ಗೃಹಲಕ್ಷ್ಮಿ ಯೋಜನೆಯ ಇದುವರೆಗೂ ಹಣ ಬಂದೇ ಇಲ್ಲ ಎನ್ನುವ ಕೆಲವು ಮಹಿಳೆಯರಿಗೆ ಒಂದೇ ಬಾರಿ 10 ಸಾವಿರ ರೂಪಾಯಿಗಳನ್ನ ಗೃಹಲಕ್ಷ್ಮಿ ಯೋಜನೆಯ ಮಹಿಳೆಯರಿಗೆ ಸರ್ಕಾರದಿಂದ ಜಮಾ ಮಾಡಲಾಗಿದೆ, ಹಾಗೂ 6ನೇ ಕಂತಿನ ಹಣದ ನಿರೀಕ್ಷೆಯಲ್ಲಿದ್ದವರಿಗೂ ಸಿಹಿ ಸುದ್ದಿ ಕೊಟ್ಟಿದ್ದು, ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
ಒಟ್ಟಿಗೆ ಬಂತು ರೂ.10,000/-
ಇದುವರೆಗೂ ಒಂದು ಕಂತಿನ ಹಣ ಬಂದಿಲ್ಲ ಎನ್ನುವ ಮಹಿಳೆಯರಿಗೆ ಸರ್ಕಾರದಿಂದ ಈಗಾಗಲೇ ತಿಳಿಸಿರುವಂತೆ, ನೀವು ನಿಮ್ಮ ಬ್ಯಾಂಕ್ ಗೆ ಹೋಗಿ ಈ ಕೆವೈಸಿ (EKYC)ಪರಿಶೀಲನೆ ಮಾಡಿಕೊಳ್ಳಬೇಕು ಜೊತೆಗೆ, ಎನ್‌ಪಿಸಿಐ ಮ್ಯಾಪಿಂಗ್ (NPCI mapping) ಕೂಡ ಮಾಡಿಸಬೇಕು.
ಡಿಸೆಂಬರ್ ತಿಂಗಳಲ್ಲಿ ಆಧಾರ್ ಮತ್ತು ಬ್ಯಾಂಕ್ ಅಕೌಂಟ್ NPCI ಮ್ಯಾಪಿಂಗ್ ಮಾಡಿಸಿಕೊಂಡ ನಂತರ ಹಲವಾರು ಮಹಿಳೆಯರಿಗೆ ಇದೇ ತಿಂಗಳು 23 24 ಮತ್ತು 25ನೇ ತಾರೀಕಿನಂದು ಸತತವಾಗಿ 2 ಸಾವಿರ ರೂಪಾಯಿಗಳಂತೆ ಒಟ್ಟು ಹತ್ತು ಸಾವಿರ ರೂಪಾಯಿಗಳನ್ನ ರಾಜ್ಯ ಸರ್ಕಾರದಿಂದ ಜಮಾ ಮಾಡಲಾಗಿದೆ. ಹಾವೇರಿ ಜಿಲ್ಲೆಯ ಮಹಿಳೆಯೊಬ್ಬರಿಗೆ ಹಣ ಜಮಾ ಆಗಿರುವ ಡಿಬಿಟಿ ಸ್ಟೇಟಸ್ ಕೆಳಗೆ ನೀವು ನೋಡಬಹುದು.
6ನೇ ಕಂತಿನ ಹಣ ಬೇಗಾ ಪಡೆಯಲು ಈ ಕೆಲಸ ಮಾಡಿ !
ಈಗಾಗಲೇ ಸರ್ಕಾರ 6ನೇ ಕಂತಿನ ಹಣ ಬಿಡುಗಡೆ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಕೆಲವು ಜಿಲ್ಲೆಗಳ ಕೆಲವು ಮಹಿಳೆಯರ ಖಾತೆಗೆ ಮಾತ್ರ ಹಣ ಜಮಾ ಆಗಿದೆ ಎಂದು ತಿಳಿದುಬಂದಿದೆ. ಫೆಬ್ರವರಿ ತಿಂಗಳು ಮುಗಿಯುವುದರ ಒಳಗೆ 6ನೇ ಕಂತಿನ ಹಣ ಎಲ್ಲಾ ಮಹಿಳೆಯರ ಖಾತೆಗೆ ಜಮಾ ಆಗಬಹುದು.
