ಇದೀಗ ಹಿಂದುಳಿದ ವರ್ಗದ ( Backward classes ) ವಿದ್ಯಾರ್ಥಿಗಳಿಗೆ ಒಂದು ಗುಡ್ ನ್ಯೂಸ್ ( good news ) ತಿಳಿದು ಬಂದಿದೆ. ಹೌದು, ಮೆಟ್ರಿಕ್ ನಂತರದ ( After metric ) ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ(scholarship)ಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಮತ್ತೆ ಇದೀಗ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
2023- 24 ನೇ ಮೆಟ್ರಿಕ್ ನಂತರದ ಕೋರ್ಸ್ ಗಳ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ( Online ) ಮೂಲಕ ಅರ್ಜಿ ಆಹ್ವಾನ :
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, 2023-24ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ, ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ ( Last date for Applying Application ) :
ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕವನ್ನು ಮುಂದಿನ ತಿಂಗಳು ಫೆಬ್ರವರಿ 15 ರ ವರೆಗೆ ಅನುಮತಿ ನೀಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಈ ಮೂಲಕ ಪ್ರಕಟಣೆ ಹೊರಡಿಸಿದೆ.
ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಿದ ಉದ್ದೇಶ ( Purpose of date extend ) :
ಈ ಹಿಂದೆ ಅರ್ಜಿ ಸಲ್ಲಿಕೆಗೆ ನೀಡಿದ ಗಡುವು ಪೂರ್ಣ ಗೊಂಡಿದ್ದು, ಮತ್ತೆ ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸುವಂತೆ ಪೋಷಕರು, ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದಾರೆ. ಈ ಉದ್ದೇಶದಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಅವರ ಆರ್ಥಿಕ ಪರಿಸ್ಥಿಯನ್ನು ಗಮನದಲ್ಲಿಟ್ಟುಕೊಂಡು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಫೆಬ್ರವರಿ 15 ರ ತನಕ ವಿಸ್ತರಿಸಲಾಗಿದೆ.
ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಪಡೆಯಲು ಇರಬೇಕಾದ ಅರ್ಹತೆಗಳು ( Qualifications ) :
ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲುಅರ್ಜಿದಾರರು ಹಿಂದುಳಿದ ಸಮುದಾಯದವರಾಗಿರಬೇಕು.
11 ನೇ ತರಗತಿ ಅಥವಾ ಇನ್ನಾವುದೇ ಕೋರ್ಸ್ ನಲ್ಲಿ ವ್ಯಾಸಂಗ ಮಾಡುತ್ತಿರಬೇಕು.
ಬಾಲಕಿಯರಿಗೆ 30% ಮೀಸಲಾತಿ ಇದೆ.
ಅರ್ಹತಾ ಪರೀಕ್ಷೆಯಲ್ಲಿ, ಅಭ್ಯರ್ಥಿಯು ಕನಿಷ್ಠ 50% ಅಂಕಗಳನ್ನು ಗಳಿಸಬೇಕು.
ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯವು 2 ಲಕ್ಷಕ್ಕಿಂತ ಹೆಚ್ಚಿರಬಾರದು.
ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿವೇತನಕ್ಕೆ ಅಗತ್ಯವಿರುವ ಮುಖ್ಯ ಸಲ್ಲಿಸಬೇಕಾದ ಮುಖ್ಯ ದಾಖಲೆಗಳ ವಿವರ ( Important Documents ) :
ವಿದ್ಯಾರ್ಥಿಯ ಮೊಬೈಲ್ ಸಂಖ್ಯೆ
ವಿದ್ಯಾರ್ಥಿಗಳ SATS ಸಂಖ್ಯೆ / ಕಾಲೇಜು ನೋಂದಣಿ ಸಂಖ್ಯೆ
ವಿದ್ಯಾರ್ಥಿ ಮತ್ತು ಪೋಷಕರ ಆಧಾರ್ ಸಂಖ್ಯೆ
ರಾಷ್ಟ್ರೀಯ ವಿದ್ಯಾರ್ಥಿ ವೇತನ ಪೋರ್ಟಲ್ಲಿನ ದಾಖಲಾತಿ ಸಂಖ್ಯೆ ( ಅಲ್ಪಸಂಖ್ಯಾತಿಯ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯ ) ಸೂಚನೆ: ಅಲ್ಪಸಂಖ್ಯಾತ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಮೊದಲು ರಾಷ್ಟ್ರೀಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.
