ಇದೀಗ ಎಲ್ಲರಿಗೂ ಒಂದು ಸಿಹಿ ಸುದ್ದಿ ( Good News ) ತಿಳಿದು ಬಂದಿದೆ. ಸರ್ಕಾರದಿಂದ ( Government ) ಜಾರಿಯಾದ ಬಡವರ ಗ್ಯಾರಂಟಿ ಯೋಜನೆಗಳನ್ನು ( Guarantee Scheme ) ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ( CM Siddaramiya ) ಸ್ಪಷ್ಟನೆ ನೀಡಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಬಡವರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ಸಿಎಂ ಸಿದ್ದರಾಮಯ್ಯ ಹೇಳಿಕೆ :
ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತವೆ ಎಂದು ಬಿಜೆಪಿ ನಾಯಕರು ಹಾಗೂ ಮಾಗಡಿ ಶಾಸಕರಾದ ಬಾಲಕೃಷ್ಣ ( Balakrishna ) ಹೇಳಿಕೆ ನೀಡಿದರು. ಬುಧವಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಈ ಬಡವರ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿ ಅನುಷ್ಠಾನ ಮಾಡುತ್ತೇವೆಯೇ ವಿನಃ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಬಡವರ ಈ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಬಗ್ಗೆ ಯೋಚನೆಯನ್ನು ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಕೊಟ್ಟ ಭರವಸೆಯಂತೆ ನಾವು ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ( Five Guarantee Schemes ) ಜಾರಿಗೆ ತಂದಿದ್ದು, ಯಾವುದೇ ಕಾರಣಕ್ಕೂ ಆ ಯೋಜನೆಗಳನ್ನು ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ. ಎಲ್ಲ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಕನ್ನಡ ಬೋರ್ಡ್ ಕಡ್ಡಾಯ ಸುಗ್ರೀವಾಜ್ಞೆ ( Kannada Board is Compulsory ) :
ಕನ್ನಡ ಬೋರ್ಡ್ ಕಡ್ಡಾಯ ಸುಗ್ರೀವಾಜ್ಞೆಗೆ ಸಹಿಹಾಕದೇ ಕಡತವನ್ನು ರಾಜ್ಯಪಾಲರು ( Governer ) ವಾಪಸ್ ಕಳುಹಿಸಿಲ್ಲ. ಕಡತ ತಲುಪುವ ವೇಳೆಗೆ ಅಧಿವೇಶನದ ದಿನಾಂಕ ಪ್ರಕಟವಾಗಿತ್ತು. ಹಾಗಾಗಿ ಸಹಿ ( Sign ) ಹಾಕಿಲ್ಲ. ಅಧಿವೇಶನದಲ್ಲಿಯೇ ಬಿಲ್ ಪಾಸ್ ( Bill Pass ) ಮಾಡಿಕೊಂಡು ಕಳುಹಿಸಿ ಎಂದು ರಾಜ್ಯಪಾಲರು ಸಲಹೆ ನೀಡಿದ್ದಾರೆ. ಇದರಲ್ಲಿ ವಿವಾದ ಏನೂ ಇಲ್ಲ. ನಾವು ಸದನದಲ್ಲಿಯೇ ಬಿಲ್ ಮಂಡಿಸಿ ವಿಧೇಯಕಕ್ಕೆ ಅಂಗೀಕಾರ ಪಡೆದುಕೊಂಡು ರಾಜ್ಯಪಾಲರಿಗೆ ಕಳುಹಿಸಿಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಬಜೆಟ್ ನ ( State Budget ) ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ :
ಅಷ್ಟೇ ಅಲ್ಲದೆ ಕೇಂದ್ರ ಬಜೆಟ್ ಬಗ್ಗೆ ನಮ್ಮ ನಿರೀಕ್ಷೆಗಳಿವೆ. ಆದರೆ ಅದರ ಬಗ್ಗೆ ಇಂದು ಮಾತನಾಡುವುದಿಲ್ಲ. ನಾಳೆ ಬಜೆಟ್ ಮಂಡನೆಯಾದ ನಂತರ ಆ ಕುರಿತು ಪ್ರತಿಕ್ರಿಯೆ ನೀಡುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ. ಇಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ನಡೆಸಿದ್ದೇನೆ. ಅವರು ತಮ್ಮ ತಮ್ಮ ಜಿಲ್ಲೆಗಳಲ್ಲಿ ಏನು ಮಾಡಿದ್ದಾರೆ ಎಂದು ಪರಿಶೀಲನೆ ಮಾಡಿದೆ. ನಾವು ಅಧಿಕಾರಕ್ಕೆ ಬಂದು 8 ತಿಂಗಳಾಗಿದೆ. ಅಷ್ಟರಲ್ಲಿ ಎಲ್ಲಿ ಹೋಗಿದ್ದೀರಿ. ಏನು ಮಾಡಿದ್ದೀರಿ. ಜಿಲ್ಲಾಡಳಿತಕ್ಕೆ ಏನು ಸಲಹೆ ಕೊಟ್ಟಿದ್ದೀರಿ ಎಂದು ಪರಿಶೀಲಿಸಿದ್ದೇವೆ ಎಂದು ಹೇಳಿದ್ದಾರೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಕೇಂದ್ರ ಸರ್ಕಾರದಿಂದ ಯಾವುದೇ ಗ್ಯಾರಂಟಿ ಇಲ್ಲದೇ 10 ಲಕ್ಷ ರೂ.ವರೆಗೆ ಸಾಲ ಸೌಲಭ್ಯ
- ಅತೀ ಕಡಿಮೆ ಬಡ್ಡಿಗೆ ವೈಯಕ್ತಿಕ ಸಾಲ ಕೊಡುವ ಬ್ಯಾಂಕ್ ಗಳ ಪಟ್ಟಿ ಇಲ್ಲಿದೆ
- ‘RBI’ ನಿಂದ ‘ಪೇಟಿಎಂ ಬ್ಯಾಂಕ್’ಗೆ ನಿರ್ಬಂಧ, ಫೆ.29 ರಿಂದ ಬಂದ್ ಆಗುತ್ತಾ?
- ಯಾವುದೇ ಗ್ಯಾರಂಟಿ ಇಲ್ಲದೇ ಸಿಗಲಿದೆ 2 ಲಕ್ಷ ರೂ.ವರೆಗೆ ಸಾಲ..! ಮೋದಿ ಸರ್ಕಾರದ ಹೊಸ ಯೋಜನೆ
- ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಹೈಲೆಟ್ಸ್, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.