ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮೂರು ನಾಲ್ಕು ದಿನಗಳಿಂದ ಚಳಿಯ ವಾತಾವರಣವಿದ್ದು, ಅಲಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಮಳೆಯ ಕುರಿತು ದೈನಂದಿನ ವರದಿ ಬಿಡುಗಡೆ ಮಾಡಿರುವ ಭಾರೆತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರ, ಬೆಂಗಳೂರು ಸೇರಿ ರಾಜ್ಯದಲ್ಲಿ ಚಳಿ ಹೆಚ್ಚಾಗುತ್ತಿದೆ. ಕೆಲವು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಕೆಲ ಜಿಲ್ಲೆಗಳಲ್ಲಿ ಹೆಚ್ಚು ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Karnataka weather Updates : ಕರ್ನಾಟಕ ಹವಾಮಾನ ವರದಿ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿಂದು ಮಳೆ ಆಗುವ ಸಾಧ್ಯತೆ ಇದೆ ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ದಾವಣಗೆರೆ, ಚಿಕ್ಕಮಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಹನಿ ಬೀಳುವ ಸಾಧ್ಯತೆಗಳಿರಲಿವೆ.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜಿಲ್ಲೆಗಳಲ್ಲಿ ಚಳಿ ಜೊತೆ ಮಳೆಯೂ ಬರಲಿದೆ. ಆದ್ರೆ ಮಳೆ ಸಾಧ್ಯತೆ ಕಡಿಮೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಗಲಿನಲ್ಲಿ ಸಾಕಷ್ಟು ಬಿಸಿಲು ಇರುತ್ತದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಸೇರಿದಂತೆ ಹಲವು ಜಿಲ್ಲೆಗಳು ಬೆಳಿಗ್ಗೆ ಬಿಸಿಲಿನ ನಂತರ ರಾತ್ರಿ ಚಳಿ ಇರಲಿದೆ. ಇನ್ನು ಈ ಚಳಿ ಶಿವರಾತ್ರಿಯವರೆಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಒಣಹವೆ ಕಂಡುಬರುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.