ವಿದ್ಯಾರ್ಥಿಯ ಹೆಸರಿನಲ್ಲಿರುವ ಆರ್ ಡಿ ಇಂದ ಶುರುವಾಗುವ ಜಾತಿ ಅಥವಾ ಆದಾಯ ಅಥವಾ ಆರ್ಥಿಕವಾಗಿ ದುರ್ಬಲ ವಿಭಾಗದ ( ಬ್ರಾಹ್ಮಣ ವರ್ಗದ ವಿದ್ಯಾರ್ಥಿಗಳಿಗೆ ಮಾತ್ರ ) ಪ್ರಮಾಣ ಪತ್ರಗಳ ಸಂಖ್ಯೆ.
ಇ ದೃಡಿಕರಿಸಿದ ದಾಖಲೆಗಳ ಸಂಖ್ಯೆಗಳು
ಅಂಕಪಟ್ಟಿ
ಶುಲ್ಕ ರಶೀದಿ
ಅಂಗವಿಕಲ ವಿದ್ಯಾರ್ಥಿಯಾಗಿದ್ದಲ್ಲಿ ಭಾರತ ಸರ್ಕಾರದಿಂದ ನೀಡಿರುವ ಅಂಗೈಯಲ್ಲಿ ಅಂಗವಿಕಲ ಕಾರ್ಡ್ ಸಂಖ್ಯೆ
ಕರ್ನಾಟಕ ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ರಶೀದಿಯನ್ನು ಇ-ದೃಢೀಕರಣವನ್ನು ಮಾಡಿಸುವ ಅಗತ್ಯವಿರುವುದಿಲ್ಲ.
ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ವಿಧಾನ ( Steps for Applying Application ) :
ಹಂತ1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ ssp.karnataka.gov.in ಗೆ ಭೇಟಿ ನೀಡಿ.
ಹಂತ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಖಾತೆಯನ್ನು ರಚಿಸುವ ಆಯ್ಕೆ ಮೇಲೆ ಕ್ಲಿಕ್ ಮಾಡಿ.
ಹಂತ 3: ನಿಮ್ಮ ಆಧಾರ್ ಸಂಖ್ಯೆ ಮತ್ತು ನಿಮ್ಮ ಹೆಸರು ಆಧಾರ್ ನಲ್ಲಿರುವಂತೆ ಇಲ್ಲಿ ನಮೂದಿಸಿ, ಲಿಂಗವನ್ನು ಆಯ್ಕೆ ಮಾಡಿ, ಕ್ಯಾಪ್ಚಾ ಕೊಡನ್ನು ನಮೂದಿಸಿ ಅರ್ಜಿಯನ್ನು ಮುಂದುವರಿಸಿ
ಹಂತ 4: ನಿಮ್ಮ ಪಾಲಕ ಅಥವಾ ಪೋಷಕರ ಆಧಾರ್ ಸಂಖ್ಯೆಯನ್ನು ನಮೂದಿಸಿ ಮೊಬೈಲ್ ನಂಬರನ್ನು ಭರ್ತಿ ಮಾಡಿ ಮತ್ತು ಸಬ್‌ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ನಂತರ ನೀವು ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಒಟಿಪಿ ಪಡೆಯುತ್ತೀರಿ.
ಹಂತ 5: ನಂತರ ಅರ್ಜಿದಾರರು ಬಳಕೆದಾರ ID ಮತ್ತು ಪಾಸ್‌ವರ್ಡ್ ಅನ್ನು ಪಡೆಯುತ್ತೀರಿ. ಅದನ್ನು ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ( For more information ) ಡಿ.ದೇವರಾಜ ಅರಸು ಭವನದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಅಥವಾ ಆಯಾ ಹಿಂದುಳಿದ ತಾಲೂಕು ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ಹೊರಡಿಸಲಾಗಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಪಿಯುಸಿ ಪಾಸಾದವರಿಗೆ ರೂ.2.5 ಲಕ್ಷವರೆಗೆ ಉಚಿತ ವಿದ್ಯಾರ್ಥಿವೇತನ.
- NSP scholarship 2023, Apply @https://scholarships.gov.in/
- ಪಿಯುಸಿ ಮುಗಿಸಿದವರಿಗೆ ₹1.5 ಲಕ್ಷ ಉಚಿತ ವಿದ್ಯಾರ್ಥಿವೇತನ
- 10,470/- ರೂ. ಸ್ಕಾಲರ್ಶಿಪ್ ಈಗ ಬಂತು, ಈ ವರ್ಷದ SSP ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ
- ಎಲ್ಲಾ ವಿದ್ಯಾರ್ಥಿಗಳಿಗೆ 10,000/- ರೂ. ನೇರವಾಗಿ ಬ್ಯಾಂಕ್ ಖಾತೆಗೆ ಬರುವ SBI ಸ್ಕಾಲರ್ಶಿಪ್
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
10th pass 606 96%96 SSP scholarship beku