ರಾಜ್ಯದ ಆರು ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದ್ದಾರೆ. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಹತೆ ಹೊಂದಿದವರು ಅಭ್ಯರ್ಥಿಗಳು ಇದೇ ಬರುವ ಫೆಬ್ರವರಿ 5 ರೊಳಗೆ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ :
ಹಾಗೆ ದಿನಾಂಕ 27-10-2022ರ ಆದೇಶದಲ್ಲಿ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರು ಮಾನ್ಯ ಇಲಾಖಾ ಸಚಿವರು ರಾಜ್ಯದಲ್ಲಿನ ಅಂಗನವಾಡಿ ಕೇಂದ್ರಗಳಿಗೆ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರನ್ನು ಆಯ್ಕೆ ಮಾಡಲು ದಿನಾಂಕ 23-09-2017 ರ ಮಾರ್ಗಸೂಚಿಗಳನ್ನು ( Guidelines ) ಮತ್ತು ಅರ್ಹತಾ ಮಾನದಂಡಗಳನ್ನು ಪರಿಷ್ಕರಿಸಲು ಕ್ರಮ ಕೈಗೊಳ್ಳಲು ಸೂಚಿಸಿರುವ ಹಿನ್ನಲೆಯಲ್ಲಿ, ಅಂಗನವಾಡಿ ಕಾರ್ಯಕರ್ತೆಯರು /ಸಹಾಯಕಿಯರನ್ನು ಆಯ್ಕೆ ಮಾಡಲು ಹೊರಡಿಸಿದ್ದ ಆದೇಶಗಳಲ್ಲಿ ಕೆಲವು ಸೇರ್ಪಡೆಗಳು ಹಾಗೂ ತಿದ್ದುಪಡಿಗಳನ್ನು ಮಾಡಿರುವುದರಿಂದ ಅವುಗಳನ್ನು ಅಳವಡಿಸಿಕೊಂಡು ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ(Anganwadi workers and helpers) ನೇಮಕಾತಿಯನ್ನು ಆನ್ಲೈನ್ ಮೂಲಕ ಮಾಡಲು ಅನುಕೂಲವಾಗುವಂತೆ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುತ್ತಾರೆ.
ವಿದ್ಯಾರ್ಹತೆ ಮತ್ತು ಮಾನದಂಡ:
ಅರ್ಹತೆ -ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ವಯೋಮಿತಿ -19 ರಿಂದ 35 ವರ್ಷದೊಳಗಿನ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಬಹುದು. ಹಾಗೂ ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಕಡಿತಗೊಳಿಸಲಾಗುವುದು.
ಸ್ಥಳೀಯತೆ –
(1)ಗ್ರಾಮಾಂತರ ಪ್ರದೇಶದ ಕೇಂದ್ರವಾದಲ್ಲಿ ಆಯಾ ಕಂದಾಯ ಗ್ರಾಮದಲ್ಲಿ ವಾಸ್ತವ್ಯ ಹೊಂದಿರಬೇಕು. ಒಂದು ವೇಳೆ ಹೊಂದಿಲ್ಲ ಎಂದರೆ ಸಂಬಂಧಿಸಿದ ವಾಸ್ತವ್ಯ ಪ್ರಮಾಣ ಪತ್ರವನ್ನು ಸಾಕ್ಷಮ್ ಪ್ರಾಧಿಕಾರದಿಂದ ಪಡೆಯಬೇಕು.
(2)ನಗರ ಪ್ರದೇಶ ಅಂಗನವಾಡಿ ಕೇಂದ್ರವಾದಲ್ಲಿ ಆಯಾ ಕಂದಾಯ ವಾರ್ಡ್ ನಲ್ಲಿ ವಾಸ್ತವ್ಯ ಹೊಂದಿರಬೇಕು ಹಾಗೂ ವಾಸ್ತವ್ಯ ಪ್ರಮಾಣ ಪತ್ರವನ್ನು ಸಕ್ಷಮ ಪ್ರಾಧಿಕಾರದಿಂದ ಪಡೆದಿರಬೇಕು. (ಚುನಾವಣೆಯ ವಾರ್ಡ್ ಗಳನ್ನು ಪರಿಗಣಿಸುವಂತಿಲ್ಲ )
(3)ಸ್ಥಳೀಯರು ಎಂದು ದೃಡೀಕರಿಸಲ್ಪಡಬೇಕು ಅದಕ್ಕಾಗಿ ಪೂರಕ ದಾಖಲೆಗಳಾದ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿಗಳನ್ನು ಹೊಂದಿರಬೇಕು.