ಆದರೆ ಸರ್ಕಾರ ಈಗಾಗಲೇ ತಿಳಿಸಿರುವಂತೆ, ನೀವು ನಿಮ್ಮ ಬ್ಯಾಂಕ್ ಗೆ ಹೋಗಿ ಈ ಕೆವೈಸಿ (EKYC)ಪರಿಶೀಲನೆ ಮಾಡಿಕೊಳ್ಳಿ ಇದರ ಜೊತೆಗೆ, ಎನ್‌ಪಿಸಿಐ ಮ್ಯಾಪಿಂಗ್ (NPCI mapping) ಕೂಡ ಮಾಡಿಸಬೇಕು. ಒಂದು ವೇಳೆ ನಿಮಗೆ 5 ಕಂತಿನವರೆಗೆ ಹಣ ಬಂದಿದ್ದರೆ ಎನ್‌ಪಿಸಿಐ ಮ್ಯಾಪಿಂಗ್ ಮಾಡಿಸಿಕೊಳ್ಳುವ ಅಗತ್ಯ ಇಲ್ಲ. ಆದರೆ ಇಲ್ಲಿಯವರೆಗೆ ಹಣ ಸಂದಾಯ ಆಗದೇ ಇದ್ದರೆ ಮಾತ್ರ ತಕ್ಷಣ ಹೋಗಿ ಬ್ಯಾಂಕ್ ನಲ್ಲಿ ನಿಮ್ಮ ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ಪ್ರತಿ ಒದಗಿಸಿ ಎನ್‌ಪಿಸಿಐ ಮ್ಯಾಪಿಂಗ್ ಮಾಡಿಸಿಕೊಳ್ಳಿ.
ಈಗಲೇ ನಿಮ್ಮ ಡಿಬಿಟಿ ಸ್ಟೇಟಸ್ ಚೆಕ್ ಮಾಡಿಕೊಳ್ಳಿ
ನಿಮ್ಮ ಖಾತೆಗೆ ಹಣ ಬಂದಿದ್ಯೋ ಇಲ್ಲವೋ ಎಂಬುದನ್ನು ಮಾಹಿತಿ ಕಣಜ ವೆಬ್ಸೈಟ್ ಮೂಲಕ ರೇಷನ್ ಕಾರ್ಡ್ ಸಂಖ್ಯೆಯನ್ನು ಹಾಕಿ ತಿಳಿದುಕೊಳ್ಳಬಹುದು. ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ. ಅಥವಾ ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿರುವ DBT Karnataka mobile ಅಪ್ಲಿಕೇಶನ್ ( Application ) ಮೂಲಕ ಆಧಾರ್ ಸಂಖ್ಯೆಯನ್ನು ನಮೂದಿಸಿ ನಿಮ್ಮ ಬ್ಯಾಂಕ್ ಖಾತೆಗೆ ಹಣ ಬಂದಿದೆಯೋ ಇಲ್ವೋ ಅಂತ ಚೆಕ್ ಮಾಡಿಕೊಳ್ಳಬಹುದು. ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಇದುವರೆಗೂ ಒಂದು ಕಂತಿನ ಹಣ ಬರದೇ ಇದ್ದವರಿಗೆ ಹೊಸ ಮಾರ್ಗಸೂಚಿ ಪ್ರಕಟ, ಹೀಗೆ ಮಾಡಿ ₹2000/- ಬರುತ್ತೆ
- ಗೃಹಲಕ್ಷ್ಮಿ 2000/- ಹಣ ಪಡೆಯಲು ಹೊಸ ರೂಲ್ಸ್ ಜಾರಿ, 5ನೇ ಕಂತಿನ ಹಣ ಪಡೆಯಲು ಈ ಕೆಲಸ ಕಡ್ಡಾಯ.!
- ಮಹಿಳೆಯರಿಗೆ ಗುಡ್ ನ್ಯೂಸ್! ಉಚಿತ ಗ್ಯಾಸ್ ಸಂಪರ್ಕಕ್ಕೆ ಅರ್ಜಿ ಆಹ್ವಾನ
- ಇನ್ನೂ ಮುಂದೆ 2000/- ರೂ. ಇವರಿಗೆ ಬರುವುದಿಲ್ಲ, ಜನವರಿ ತಿಂಗಳ ಅಕ್ರಮ ಬಿಪಿಎಲ್ ಕಾರ್ಡ್ ಪತ್ತೆ, ರದ್ದಾದ ಪಟ್ಟಿ ಬಿಡುಗಡೆ.!
- ರೈತರ ಖಾತೆಗೆ ಬರ ಪರಿಹಾರದ ಮೊದಲನೇ ಕಂತಿನ ಹಣ ₹2000 ಜಮಾ, ಸ್ಟೇಟಸ್ ಹೀಗೆ ಚೆಕ್ ಮಾಡಿ
- ಬೆಳೆಹಾನಿ ಪರಿಹಾರದ ಹಣ ಇನ್ನೂ ಬಂದಿಲ್ವಾ? ಆಧಾರ್ ಲಿಂಕ್ ಆಗದೇ ಇರುವ ಪಟ್ಟಿ ಬಿಡುಗಡೆ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.