ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಚಳಿಯ ವಾತಾವರಣವಿದ್ದು, ಅಲಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಮಳೆಯ ಕುರಿತು ದೈನಂದಿನ ವರದಿ ಬಿಡುಗಡೆ ಮಾಡಿರುವ ಭಾರೆತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರ, ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇದೇ ಬರುವ ಇಂದಿನಿಂದ ಜನವರಿ 8 ರ ವರೆಗೆ ಆರು ದಿನ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದುಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಿದೆ. ಉಳಿದ ಕಡೆಗಳಲ್ಲಿ ಹಗುರ ಸಾಧಾರಣ ಮಳೆಯಾಗಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Karnataka weather Updates : ಕರ್ನಾಟಕ ಹವಾಮಾನ ವರದಿ
ಇಂದು ಬೆಂಗಳೂರಿನಲ್ಲಿ ರಾತ್ರಿ ವೇಳೆ ಚಳಿ ಇರಲಿದೆ. ವಿವಿಧೆಡೆ ಮುಂಜಾನೆ ಸಮಯದಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದ್ದು, ಚಳಿಯ ತೀವ್ರತೆಯನ್ನು ಹೆಚ್ಚಿಸಲಿದೆ. ಹಗಲು ವೇಳೆ ಒಣಹವೆ ಮುಂದುವರಿಯಲಿದೆ. ಮುಂದಿನ 24 ಗಂಟೆ ಅವಧಿಯಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಹಗಲು ಹೊತ್ತಿನಲ್ಲಿ ಒಣಹವೆ ಮುಂದುವರಿಯಲಿದೆ. ಜನವರಿ 2 ರಿಂದ 8 ರವರೆಗೆ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿಸಾಧಾರಣ ಮಳೆಯಾಗಲಿದೆ. ಜನವರಿ 5 ಮತ್ತು ಜನವರಿ 6 ರಂದು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
2024 ರಲ್ಲಿ ಉತ್ತಮ ಮಳೆ
ಕರ್ನಾಟಕ ರಾಜ್ಯದಲ್ಲಿ ಕಳೆದ ವರ್ಷ ನಿರೀಕ್ಷೆಯಂತೆ ಮಳೆಯಾಗದೆ ಇರುವ ಕಾರಣ ತೀರ್ವ ಬರಗಾಲ ಉಂಟಾಯಿತು. ಆದರೆ 2024ರಲ್ಲಿ ಒಳ್ಳೆಯ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದೇ ಮಾರ್ಚ್ ಎಲ್ ನಿನೋ ಪ್ರಭಾವ ತಗ್ಗಿ ಮುಂಗಾರು ಉತ್ತಮವಾಗಲಿದೆ. ಹೌದು 2023 ಜನವರಿ 1 ರಿಂದ ಡಿಸೆಂಬರ್ 31ರವರೆಗೆ ರಾಜ್ಯದಲ್ಲಿ ವಾಡಿಕೆಯ ಪ್ರಕಾರ, 1153 ಮಿ.ಮೀ. ಮಳೆ ಸುರಿಯಬೇಕು. ಆದರೆ, ಕೇವಲ 872 ಮಿ.ಮೀ. ಮಾತ್ರ ಮಳೆಯಾಗಿದೆ. 19 ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾದರೆ, 12 ಜಿಲ್ಲೆಗಧಿಳಲ್ಲಿಸಾಮಾನ್ಯ ಮಳೆ ಕೊರತೆ ಉಂಟಾಗಿದೆ. ಅತಿ ಹೆಚ್ಚು ಮಳೆಯಾಗುವ ಕರಾವಳಿಯಲ್ಲಿ ಶೇ. 19ರಷ್ಟು ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಶೇ.35ರಷ್ಟು ಮಳೆ ಕೊರತೆ ಉಂಟಾಗಿದೆ.
2023 ರಲ್ಲಿ ಬೆಂಗಳೂರಿನಲ್ಲಿ ಕೇವಲ 1020.2 ಮಿಮೀ ಮಳೆಯಾಗಿದೆ. ಇದು ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕನಿಷ್ಠ ವಾರ್ಷಿಕ ಮಳೆ. ಜೂನ್ ಮತ್ತು ಸೆಪ್ಟೆಂಬರ್ ನಡುವೆ (ನೈಋತ್ಯ ಮಾನ್ಸೂನ್) 474.6 ಮಿಮೀ ಮಳೆ ದಾಖಲಾಗಿದ್ದರೆ, ಅಕ್ಟೋಬರ್ ಮತ್ತು ನವೆಂಬರ್ನಲ್ಲಿ (ಈಶಾನ್ಯ ಮಾನ್ಸೂನ್) 202.9 ಮಿಮೀ ಮಳೆ ದಾಖಲಾಗಿದೆ. ಇಡೀ ವರ್ಷ, ಬೆಂಗಳೂರು ನಗರದಲ್ಲಿ ಕೇವಲ 54 ದಿನ ಮಾತ್ರ ಮಳೆ ಬಿದ್ದಿತ್ತು ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