ಇದೀಗ ಕರ್ನಾಟಕ ವಿದ್ಯಾರ್ಥಿಗಳಿಗೆ ಒಂದು ಸಿಹಿ ಸುದ್ದಿ ತಿಳಿದು ಬಂದಿದೆ. ಅದೇನೆಂದರೆ 35000 ಸಾವಿರ ಪ್ರೋತ್ಸಾಹ ಧನ ( Priz maoney ) ಅಂದರೆ ಪ್ರೈಜ್ ಮನಿ ದೊರೆಯಲಿದೆ. ಈ ಒಂದು ಪ್ರೋತ್ಸಾಹ ಧನ ಪಡೆಯಲು ಹೇಗೆ ಅರ್ಜಿ ಸಲ್ಲಿಸಬೇಕು?, ಆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ, ಅರ್ಜಿ ಸಲ್ಲಿಸಲು ಇರುವ ದಿನಾಂಕ ದ ಬಗ್ಗೆ ಮಾಹಿತಿ ಈ ಕೆಳಗೆ ನೀಡಲಾಗಿದೆ. ಅದರ ಬಗ್ಗೆ ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಸರ್ಕಾರದ ವತಿಯಿಂದ ಪ್ರೋತ್ಸಾಹ ಧನ :
ಮೆಟ್ರಿಕ್ ಹಾಗೂ ಮೆಟ್ರಿಕ್ ನಂತರದ ಕರ್ನಾಟಕ ರಾಜ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ರೂ.35,000 ವರೆಗೆ ಪ್ರೊತ್ಸಾಹಧನವನ್ನು ನೀಡಲು, ಸರ್ಕಾರದಿಂದ ಅರ್ಜಿಯನ್ನು ಆಹ್ವಾನಿಸಿದ್ದಾರೆ. ಅದಕ್ಕಾಗಿ ಆದಷ್ಟು ಬೇಗ ಈ ಒಂದು ಅರ್ಜಿ ಯನ್ನು ಸಲ್ಲಿಸಿವುದು ಉತ್ತಮ.
ಯಾರಿಗೆಲ್ಲ ಈ ಪ್ರೋತ್ಸಾಹ ಧನ ಸಹಾಯ ಅನ್ವಯವಾಗುತ್ತದೆ ?
ಎಸ್‌ಎಸ್‌ಎಲ್‌ಸಿ ಮತ್ತು ಮೆಟ್ರಿಕ್ ನಂತರದ ವ್ಯಾಸಂಗದಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಪಾಸಾದ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ( ST/ SC Students ) ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯು ನೀಡುವ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಬಂಪರ್ ಪ್ರೋತ್ಸಾಹ ಧನ ಸಿಗಲಿದೆ :
ಈ ಹಿಂದೆ ವಿದ್ಯಾರ್ಥಿಗಳು ಪ್ರಥಮ ಪ್ರಯತ್ನದಲ್ಲಿ ಮತ್ತು ಪ್ರಥಮ ಶ್ರೇಣಿಯಲ್ಲಿ ಪಾಸಾದವರು 60.ರಿಂದ74.99 ಶೇಕಡ ಅಂಕ ಪಡೆದಿದ್ದರೆ ರೂ.7000 ನೀಡುತ್ತಿದ್ದರು. ಮತ್ತು ಶೇಕಡ.75 ಕ್ಕಿಂತ ಹೆಚ್ಚಿನ ಅಂಕ ಪಡೆದಿದ್ದರೆ ಅವರಿಗೆ ರೂ.15,000 ಪ್ರೋತ್ಸಾಹಧನ ನೀಡಲಾಗುತ್ತಿತ್ತು. ಆದರೆ ಇದೀಗ ಬದಲಾವಣೆ ಆಗಿದೆ ಈ ಪ್ರೋತ್ಸಾಹಧನವನ್ನು ರೂ.35,000 ವರೆಗೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇನ್ನೊಂದು ಗುಡ್ ನ್ಯೂಸ್ ಏನೆಂದರೆ ಇಲಾಖೆಯು ಈ ಒಂದು ಪ್ರೋತ್ಸಾಹಧನಕ್ಕೆ ಯಾವುದೇ ಆದಾಯ ಮಿತಿ ನಿಗದಿ ಮಾಡಿಲ್ಲ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಪ್ರೋತ್ಸಾಹ ಧನ ಪಡೆಯಲು ಇರಬೇಕಾದ ಅರ್ಹತೆಗಳು ಈ ಕೆಳಗಿನಂತಿದೆ :
ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮ, ಸ್ನಾತಕೋತ್ತರ ಪದವಿ ಸೇರಿದಂತೆ ಯಾವುದೇ ಶಿಕ್ಷಣವನ್ನು ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಪಾಸಾದವರು ಅರ್ಜಿ ಸಲ್ಲಿಸಬಹುದು.
ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಪಡೆದು ಸಲ್ಲಿಸಬಹುದು.
ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಹೊರತುಪಡಿಸಿ ಹೊರ ರಾಜ್ಯದ ಮುಕ್ತ ವಿವಿಗಳಲ್ಲಿ ಉತ್ತೀರ್ಣರಾಗಿದ್ದರೆ ಅರ್ಹತೆ ಇರುವುದಿಲ್ಲ.
ಪಿಯುಸಿ ನಂತರ ಐಟಿಐ ವ್ಯಾಸಂಗ ಮಾಡಿದ್ದರೆ ಅವರು ಸಹ ಅರ್ಹತೆ ಹೊಂದಿರುವುದಿಲ್ಲ.
ಗರಿಷ್ಠ ವಯೋಮಿತಿ 35 ವರ್ಷ ಮೀರಿರಬಾರದು.
ಪ್ರಾಕೃತಿಕ ವಿಕೋಪ, ಇನ್ನಿತರ ಅನಿಯಂತ್ರಿತ ಕಾರಣಗಳಿಗಾಗಿ ಪರೀಕ್ಷೆ ಬರೆಯದೇ ಕೇವಲ ತರಗತಿ ಅಂಕಗಳ ಆಧಾರದ ಮೇಲೆ ಅಂತಿಮ ವರ್ಷದಲ್ಲಿ ಪಾಸಾಗಿದ್ದರೆ ಅವರು ಅರ್ಹರಲ್ಲ.
ಯಾವ ಕೋರ್ಸ್‌ನವರಿಗೆ ( Course ) ಎಷ್ಟು ಪ್ರೋತ್ಸಾಹಧನ ಎಂದು ಕೆಳಗಿನಂತೆ ತಿಳಿಸಲಾಗಿದೆ :
ದ್ವಿತೀಯ ಪಿಯುಸಿ, 3 ವರ್ಷಗಳ ಪಾಲಿಟೆಕ್ನಿಕ್ ಡಿಪ್ಲೊಮ ಕೋರ್ಸ್‌ನವರಿಗೆ : ರೂ.20,000.
ಪದವಿ ಕೋರ್ಸ್‌ನವರಿಗೆ : ರೂ.25,000.
ಎಂಎ, ಎಂಎಸ್ಸಿ, ಇತರೆ ಸ್ನಾತಕೋತ್ತರ ಪದವಿ ಕೋರ್ಸ್‌ನವರಿಗೆ : ರೂ.30,000.
ಕೃಷಿ, ಇಂಜಿನಿಯರಿಂಗ್, ವೆಟರಿನರಿ, ಮೆಡಿಷನ್ ಕೋರ್ಸ್‌ನವರಿಗೆ : ರೂ.35,000.
ಅರ್ಜಿಯನ್ನು ಸಲ್ಲಿಸುವ ವಿಧಾನ:
ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕಾಗುತ್ತದೆ ಅದಕ್ಕಾಗಿ ಅಧಿಕೃತ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ.
ನಂತರ ಕೇಳಲಾದ ಎಲ್ಲಾ ದಾಖಲೆಗಳನ್ನು ಹಾಗೂ ವಿವರಗಳನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಿ.
ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ದಿನಾಂಕ ( Last Date ) :
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 31-12-2023 ನೀಡಲಾಗಿದೆ. ಆದಷ್ಟು ಬೇಗ ವಿದ್ಯಾರ್ಥಿಗಳು ಈ ಅರ್ಜಿ ಯನ್ನು ಸಲ್ಲಿಸಿ ಪ್ರೋತ್ಸಾಹ ಧನ ಪಡೆಯಬಹುದು.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Sc/st only???
Need all govt facilities to all categories..
It’s great effect to others categories students/people..
[email protected]
I need scholarship that is education perpose
It’s very important to the students
Degreee
[email protected]