ಉದ್ಯೋಗ ಸ್ಥಳ :
ಬೆಂಗಳೂರು ನಗರ ಜಿಲ್ಲೆ,
ಬೆಂಗಳೂರು ಗ್ರಾಮಾಂತರ ಜಿಲ್ಲೆ
ಹಾವೇರಿ,
ತುಮಕೂರು
ಬೀದರ್
ಬೆಳಗಾವಿ
ಅಂಗನವಾಡಿ ಕಾರ್ಯಕರ್ತೆಯರ ವಿದ್ಯಾರ್ಹತೆ ( Education Qualifications ) :
ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು, ಎಸ್. ಎಸ್.ಎಲ್. ಸಿ.ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
ಹಾಗೂ ಸರ್ಕಾರದ ಅಂಗೀಕೃತ ಸಂಸ್ಥೆಗಳಿಂದ D. S. E. R. T.ಯಿಂದ ECCE ಡಿಪ್ಲೋಮೊ ಕೋರ್ಸ್, JOC ಕೋರ್ಸ್, NTT ಕೋರ್ಸ್ ಗಳು ಹಾಗೂ ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಿಸಿದ ಕೋರ್ಸ್ ಗಳನ್ನು ಮಾಡಿರಬೇಕು ಹಾಗೂ ಇವರಿಗೆ ಬೋನಸ್ +5 ಅಂಕಗಳನ್ನು ನೀಡುತ್ತಾರೆ.
ಅಂಗನವಾಡಿ ಸಹಾಯಕಿಯರ ವಿದ್ಯಾರ್ಹತೆ ( Education Qualifications ) :
ಕನಿಷ್ಠ ವಿದ್ಯಾರ್ಹತೆ ಎಸ್. ಎಸ್. ಎಲ್. ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ಕರ್ನಾಟಕ ರಾಜ್ಯ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಮುಕ್ತ ವಿದ್ಯಾಲಯಗಳಲ್ಲಿ ಎಸ್. ಎಸ್. ಎಲ್. ಸಿ. ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕನ್ನಡ ಹಾಗೂ ಸಾಮಾನ್ಯ ಗಣಿತ ಮತ್ತು ಸಮಾಜ ಶಾಸ್ತ್ರ ಹಾಗೂ ಸಮಾಜ ವಿಜ್ಞಾನವನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿರಬೇಕು.
ಬೇರೆ ರಾಜ್ಯದವರು ಆಗಿದ್ದರೂ ಕೂಡ ಕನ್ನಡ ಭಾಷೆಯನ್ನು ಮೊದಲ ಅಥವಾ ದ್ವಿತೀಯ ಭಾಷೆಯಾಗಿ ಓದಿರಬೇಕು. ಹಾಗೂ ಗರಿಷ್ಠ ಅಂಕಗಳಲ್ಲಿ ಕನಿಷ್ಠ ಅಂಕಗಳನ್ನಾದರೂ ಪಡೆದಿರಬೇಕು.ಹಾಗೂ ಕನ್ನಡ ಭಾಷೆಯ ಮೇಲೆ ಒಳ್ಳೆಯ ಹಿಡಿತ ಇರಬೇಕು ಈ ಆಧಾರದ ಮೇಲೆ ಅಭ್ಯರ್ಥಿಯನ್ನು ಸಮಿತಿ ನಿರ್ಧರಿಸುವುದು.
ಆನ್ ಲೈನ್ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳ ( Important Documents ) ವಿವರ :
– ಜನನ ಪ್ರಮಾಣ ಪತ್ರ/ಜನ್ಮ ದಿನಾಂಕ ಇರುವ S.S.L.C.ಅಂಕಪಟ್ಟಿ.
– ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ.
– ತಹಶೀಲ್ದಾರರು/ಉಪ ತಹಶೀಲ್ಮಾರರಿಂದ ಪಡೆದ ಮೂರು 3 ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ
– ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ.
– ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪ್ರಮಾಣ ಪತ್ರ (ವಿಧವಾ ವೇತನದ ದೃಢಿಕರಣವನ್ನು ಪರಿಗಣಿಸುವಂತಿಲ್ಲ).
– ಅಂಗವಿಕಲತೆ ಪ್ರಮಾಣಪತ್ರ (ಅಂಗವಿಕಲ ವೇತನದ ದೃಢೀಕರಣವನ್ನು ಪರಿಗಣಿಸುವಂತಿಲ್ಲ ).
– ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿರಬೇಕು).
– ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಸಲ್ಪಟ್ಟ ಮಾಜಿ ದೇವದಾಸಿಯರ ಸಮೀಕ್ಷೆಯ ಪಟ್ಟಿಯಲ್ಲಿರುವ ಮಾಜಿ ದೇವದಾಸಿಯರ ಮಕ್ಕಳು ಎಂಬುದರ ಬಗ್ಗೆ, ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
– ಇಲಾಖೆಯ ಸುಧಾರಣಾ ಸಂಸ್ಥೆ /ರಾಜ್ಯ ಮಹಿಳಾ ನಿಲಯಗಳ ನಿವಾಸಿಗಳು ಕನಿಷ್ಠ 3 ವರ್ಷ ಸಂಸ್ಥೆಯಲ್ಲಿರಬೇಕು. ಹಾಗೂ ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಂದ ಪಡೆದ ನಿವಾಸಿ ಪ್ರಮಾಣ ಪತ್ರ.
– ಯೋಜನಾ ನಿರಾಶ್ರಿತರ ಬಗ್ಗೆ, ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರ.
– ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ/ರೇಷನ್ ಕಾರ್ಡ್/ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆದ ದೃಢೀಕರಣ ಪತ್ರ.
ಎಲ್ಲಾ ದಾಖಲಾತಿಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಣ ಮಾಡಿಸಿ ಸಲ್ಲಿಸುವುದು.
ಅರ್ಜಿ ಸಲ್ಲಿಸುವ ವಿಧಾನ :
ಹಂತ 1: ಮೊದಲಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕೃತ ಜಾಲತಾಣಕ್ಕೆ ತೆರಳಬೇಕು ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ
ಹಂತ 2: ನಂತರ ಜಿಲ್ಲೆ ಹಾಗೂ ಇನ್ನಿತರ ಕೇಳಲಾದ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಿ.
ಹಂತ 3: ನೀವು ಯಾವ ಪೋಸ್ಟಿಗೆ ಅರ್ಜಿಯನ್ನು ಸಲ್ಲಿಸುತ್ತಿದ್ದೀರಾ ಎಂಬುದರ ಆಯ್ಕೆಯನ್ನು ಮಾಡಿಕೊಳ್ಳಿ
ಹಂತ 4: ಜಾತಿ ಪ್ರಮಾಣ ಪತ್ರ ಹಾಗೂ ಇನ್ನಿತರ ದಾಖಲೆಗಳನ್ನು ಅಟ್ಯಾಚ್ ಮಾಡಿ
ಹಂತ 5: ಕೊನೆಯದಾಗಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ:
5 ಫೆಬ್ರವರಿ, 2024
ಸರ್ಕಾರದ ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಇದುವರೆಗೂ ಒಂದು ಕಂತಿನ ಹಣ ಬರದೇ ಇದ್ದವರಿಗೆ ಹೊಸ ಮಾರ್ಗಸೂಚಿ ಪ್ರಕಟ, ಹೀಗೆ ಮಾಡಿ ₹2000/- ಬರುತ್ತೆ
- ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ! ನಿಮ್ಮ ಅರ್ಜಿ ಹೀಗೆ ಸಲ್ಲಿಸಿ
- ಇನ್ನೂ ಮುಂದೆ 2000/- ರೂ. ಇವರಿಗೆ ಬರುವುದಿಲ್ಲ, ಜನವರಿ ತಿಂಗಳ ಅಕ್ರಮ ಬಿಪಿಎಲ್ ಕಾರ್ಡ್ ಪತ್ತೆ, ರದ್ದಾದ ಪಟ್ಟಿ ಬಿಡುಗಡೆ.!
- ಅಕ್ರಮ ಸಕ್ರಮದ ಈ 7000 ರೈತರಿಗೆ ಸಿಗಲಿದೆ ಸರ್ಕಾರಿ ಭೂಮಿ, ಇಲ್ಲಿದೆ ಸಂಪೂರ್ಣ ಮಾಹಿತಿ.
- ಮನೇಲಿ ₹ 2000 ನೋಟು ಇದ್ದವರಿಗೆ ʻRBIʼ ಬಿಗ್ ರಿಲೀಫ್, ನೋಟು ಬದಲಾವಣೆಗೆ ಇಲ್ಲಿ ಅವಕಾಶ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.