ಗೃಹಲಕ್ಷ್ಮಿ ಯೋಜನೆ ಅರ್ಜಿದಾರರಿಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಬುಧವಾರದಿಂದ ಶುಕ್ರವಾರದವರೆಗೆ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಶಿಬಿರ ಆಯೋಜಿಸಲಾಗಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ( Guaranty scheme ) ಒಂದಾದ ಗೃಹಲಕ್ಷ್ಮಿ ಯೋಜನೆಯ ( Gruhalakshmi Scheme ) ಹಣ ಮಹಿಳೆಯರ ಬ್ಯಾಂಕ್ ಖಾತೆ(Bank account)ಗೆ ಬಂದಿಲ್ಲ ಎಂದಾದರೆ, ಅಂತಹ ಯಾವುದೇ ಸಮಸ್ಯೆ ಇದ್ದರೂ ಕೂಡ ಸ್ಥಳದಲ್ಲಿಯೇ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ. ಪಂಚಾಯತ್ ರಾಜ್ ಅಧಿಕಾರಿಗಳ ನೇತೃತ್ವದಲ್ಲಿ ಶಿಬಿರ ನಡೆಯಲಿದ್ದು, ಬಾಪೂಜಿ ಸೇವಾ ಕೇಂದ್ರದ ಕಂಪ್ಯೂಟರ್ ನಿರ್ವಾಹಕರು, ಅಂಗನವಾಡಿ ಕಾರ್ಯಕರ್ತರು, ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವಿಸಸ್ (ಇ.ಡಿ.ಸಿ) ತಂಡಗಳ ಸಿಬ್ಬಂದಿ, ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಹಾಗೂ ಇತರ ಬ್ಯಾಂಕ್‌ಗಳ ಪ್ರತಿನಿಧಿಗಳು ಈ ಶಿಬಿರದಲ್ಲಿ ಭಾಗವಹಿಸುತ್ತಾರೆ. ಈ ಕುರಿತು ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಗೃಹಲಕ್ಷ್ಮಿ ಹಣ ಬಾರದವರಿಗೆ ಸ್ಥಳದಲ್ಲಿಯೇ ಪರಿಹಾರ :
ಹೌದು, ಗೃಹಲಕ್ಷ್ಮಿ ಯೋಜನೆಯಲ್ಲಿ ತಾಂತ್ರಿಕ ಸಮಸ್ಯೆಗಳನ್ನು ( Technical Issues ) ಸರಿ ಪಡಿಸಿ ಸ್ಥಳದಲ್ಲಿಯೇ ಪರಿಹಾರ ಒದಗಿಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಡಿ.27 (ಬುಧವಾರ) ರಿಂದ 29 (ಶುಕ್ರವಾರ) ರವರೆಗೆ ಮೂರು ದಿನಗಳ ಕಾಲ ವಿಶೇಷ ಶಿಬಿರ ಆಯೋಜಿಸಲಾಗಿದೆ. ಅಂದರೆ ಇಂದಿನಿಂದ ಈ ಅವಕಾಶವನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಬಹುದು. ಹಾಗೆಯೇ ಎಲ್ಲ ಸಮಸ್ಯೆಗಳನ್ನು ಶಿಬಿರದಲ್ಲಿಯೇ ಪರಿಹರಿಸಿ ತಾಂತ್ರಿಕ ಸಮಸ್ಯೆ ಎದುರಿಸುತ್ತಿರುವ ಗೃಹಲಕ್ಷ್ಮಿ ಫಲಾನುಭವಿಗಳು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ( Priyank Kharge ) ತಿಳಿಸಿದ್ದಾರೆ.
ಮೂರು ದಿನಗಳ ಈ ಶಿಬಿರದ ಮುಖ್ಯ ಉದ್ದೇಶ ( Purpose ) :
ಗೃಹಲಕ್ಷ್ಮೀ ಯೋಜನೆಯಲ್ಲಿ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗದಿರಲು ಆಧಾರ್ ಜೋಡಣೆ ( Adhar Link ) , ಬ್ಯಾಂಕಿಗೆ ಸಂಬಂಧಿಸಿದ ತೊಂದರೆ ( Bank Issues ), ಇ-ಕೆವೈಸಿ ಅಪ್ಡೆಟ್( E KYC Update ), ಹೊಸ ಬ್ಯಾಂಕ್ ಖಾತೆ ಆರಂಭ ಸೇರಿದಂತೆ ಹಲವು ಸಮಸ್ಯೆಗಳಿದ್ದಾವೆ. ಈ ಎಲ್ಲಾ ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣ ಜಮಾವಣೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದು ಈ ಶಿಬಿರದ ಮುಖ್ಯ ಉದ್ದೇಶವಾಗಿದೆ.
ಯಾರೆಲ್ಲ ಈ ಶಿಬಿರಗಳಲ್ಲಿ ಭಾಗವಹಿಸಲಿದ್ದಾರೆ ?
ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಮೂರು ದಿನಗಳ ಕಾಲ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ಈ ಶಿಬಿರಗಳನ್ನು ಆಯೋಜಿಸಲಾಗಿದ್ದು, ಮುಖ್ಯವಾಗಿ, ಬಾಪೂಜಿ ಸೇವಾ ಕೇಂದ್ರದ ಗಣಕಯಂತ್ರ ನಿರ್ವಾಹಕರು
ಅಂಗನವಾಡಿ ಕಾರ್ಯಕರ್ತರು,
ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವಿಸಸ್ (ಇ.ಡಿ.ಸಿ) ತಂಡಗಳು
ಮತ್ತು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಹಾಗೂ ಇತರೆ ಬ್ಯಾಂಕ್ಗಳ ಪ್ರತಿನಿಧಿಗಳು ಈ ಶಿಬಿರಗಳಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಗೃಹಲಕ್ಷ್ಮಿ ಯೋಜನೆ ಅರ್ಜಿದಾರರಿಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಬುಧವಾರದಿಂದ ಶುಕ್ರವಾರದವರೆಗೆ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಶಿಬಿರ ಆಯೋಜಿಸಲಾಗಿದೆ. ಪಂಚಾಯತ್ ರಾಜ್ ಅಧಿಕಾರಿಗಳ ನೇತೃತ್ವದಲ್ಲಿ ಶಿಬಿರ ನಡೆಯಲಿದ್ದು, ಬಾಪೂಜಿ ಸೇವಾ ಕೇಂದ್ರದ ಕಂಪ್ಯೂಟರ್ ನಿರ್ವಾಹಕರು, ಅಂಗನವಾಡಿ ಕಾರ್ಯಕರ್ತರು,… pic.twitter.com/Qh42QDqZLv
— DIPR Karnataka (@KarnatakaVarthe) December 26, 2023
ಈ ಶಿಬಿರದಲ್ಲಿ ಏನೆಲ್ಲ ಪರಿಶೀಲನೆ ಮಾಡುತ್ತಾರೆ ?
ಗೃಹಲಕ್ಷ್ಮಿ ಫಲಾನುಭವಿಗಳ ಸಮಸ್ಯೆ ನಿವಾರಣೆಗಾಗಿ ಶಿಬಿರದಲ್ಲಿ ಕೆಲವು ಚಟುವಟಿಕೆಗಳನ್ನು ನಡೆಸಲಾಗುತ್ತದೆ, ಅವುಗಲೆಂದರೆ :
ಬ್ಯಾಂಕ್ ಖಾತೆಗಳನ್ನು ತೆರೆಯುವುದು
ಆಧಾರ್ ಜೋಡಣೆ ಮಾಡುವುದು
ಇ-ಕೆವೈಸಿ ಅಪ್ಡೆಟ್
ಗೃಹಲಕ್ಷ್ಮಿಅರ್ಜಿಯ ಸ್ಥಿತಿ ಪರಿಶೀಲನೆ ಮತ್ತು ಇನ್ನಿತರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಶೀಲಿಸಲಾಗುವುದು.
ಶಿಬಿರ ನಡೆಯುವ ಸಮಯ ಮತ್ತು ದಿನಾಂಕ ( Time and Date ) :
ಶಿಬಿರ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಡಿ.27 ರಿಂದ ಡಿ.29ರ ವರೆಗೆ ಪ್ರತಿದಿನ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜರುಗಲಿದೆ. ಎಲ್ಲ ಮಹಿಳೆಯರು ಈ ಶಿಬಿರದಲ್ಲಿ ಭಾಗವಹಿಸಿ ಗೃಹಲಕ್ಷ್ಮಿ ಯೋಜನೆಯಲ್ಲಿ ಏನೇ ಸಮಸ್ಯೆ ಇದ್ದರೂ ಪರಿಹರಿಸಿಕೊಳ್ಳಬೇಕು.
ಈ ಶಿಬಿರದಲ್ಲಿ ಪಾಲ್ಗೊಳ್ಳಲು ಬೇಕಾಗುವ ದಾಖಲೆಗಳ ( Documents ) ವಿವರ :
ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯುವಲ್ಲಿ ತೊಂದರೆ ಎದುರಿಸುತ್ತಿರುವ ಫಲಾನುಭವಿಗಳು ಈ ಕೆಳಗಿನ ದಾಖಲೆಗಳನ್ನು ಕೊಂಡೊಯ್ಯಬೇಕು :
ತಮ್ಮ ಹಾಗೂ ಪತಿಯ ಆಧಾರ್ ಕಾರ್ಡ್
ಪಡಿತರ ಚೀಟಿ
ಬ್ಯಾಂಕ್ ಪಾಸ್ಬುಕ್
ಹಾಗೂ ಈ ಶಿಬಿರದಲ್ಲಿ ಪಾಲ್ಗೊಳ್ಳುವ ಫಲಾನುಭವಿಗಳನ್ನು ಶಿಬಿರಗಳಿಗೆ ಕರೆ ತರುವ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಇದುವರೆಗೂ ಒಂದು ಕಂತಿನ ಹಣ ಬರದೇ ಇದ್ದವರಿಗೆ ಹೊಸ ಮಾರ್ಗಸೂಚಿ ಪ್ರಕಟ, ಹೀಗೆ ಮಾಡಿ ₹2000/- ಬರುತ್ತೆ
- ಮಹಿಳೆಯರಿಗೆ ಗುಡ್ ನ್ಯೂಸ್! ಉಚಿತ ಗ್ಯಾಸ್ ಸಂಪರ್ಕಕ್ಕೆ ಅರ್ಜಿ ಆಹ್ವಾನ
- ಕರ್ನಾಟಕದಲ್ಲಿ ಮೊದಲ ಬಾರಿಗೆ ಅಮೃತ ಭಾರತ್ ಸಂಚಾರ! ಜೊತೆಗೆ 2 ವಂದೇ ಭಾರತ್ ರೈಲಿಗೆ ಚಾಲನೆ
- ರೈತರ ಖಾತೆಗೆ ಬರ ಪರಿಹಾರದ ಮೊದಲನೇ ಕಂತಿನ ಹಣ ₹2000 ಜಮಾ, ಸ್ಟೇಟಸ್ ಹೀಗೆ ಚೆಕ್ ಮಾಡಿ
- LPG ಗ್ಯಾಸ್ ಸಿಲಿಂಡರ್ ಇದ್ದವರಿಗೆ ಭರ್ಜರಿ ಆಫರ್, ತಪ್ಪದೇ ತಿಳಿದುಕೊಳ್ಳಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.