Gruhalakshmi – ಇದುವರೆಗೂ ಒಂದು ಕಂತಿನ ಹಣ ಬರದೇ ಇದ್ದವರಿಗೆ ಹೊಸ ಮಾರ್ಗಸೂಚಿ ಪ್ರಕಟ, ಹೀಗೆ ಮಾಡಿ ₹2000/- ಬರುತ್ತೆ

gruhalakshmi payment status

ಕಾಂಗ್ರೆಸ್ ಸರ್ಕಾರ (congress government )ಅಧಿಕಾರಕ್ಕೆ ಬರುವ ಮುನ್ನ ಬಹಳಷ್ಟು ಭರವಸೆಗಳನ್ನು ನೀಡಿತ್ತು. ಅದರಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಪೂರ್ತಿ ಮಾಡುವಲ್ಲಿ ಯಶಸ್ಸು ಕಂಡಿದ್ದು, ಆದರೆ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯ ಸದುಪಯೋಗವನ್ನು ಹಲವು ಮಹಿಳೆಯರು ಪಡೆದುಕೊಳ್ಳುತ್ತಿದ್ದಾರೆ. ಇನ್ನೂ ಕೆಲವರು ತಾಂತ್ರಿಕ ದೋಷಗಳ(technical issues) ಕಾರಣಕ್ಕಾಗಿ  ಖಾತೆಗೆ ಹಣ ಜಮಾ ಆಗಿಲ್ಲ. ಆದ ಕಾರಣ ಇದೀಗ ಸರ್ಕಾರ ಒಂದು ಪರಿಹಾರ ಹುಡುಕಿದೆ ಅದೇನೆಂದು ಈ ಕೆಳಗಡೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಮನೆ ಎರಡನೇ ಯಜಮಾನಿ ಅಥವಾ ಯಜಮಾನನ ಖಾತೆಗೆ ಹಣ ಜಮಾ

ಹಲವು ಮಹಿಳೆಯರ ಖಾತೆಗೆ ಈ ಯೋಜನೆಯ ಹಣ ತಲುಪುತಿಲ್ಲ ಇದಕ್ಕೆ ಹಲವಾರು ಕಾರಣಗಳು ಇದ್ದಾವೆ.ಆಧಾರ್ ಕಾರ್ಡ್ ಹೆಸರು ತಪ್ಪಾಗಿರುವುದು (Aadhar card) ಅಥವಾ ಆಧಾರ್ ಕಾರ್ಡ್ ಬ್ಯಾಂಕ್ ಖಾತೆಯ(bank account ) ಜೊತೆಗೆ ಸರಿಯಾಗಿ ಜೋಡಣೆ ಆಗದಿರುವುದೇ ಈ ಸಮಸ್ಯೆಗೆ ಕಾರಣ.ಅದಕ್ಕಾಗಿ ಸರ್ಕಾರ ಈ ಹಣವನ್ನು ಮನೆಯ ಯಜಮಾನನ ಖಾತೆಗೆ ಹಾಕಬೇಕೆಂದು ನಿರ್ಧರಿಸಿದೆ.
ಮೊದಲು ಆ ಕುಟುಂಬದಲ್ಲಿ ಮತ್ತೊಬ್ಬ ಮಹಿಳೆ ಇದ್ದರೆ ಅವರಿಗೆ ಈ ಯೋಜನೆ ಪ್ರಯೋಜನ ಆಗುವಂತೆ ಮಾಡುತ್ತಾರೆ. ಇಲ್ಲವಾದಲ್ಲಿ ಮನೆಯ ಯಜಮಾನನ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಆದರೆ ಬೇರೆಯವರ ಖಾತೆಗೆ ಹಣ ವರ್ಗಾವಣೆ ಮಾಡಬೇಕು ಅಂದರೆ ಅವರ ಬ್ಯಾಂಕ್ ಖಾತೆಯು ಅಪ್ಡೇಟ್ ಆಗಿರಬೇಕು ಹಾಗೂ ಆಧಾರ್ ನೊಂದಿಗೆ ಜೋಡಣೆಯಾಗಿರಬೇಕು. ಮತ್ತು ರೇಷನ್ ಕಾರ್ಡ್ ಕೆವೈಸಿ (kyc) ಆಗಿರಬೇಕು.

