ಬರ ಪರಿಹಾರ ನಿರೀಕ್ಷೆಯಲ್ಲಿರುವ ರೈತರಿಗೆ ಗುಡ್ ನ್ಯೂಸ್, ಕರ್ನಾಟಕ ಸರ್ಕಾರ ಮುಂದಿನ ಒಂದು ವಾರದಲ್ಲಿ ಬರೋಬ್ಬರಿ 30 ಲಕ್ಷ ರೈತರಿಗೆ ಬೆಳೆ ಹಾನಿ ಪರಿಹಾರ ಮೊದಲ ಕಂತಿನ 2,000 ಹಣವನ್ನು ಬಿಡುಗಡೆ ಮಾಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ಕೆಳಗಿನ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ರೈತರಿಗೆ ಬರ ಪರಿಹಾರ
ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು 2023 ರ ಮುಂಗಾರು ಹಂಗಾಮಿನಲ್ಲಿ 220ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಣೆ ಮಾಡಿದೆ. ಬರ ಪರಿಹಾರ ನೀಡಲು ಕೇಂದ್ರ ಅಧ್ಯಾಯನ ತಂಡ ಬಂದು ಹೋಗಿದ್ದು, ರೈತರಿಗೆ ಪರಿಹಾರ ನೀಡಬೇಕಿದೆ. ರಾಜ್ಯ ಸರಕಾರದಿಂದ ರೈತರಿಗೆ ತುರ್ತು ಅರ್ಥಿಕವಾಗಿ ನೆರವು ನೀಡುವ ನಿಟ್ಟಿನಲ್ಲಿ ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ ರೂ 2,000 ವರೆಗೆ ಬೆಳೆ ಹಾನಿ ಪರಿಹಾರದ ಹಣವನ್ನು ಬಿಡುಗಡೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಶುಕ್ರವಾರ ಬೆಂಗಳೂರಿನ ವಿಕಾಸಸೌಧದಲ್ಲಿ ಜರುಗಿದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಉಪ ವಿಭಾಗಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸಚಿವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು. ರಾಜ್ಯ ಸರ್ಕಾರ 223 ತಾಲ್ಲೂಕುಗಳನ್ನು ಬರಪೀಡಿತ ಮತ್ತು 48.19 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ನಷ್ಟ ಎಂದು ಘೋಷಿಸಿದ್ದು, ಸೆಪ್ಟೆಂಬರ್ 2023 ರಲ್ಲಿ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೂ ಮನವಿ ಮಾಡಿದೆ. ಆದರೆ, ಕೇಂದ್ರ ಸರ್ಕಾರ ಪರಿಹಾರದ ಹಣವನ್ನು ಬಿಡುಗಡೆ ಮಾಡಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ 223 ಬರಪೀಡಿತ ತಾಲೂಕು ಘೋಷಣೆ
ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಎನ್‌ಡಿಆರ್‌ಎಫ್ ಮಾರ್ಗಸೂಚಿ ಅನ್ವಯ 18,177.44 ಕೋಟಿ ರೂ. ಪರಿಹಾರ ನೀಡುವಂತೆ ಸೆಪ್ಟೆಂಬರ್ 22 ರಂದೇ ಕೇಂದ್ರ ಕೃಷಿ ಸಚಿವಾಲಯಕ್ಕೆ ಮನವಿ ಸಲ್ಲಿಸಲಾಗಿದೆ.
