ ಆಧಾರ್ ಸಂಖ್ಯೆಯನ್ನು ಜೋಡಣೆ (link) ಮಾಡಿಸಿರಬೇಕು.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು :

ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಧಿಸೂಚಿಸಿರುವ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿರಬೇಕು.
ಸರ್ಕಾರದ ವಿದ್ಯಾರ್ಥಿನಿಲಯಗಳಲ್ಲಿ / ವಸತಿ ಕಾಲೇಜುಗಳಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನವನ್ನು
ಪಡೆಯಲು ಅರ್ಹರಿರುವುದಿಲ್ಲ.
ವಾರ್ಷಿಕ ಆದಾಯಮಿತಿ ಪ್ರವರ್ಗ-1ರ ವಿದ್ಯಾರ್ಥಿಗಳಿಗೆ ರೂ.2.50 ಲಕ್ಷ, ಪ್ರವರ್ಗ-2ಎ, 3ಎ, ಮತ್ತು 3ಬಿ ವಿದ್ಯಾರ್ಥಿಗಳಿಗೆ- ರೂ.1.00 ಲಕ್ಷ ರಷ್ಟಿರಬೇಕು.
ಹೊಸ ಮತ್ತು ನವೀಕರಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಹಿಂದಿನ ತರಗತಿಗಳಲ್ಲಿ ನಿಗದಿಪಡಿಸಿರುವ ಕನಿಷ್ಠ ಅಂಕ ಪಟ್ಟಿಯನ್ನು ನೀಡಬೇಕು.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ದಾಖಲೆಗಳು:

ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಪ್ರತಿ
ಹಿಂದಿನ ತರಗತಿಯಲ್ಲಿ ಅಭ್ಯಾಸ ಮಾಡಿದ ಅಂಕ ಪಟ್ಟಿಯ ಪ್ರತಿ
ಎಸ್ ಎಸ್ ಎಲ್ ಸಿ ಅಂಕಪಟ್ಟಿಯ ಪ್ರತಿ
ರಾಷ್ಟ್ರೀಕೃತ ಬ್ಯಾಂಕ್ ಖಾತೆ ಪುಸ್ತಕದ ಪ್ರತಿ
ಆಧಾರ್ ಕಾರ್ಡ್ ಪ್ರತಿ
ರೇಷನ್ ಕಾರ್ಡ್ ಪ್ರತಿ
ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
ಪ್ರಸಕ್ತ ವರ್ಷದ ದಾಖಲಾತಿ ಸಂಖ್ಯೆ
ಕಾಲೇಜು ಪ್ರಾರಂಭವಾದ ದಿನಾಂಕ ಮತ್ತು ಶಾಲೆಯಿಂದ ಕಾಲೇಜಿಗೆ ಇರುವ ಅಂತರ (ಕಿ.ಮೀ) ದ ಮಾಹಿತಿ ನೀಡಬೇಕು.

ಅರ್ಜಿ ಸಲ್ಲಿಕೆ ಮಾಡುವವರು ಈ ಕೆಳಗಿನವುಗಳನ್ನು ಅನುಸರಿಸಿ:

ವಿದ್ಯಾರ್ಥಿವೇತನ ಬಯಸುವ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಸೂಕ್ತ ದಾಖಲೆಗೊಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.

ಪಿ.ಹೆಚ್‌.ಡಿ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಶುಲ್ಕವಿನಾಯಿತಿಗೆ ಅರ್ಜಿ ಆಹ್ವಾನಿಸುವುದಿಲ್ಲ ಹಾಗಾಗಿ ವೆಬ್‌ಸೈಟ್‌ ನಲ್ಲಿಯೇ ಅರ್ಜಿ ಸಲ್ಲಿಸಬೇಕಾಗುತ್ತದೆ. ಮತ್ತು ಪಿ.ಹೆಚ್‌.ಡಿ ಫೆಲೋಶಿಪ್‌ಗೆ ಪ್ರತ್ಯೇಕವಾಗಿ ಅರ್ಜಿಯನ್ನು ಆಹ್ವಾನಿಸಲಾಗುತ್ತದೆ.

ಈ ವಿದ್ಯಾರ್ಥಿ ವೇತನ ಪಡೆಯಲು ಮುಖ್ಯ ವೆಬ್‍ಸೈಟ್ ಆದ https://ssp.postmatric.karnataka.gov.in ಅಥವಾ https://bcwd.karnataka.gov.in ಮೂಲಕ ಅರ್ಜಿಯನ್ನು 2024 ಜನವರಿ,10 ರೊಳಗೆ ಸಲ್ಲಿಸಬೇಕು.

ಹಾಗೆಯೇ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂ: 8050770005. ಇಮೇಲ್ : [email protected] ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: [email protected] ನ್ನು ಸಂಪರ್ಕಿಸಬಹುದಾಗಿದೆ.

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

Picsart 23 07 16 14 24 41 584 transformed 1

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!