ಡಿಸೆಂಬರ್ ನಲ್ಲೂ ಹಣ ಬಾರದೇ ಇದ್ದರೆ ಈ ಕೆಲಸ ಮಾಡಿ

ಹಣ ಬಾರದೇ ಇದ್ದರೆ ಇನ್ನು ಮುಂದೆ ನಿಮ್ಮ ಖಾತೆಗೆ ಹಣ ಬಾರದೆ ಇದ್ದರೆ ತಕ್ಷಣವೇ ನೀವು ಅದಾಲತ್ ದೂರು ಸಲ್ಲಿಸಬಹುದು. ಗ್ರಾಮ ಪಂಚಾಯತ್ ಸಿಬ್ಬಂದಿ ನಿಮ್ಮ ಮನೆಗೆ ಬಂದು ಖಾತೆಯಲ್ಲಿ ಇರುವ ಸಮಸ್ಯೆಗಳನ್ನು ಪರಿಹಾರ ಮಾಡಲಿದ್ದಾರೆ. ಯಾರ ಖಾತೆಗೆ ಹಣ ಬಂದಿಲ್ಲವೋ ಅವರ ಮನೆ ಬಾಗಿಲಿಗೆ ಅಧಿಕಾರಿಗಳು ಹೋಗಿ ಸಮಸ್ಯೆ ಪರಿಹರಿಸಿ ಖಾತೆಗೆ ಹಣ ಜಮಾ ಆಗುವಂತೆ ಮಾಡುತ್ತಾರೆ, ಅಂಗನವಾಡಿ ಸಹಾಯಕಿಯರು ಹಾಗೂ ಗ್ರಾಮ ಪಂಚಾಯತ್ ಕಡೆಯಿಂದ ಅಧಿಕಾರಿಗಳು ನಿಮ್ಮನ್ನು ಸಂಪರ್ಕಿಸುತ್ತಾರೆ. ಮಹಿಳೆಯರ ಖಾತೆಗೆ ಹಣ ಜಮಾ ಆಗದೆ ಇದ್ದಲ್ಲಿ ತಾವೇ ಸ್ವತಃ ಬ್ಯಾಂಕಿಗೆ ಕರೆದುಕೊಂಡು ಹೋಗಿ ಹಾಗೂ ಮತ್ತಿತರ ದಾಖಲೆಗಳು ಸರಿಯಾಗಿ ಮಾಡಿಕೊಡುತ್ತಾರೆ.ಅದಾಲತ್ ಪ್ರಕ್ರಿಯೆ ಮೂಲಕ ಗ್ರಾಮ ಪಂಚಾಯತ್ ಸಿಬ್ಬಂದಿ ಯಾವ ಮಹಿಳೆಯ ಖಾತೆಗೆ ಹಣ ಜಮಾ ಆಗಿಲ್ಲ ಎನ್ನುವ ವಿವರವನ್ನು ಸರ್ಕಾರಕ್ಕೆ ನೀಡಬೇಕು.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹಲಕ್ಷ್ಮಿ ಅದಾಲತ್ :

ಇಲ್ಲಿಯವರೆಗೂ ಗ್ಯಾರಂಟಿ ಯೋಜನೆಯ ಗೃಹಲಕ್ಷ್ಮಿಗೆ 1.17 ಕೋಟಿ ಫಲಾನುಭವಿಗಳು ನೋಂದಣಿಯಾಗಿದ್ದಾರೆ. ಅದರಲ್ಲಿ, 1.10 ಕೋಟಿ ಫಲಾನುಭವಿಗಳಿಗೆ ಡಿಬಿಟಿ ಮೂಲಕ ನೆರಹಣವನ್ನು ವರ್ಗಾವಣೆ ಮಾಡಲಾಗಿದೆ. ಆದರೆ ಎರಡು ಲಕ್ಷ ಫಲಾನುಭವಿಗಳಿಗೆ ಕೆಲವು ತೊಂದರೆಗಳಿಂದ ಹಣ ವರ್ಗಾವಣೆ ಆಗುತ್ತಿಲ್ಲ, ಆ ತೊಂದರೆಗಳನ್ನು ಬಗೆಹರಿಸುವ ಪ್ರಕ್ರಿಯೆ ನಡೆಯುತ್ತಿದೆ. ಬ್ಯಾಂಕ್ ಖಾತೆಯ(Bank Account) ಮಾಹಿತಿಯಲ್ಲಿ ಗೊಂದಲ, ಆಧಾರ್‌ ಲಿಂಕ್‌ ಆಗದಿರುವುದು ಮೊದಲಾದ ಕಾರಣಗಳಿಂದ ಹಣ ವರ್ಗಾವಣೆಗೆ ತೊಂದರೆಯಾಗಿದೆ. ಅಂಗನವಾಡಿ ಕಾರ್ಯಕರ್ತೆಯರು ಫಲಾನುಭವಿಗಳನ್ನು ಬ್ಯಾಂಕಿಗೇ ಕರೆದೊಯ್ದು ಸಮಸ್ಯೆ ಬಗೆಹರಿಸಲಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು. ಅಷ್ಟೇ ಅಲ್ಲದೆ ಡಿಸೆಂಬರ್ ಒಳಗಾಗಿ ಈ ಎಲ್ಲಾ ಕುಂದುಕೊರತೆಗಳನ್ನು ಬಗೆಹರಿಸಿ ಉಳಿದ ಎರಡು ಲಕ್ಷ ಫಲಾನುಭವಿಗಳಿಗೆ ಹಾಗೂ ಎಲ್ಲರಿಗೂ ಕೂಡ ಗ್ಯಾರೆಂಟಿ ಗೃಹಲಕ್ಷ್ಮಿ ಹಣವನ್ನು ಖಾತೆಗೆ ಬರುವಂತೆ ಮಾಡಲಾಗುವುದು ಎಂದು ಸಿದ್ದರಾಮಯ್ಯನವರು ಸಂದೇಶವನ್ನು ನೀಡಿದ್ದಾರೆ.