ಒಂದು ವಾರದಲ್ಲಿ ಹಣ ಬಿಡುಗಡೆ
ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ”ಒಂದು ವಾರದೊಳಗೆ ಕನಿಷ್ಠ 30 ಲಕ್ಷ ರೈತರಿಗೆ ಬೆಳೆ ಪರಿಹಾರದ ಮೊದಲ ಕಂತಿನ ಹಣ ತಲುಪಲಿದೆ. ಪರಿಹಾರದ ಹಣವನ್ನು ಶೀಘ್ರ ರೈತರಿಗೆ ತಲುಪಿಸಲು ಕ್ರಮ ವಹಿಸುವಂತೆ ಡಿಸಿಗಳಿಗೆ ಸೂಚಿಸಲಾಗಿದೆ,” ಎಂದು ತಿಳಿಸಿದ್ದಾರೆ. “ಫ್ರೂಟ್ಸ್ ತಂತ್ರಾಂಶಕ್ಕೆ ಹೊಸದಾಗಿ 7.7 ಲಕ್ಷ ರೈತರ 34 ಲಕ್ಷ ಭೂ ಹಿಡುವಳಿ ಸೇರಿಸಲಾಗಿದೆ. ಫ್ರೂಟ್ಸ್‌ನಲ್ಲಿ ಶೇ. 61ರಷ್ಟಿದ್ದ ರೈತರ ವಿವರಗಳು ಶೇ. 78ಕ್ಕೆ ತಲುಪಿದೆ. ಇನ್ನೂ ಅರ್ಹ ರೈತರನ್ನು ಸೇರ್ಪಡೆ ಮಾಡಲು ಸೂಚಿಸಲಾಗಿದೆ,” ಎಂದು ಕಂದಾಯ ಸಚಿವರು ಮಾಹಿತಿ ನೀಡಿದರು.
ಯಾರದ್ದೋ ಭೂಮಿಗೆ ಬೇರೆ ಯಾರದ್ದೋ ಖಾತೆ
ಈ ಹಿಂದಿನ ಸಾಲಿನಲ್ಲಿ ಬೆಳೆ ಹಾನಿ ಪರಿಹಾರ ತಲುಪಿಸುವುದರಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಸಚಿವರು ಹೇಳಿದ್ದಾರೆ. ಕಡೂರು ಒಂದೇ ತಾಲೂಕಿನಲ್ಲಿ 6 ಕೋಟಿ ರೂ. ಪರಿಹಾರದ ಹಣ ಅಕ್ರಮ ಎಸಗಲಾಗಿದೆ. ಹಣ ದುರ್ಬಳಕೆಯಾದವರ ಪಟ್ಟಿ ನನ್ನ ಬಳಿ ಇದೆ. ಹಾನಗಲ್, ಶಿಗ್ಗಾಂವ್‌ನಲ್ಲೂ ಇಂತಹ ಪ್ರಕರಣಗಳು ಕಂಡುಬಂದಿದೆ. ಯಾರದ್ದೋ ಭೂಮಿಗೆ ಬೇರೆ ಯಾರದ್ದೋ ಖಾತೆಗೆ ಹಣ ಜಮಾ ಮಾಡಿ ಅದನ್ನು ಮರು ವಸೂಲಿ ಮಾಡಿಕೊಂಡಿರುವ ಬಗ್ಗೆಯೂ ವ್ಯಾಪಕ ದೂರುಗಳು ಬಂದಿವೆ. ಈ ಬಗ್ಗೆ ತನಿಖೆ ನಡೆಸಲಾಗುವುದು. ಇದು ಮುಂದುವರಿಯಬಾರದು ಎಂಬ ಕಾರಣಕ್ಕೆ ಈ ಬಾರಿ ಫ್ರೂಟ್ಸ್ ಮೂಲಕ ಬೆಳೆ ಪರಿಹಾರ ವಿತರಣೆ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವರು ವಿವರಿಸಿದ್ದಾರೆ.
ಅರ್ಹ ರೈತರ ಪಟ್ಟಿ ಹೀಗೆ ಚೆಕ್ ಮಾಡಿ
ರೈತರ ಅರ್ಹ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ನಿಮ್ಮ ಹೆಸರು ಈ ಪಟ್ಟಿಯಲ್ಲಿ ಇದೆಯಾ ಎಂದು ಚೆಕ್ ಮಾಡಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://fruitspmk.karnataka.gov.in/MISReport/GetDetailsByAadhaar.aspx
ನಿಮ್ಮ ಆಧಾರ್ ನಂಬರ್ ಹಾಕಿ,search ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ FID ನಂಬರ್ ಕಾಣಿಸಿಕೊಳ್ಳುತ್ತದೆ. ಇಲ್ಲಿ ನಿಮ್ಮ FID ನಂಬರ್ ದೊರೆತರೆ ನಿಮಗೆ ಬರ ಪರಿಹಾರ ಧನ ಸಿಗಲಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.