ದೋಸೆ ಪ್ರಿಯರೇ ಗಮನಿಸಿ, ಡಿಸೆಂಬರ್ 23 ರಿಂದ ದಾವಣಗೆರೆಯಲ್ಲಿ ಬೆಣ್ಣೆ ದೋಸೆ ಹಬ್ಬ.! ಇಲ್ಲಿದೆ ಡೀಟೇಲ್ಸ್

benne dose habba

ದೋಸೆ ಯಾರಿಗೆ ಇಷ್ಟ ಇಲ್ಲ ಹೇಳಿ, ದೋಸೆ ಎಂದ ತಕ್ಷಣ ನೆನಪಿಗೆ ಬರುವುದು ದಾವಣಗೆರೆ, ಹೌದು, ದೇಶಾದ್ಯಂತ ಹೆಸರು ಮಾಡಿರುವ ದಾವಣಗೆರೆ ಬೆಣ್ಣೆ ದೋಸೆಗೆ ಒಂದು ಬ್ರಾಂಡಿಂಗ್ ನೀಡಲು ದಾವಣಗೆರೆ ಜಿಲ್ಲಾಡಳಿತ ಇದೇ ಬರುವ ಡಿಸೆಂಬರ್ 23ರಿಂದ ಮೂರು ದಿನಗಳ ಕಾಲ ಬೆಣ್ಣೆ ದೋಸೆ ಹಬ್ಬವನ್ನು ದಾವಣಗೆರೆ ನಗರದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ನಿನ್ನೆ ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದೋಸೆ ಉತ್ಸವದ ಆಯೋಜನೆಗೆ ಸಂಬಂಧಿಸಿದಂತೆ ಸಿದ್ಧತೆಯ ಕುರಿತು ಏರ್ಪಡಿಸಲಾದ ಅಧಿಕಾರಿಗಳ ಸಭೆಯಲ್ಲಿ ದೋಸೆ ಉತ್ಸವದ ಬಗ್ಗೆ ಜಿಲ್ಲಾಧಿಕಾರಿಗಳು ಮಾತನಾಡಿ, ಈಗಾಗಲೇ ಎಲ್ಲಾ ಹೋಟೆಲ್ ಮಾಲೀಕರೊಂದಿಗೆ ಚರ್ಚೆ ಮಾಡಲಾಗಿದ್ದು ದಿನಾಂಕ ಮತ್ತು ಸ್ಥಳವನ್ನು ಅಂತಿಮಗೊಳಿಸಲಾಗಿದೆ ಎಂದು ಹೇಳಿದರು.

whatss

ಬೆಣ್ಣೆ ದೋಸೆ ಹಬ್ಬ ಎಲ್ಲಿ ಮತ್ತು ಯಾವಾಗ.?

ದೋಸೆ ಹಬ್ಬಕ್ಕೆ ಎರಡು ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈಗಾಗಲೇ ದೋಸೆ ಹೋಟೆಲ್ ಮಾಲಿಕರೊಂದಿಗೆ ಸಭೆ ನಡೆಸಲಾಗಿದ್ದು 10 ಕ್ಕಿಂತ ಹೆಚ್ಚು ಹೋಟೆಲ್ ಮಾಲಿಕರು ಭಾಗವಹಿಸುವರು. ಡಿಸೆಂಬರ್ 23, 24, 25 ರಂದು ನಗರದ ಎಂಬಿಎ ಮೈದಾನ , ಗ್ಲಾಸ್‍ ಹೌಸ್ ಆವರಣದಲ್ಲಿ ದಾವಣಗೆರೆ ಬೆಣ್ಣೆದೋಸೆ ಹಬ್ಬವನ್ನು ಏರ್ಪಡಿಸಲಾಗಿದೆ. ಮೂರು ದಿನಗಳ ಕಾಲ ಬೆಳಗ್ಗೆ 8 ಗಂಟೆಯಿಂದ ರಾತ್ರಿವರೆಗೆ ದೋಸೆ ಸವಿಯಬಹುದಾಗಿದೆ. ಬೆಣ್ಣೆದೋಸೆ ಹಬ್ಬದಲ್ಲಿ ಸುಮಾರು 5 ಲಕ್ಷ ಜನರು ಭಾಗಿಯಾಗಬೇಕೆಂಬ ಗುರಿ ಹೊಂದಲಾಗಿದೆ ಎಂದರು.

ಬೆಣ್ಣೆದೋಸೆ ಹೋಟೆಲ್‍ಗಳಿಗೆ ಪ್ರಮಾಣ ಪತ್ರ

ದಾವಣಗೆರೆ ದೋಸೆ ಹೋಟೆಲ್‍ಗಳಿಗೆ ಮಾನದಂಡದನ್ವಯ ಮುಂದಿನ ದಿನಗಳಲ್ಲಿ ಅಧಿಕೃತ ಟ್ಯಾಗ್ ನೀಡಲಿದ್ದು ಬೆಣ್ಣೆದೋಸೆ ಹೋಟೆಲ್‍ಗಳಿಗೆ ಗುಣ್ಣಮಟ್ಟದ ಖಾತರಿಯನ್ನು ಒದಗಿಸಲು ಆಹಾರ ಸುರಕ್ಷತಾ ಕಾಯಿದೆಯನ್ವಯ ಪರಿಶೀಲನೆ ನಡೆಸಿ ದೋಸೆಗೆ ಬಳಸುವ ಧಾನ್ಯಗಳು, ಬೆಣ್ಣೆ, ಎಣ್ಣೆ ಮತ್ತು ಇತರೆ ವಸ್ತುಗಳು, ಅಲ್ಲಿನ ಆರೋಗ್ಯವಂತ ಸಿಬ್ಬಂದಿಯ ತಪಾಸಣೆ ಸೇರಿದಂತೆ ಸಾರ್ವಜನಿಕರ ಆರೋಗ್ಯ ಸುರಕ್ಷತೆಯ ಮಾನದಂಡಗಳನ್ನು ಪರಿಶೀಲಿಸಿ ಜಿಲ್ಲಾಡಳಿತದಿಂದ ಬ್ರಾಂಡಿಂಗ್ ಪ್ರಮಾಣ ಪತ್ರವನ್ನು ನೀಡುವ ಮೂಲಕ ಪ್ರವಾಸೋದ್ಯಮಕ್ಕೆ ಈ ಹೋಟೆಲ್‍ಗಳನ್ನು ಜೋಡಣೆ ಮಾಡಲಾಗುತ್ತದೆ ಎಂದರು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!