ಅಂಚೆ ಕಚೇರಿ ಸಹಾಯ ಪಡೆದುಕೊಳ್ಳಿ..! ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ (IPPB)

ದೇಶಾದ್ಯಂತದ ಸುಮಾರು ಶೇ.77 ಗ್ರಾಮೀಣ ಖಾತೆದಾರರಿಗೆ ಮನೆಯಲ್ಲಿ ಕುಳಿತು ಬ್ಯಾಂಕಿನಿ೦ದ ಹಣವನ್ನು ಹಿಂಪಡೆಯುವ ಅಥವಾ ಜಮಾ ಮಾಡುವ ಅನುಕೂಲವಿದೆ. ಅಂಚೆ ಉಳಿತಾಯ ಖಾತೆಯನ್ನು ಕೇವಲ 5 ನಿಮಿಷದಲ್ಲಿ ತೆರೆಯಬಹುದಾಗಿದೆ. ಕರ್ನಾಟಕದಲ್ಲಿ ಐಪಿಪಿಬಿ 33 ಶಾಖೆಗಳಿವೆ. ಐಪಿಪಿಬಿ ಖಾತೆ ತೆರೆದರೆ ಶೀಘ್ರವೇ ಗೃಹಲಕ್ಷ್ಮಿ ಯೋಜನೆಯ ನೇರ ನಗದು ವರ್ಗಾವಣೆ ಆಗಲಿದೆ ಎನ್ನುತ್ತಾರೆ ಅಧಿಕಾರಿಗಳು. ಇದುವರೆಗೂ ಹಣ ಬಾರದೇ ಇರುವ ಎಷ್ಟೋ ಜನರು ಪೋಸ್ಟ್ ಆಫೀಸ್ ಬ್ಯಾಂಕ್ ನಲ್ಲಿ ಖಾತೆ ತೆರೆದ ಎರಡೇ ದಿನಗಳಲ್ಲಿ ಹಣ ಬಂದಿರುವ ಉದಾಹರಣೆಗಳಿವೆ, ಹಣ ಬರದಿರುವ ಎಷ್ಟೋ ಫಲಾನುಭವಿಗಳ ಬ್ಯಾಂಕಿಂಗ್ ಕೆವೈಸಿನಲ್ಲಿ ಸಮಸ್ಯೆ ಇರುವ ಕಾರಣ DBT ವರ್ಗಾವಣೆ ಕಷ್ಟಕರವಾಗಿದೆ, ಹಾಗಾಗಿ ಇದುವರೆಗೂ ಒಂದು ಕಂತಿನ ಹಣ ಬಂದಿಲ್ಲ ಎನ್ನುವರು ಇದೊಂದು ಪ್ರಯತ್ನ ಮಾಡಿ ನೋಡಿ.

ಸರ್ಕಾರ ಕೊಟ್ಟಿರುವ ಈ ಯೋಜನೆಯ ಸದುಪಯೋಗವನ್ನು ಪ್ರತಿಯೊಂದು ಮಹಿಳೆಯೂ ಪಡೆದುಕೊಳ್ಳ ಬೇಕು ಎನ್ನುವುದೇ ಇದರ ಉದ್ದೇಶ. ಅದಕ್ಕಾಗಿ ಸರ್ಕಾರ ಹಲವಾರು ರೀತಿಯಲ್ಲಿ ಕ್ರಮಗಳು ಹಾಗೂ ಪರಿಹಾರಗಳನ್ನು

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

 

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

WhatsApp Group Join Now
Telegram Group Join Now

Related Posts

2 thoughts on “Gruhalakshmi – ಇದುವರೆಗೂ ಒಂದು ಕಂತಿನ ಹಣ ಬರದೇ ಇದ್ದವರಿಗೆ ಹೊಸ ಮಾರ್ಗಸೂಚಿ ಪ್ರಕಟ, ಹೀಗೆ ಮಾಡಿ ₹2000/- ಬರುತ್ತೆ

Leave a Reply

Your email address will not be published. Required fields are marked *

error: Content is protected !!