ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಸಂಪೂರ್ಣವಾಗಿ ನಿಂತು ಹೋಗಿದೆ. ಹಲವು ಜಿಲ್ಲೆಗಳಲ್ಲಿ ಈಗಾಗಲೇ ಭಾರಿ ಚಳಿಯ ವಾತಾವರಣವಿದ್ದು, ಕೆಲವು ಜಿಲ್ಲೆಗಳಲ್ಲಿ ಮಾತ್ರ ಆಗಾಗ ಜಿನುಗು ಮಳೆ ಆಗುತ್ತಿದ್ದು. ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಇದ್ದರೂ ಆಗಾಗ ಜಿನುಗು ಮಳೆಯಾಗುತ್ತಿದೆ ಅಲ್ಲದೇ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ನಗರದಲ್ಲಿ ಕಡಿಮೆಯಾಗುತ್ತಿದೆ. ಹಾಗಾದರೆ ಬನ್ನಿ ರಾಜ್ಯದ ಯಾವ ಯಾವ ಕಡೆಗಳಲ್ಲಿ ಮಳೆ ಬೀಳಲಿದೆ ಮತ್ತು ಚಳಿ ವಾತಾವರಣ ಮುಂದುವರೆಯಲಿದೆ ಎನ್ನುವುದನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Karnataka weather Updates : ಕರ್ನಾಟಕ ಹವಾಮಾನ ವರದಿ:
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಬುಧವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಕೆಲವು ಭಾಗಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಕಂಡುಬರಲಿದೆ. ನಗರದಲ್ಲಿ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಭಾಗದ ಕೆಲವೆಡೆ ಗುರುವಾರ (ಡಿಸೆಂಬರ್ 21) ಮಳೆ ಬೀಳುವ ಮುನ್ಸೂಚನೆಯನ್ನು ನೀಡಿದೆ. ಇನ್ನುಳಿದ ಕಡೆ ಮುಂದಿನ 5 ದಿನಗಳ ಕಾಲ ಬೆಂಗಳೂರು, ಕರಾವಳಿ ಭಾಗದ ಜಿಲ್ಲೆಗಳು, ಉತ್ತರ ಕರ್ನಾಟಕದ ಯಾವ ಭಾಗದಲ್ಲೂ ಮಳೆಯ ಸೂಚನೆ ಇಲ್ಲ ಎಂದು ತಿಳಿಸಿದೆ.
ಎಲ್ಲೆಲ್ಲಿ ಮಳೆಯ ಅಬ್ಬರ :
ಡಿಸೆಂಬರ್ 21ರ ಗುರುವಾರ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರವಾಗಿ ಮಳೆ ಬೀಳುವ ಸಾಧ್ಯತೆಯಿದೆ. ಆದರೆ ಕರಾವಳಿಯ ಮೂರು ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕದಲ್ಲಿ ಒಣ ಹವೆಯಿರಲಿದ್ದು, ಮಳೆಯಾಗುವ ಸೂಚನೆಗಳಿಲ್ಲ ಎಂದು ತಿಳಿಸಿದೆ. ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡಿಸೆಂಬರ್ 20, 21 (ಬುಧವಾರ & ಗುರುವಾರ ) ಮಳೆ ಬೀಳುವ ವಾತಾವರಣ ಇಲ್ಲ. ಈ ಭಾಗದಲ್ಲಿ ಮೋಡ ಕವಿದ ವಾತಾವರಣವೇ ಹೆಚ್ಚು ಕಂಡುಬರಲಿದೆ. ಕೆಲವು ಕಡೆಗಳಲ್ಲಿ ಮುಂಜಾನೆಯೇ ಮಂಜು ಮುಸುಕುವ ಸಾಧ್ಯತೆಗಳು ಅಧಿಕವಾಗಿವೆ.
ಮುಂದಿನ 7 ದಿನಗಳಲ್ಲಿ ತೆಲಂಗಾಣದಲ್ಲಿ ಒಣ ಹವಾಮಾನ ಇರಲಿದೆ. ಡಿಸೆಂಬರ್ 24 ರಂದು ಉತ್ತರ-ದಕ್ಷಿಣ ಕರಾವಳಿ ಆಂಧ್ರಪ್ರದೇಶ, ಯಾನಂ ಮತ್ತು ರಾಯಲಸೀಮಾದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಬಿಹಾರ, ಮೇಘಾಲಯ ಮತ್ತು ತ್ರಿಪುರದಲ್ಲಿ ಸಾಧಾರಣದಿಂದ ಲಘುವಾದ ಮಂಜು ಉಂಟಾಗಬಹುದು. ಮುಂದಿನ ಎರಡು ದಿನಗಳಲ್ಲಿ ವಾಯುವ್ಯ ಮತ್ತು ಮಧ್ಯ ಭಾರತದಲ್ಲಿ ಕನಿಷ್ಠ ತಾಪಮಾನದಲ್ಲಿ ಇಳಿಕೆಯಾಗಬಹುದು.
ರಾಜ್ಯದಲ್ಲಿ ಚಳಿಯ ಪ್ರಮಾಣ ಹೆಚ್ಚಳ :
ಸಾಮಾನ್ಯವಾಗಿ ಚಳಿಗಾಲ ಡಿಸೆಂಬರ್ ತಿಂಗಳ ಮೊದಲವಾರದಲ್ಲಿ ಆರಂಭವಾಗಲಿದ್ದು, ಮೊರನೇ ವಾರನೇ ಚಳಿಯು ಪ್ರಮಾಣ ಹೆಚ್ಚಾಗಿರಲಿದೆ. ಇನ್ನು ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಈ ವರ್ಷ ಕಡಿಮೆ ಚಳಿ ಇರಲಿದ್ದು ಡಿಸೆಂಬರ್ ಅಂತ್ಯ ಮತ್ತು ಜನವರಿಯಲ್ಲಿ ಮಾತ್ರ ಚಳಿ ಹೆಚ್ಚಾಗಿ ಕಂಡುಬರಲಿದೆ ಎಂದು ಹವಮಾನ ಇಲಾಖೆ ತಜ್ಞರು ತಿಳಿಸಿದ್ದಾರೆ
ಬೆಂಗಳೂರಿನಲ್ಲಿ ಭಾರಿ ಚಳಿ:
ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಚಳಿ ಹೆಚ್ಚಾಗಿದೆ. ಚಳಿಯ ವಾತಾವರಣ ಇನ್ನು ಮೂರು ದಿನಗಳ ಕಾಲ ಇರಲಿದ್ದು, ಚಳಿಯ ಜೊತಗೆ ನೆಲಗಾಳಿಯು ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಾರವಾರದಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
ರಾಜ್ಯದಾದ್ಯಂತ ಮುಂದಿನ 2 ವಾರಗಳ ಸಂಚಿತ ಮಳೆಯ ಮುನ್ಸೂಚನೆ ನಕ್ಷೆಗಳು:
Cumulative Rainfall Forecast Maps for the next 2 weeks over the State. pic.twitter.com/rnjowzX9Ik— Karnataka State Natural Disaster Monitoring Centre (@KarnatakaSNDMC) December 19, 2023
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.