ದೇಶದಾದ್ಯಂತ ಬಿಸಿಲ ಬೇಗೆಗೆ ಜನರು ತತ್ತರಿಸಿ ಹೋಗಿದ್ದಾರೆ, ಕಳೆದ ವರ್ಷಕ್ಕಿಂತ ಈ ಬಾರಿ ಬಿಸಿಲಿನ ತಾಪವನ್ನು ಹೆಚ್ಚಾಗಿದ್ದು, ಕೆಲವು ರಾಜ್ಯಗಳಲ್ಲಿ ನೀರಿನ ತೊಂದರೆಯು ಆಗುತ್ತಿದೆ, ಈ ಸಂದರ್ಭದಲ್ಲಿ ಕೆಲ ರಾಜ್ಯಗಳ ಜನರಿಗೆ ಐಎಂಡಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಮುಂದಿನ 3 ದಿನಗಳ ಕಾಲ ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Karnataka weather Updates : ಕರ್ನಾಟಕ ಹವಾಮಾನ ವರದಿ
ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನ ರಾಜ್ಯದ 12 ಜಿಲ್ಲೆಗಳಲ್ಲಿ ಮಾ.20 ನಾಳೆಯಿಂದ ನಾಲ್ಕು ದಿನಗಳವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಖ್ಯವಾಗಿ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಬೆಳಗಾವಿ, ಬೀದರ್, ಧಾರವಾಡ, ರಾಯಚೂರು, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಒಣಹವೆ ಮುಂದುವರೆಯಲಿದೆ. ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ಟಿವಿ9 ಕನ್ನಡ ವೆಬ್ ಸೈಟ್ ವರದಿ ಮಾಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಉತ್ತರ ಕರ್ನಾಟಕ ಭಾಗದ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳದಲ್ಲಿ ಒಣಹವೆ ಮುಂದುವರೆಯಲಿದೆ. ರಾಜಧಾನಿಯಲ್ಲಿ ಮೋಡ ಕವಿದ ವಾತಾವರಣವಿದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.
ಬೆಂಗಳೂರಲ್ಲಿ ಮಳೆ :
ಮಾರ್ಚ್ 22 ರಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆಯಾಗಿದೆ ಎಂದು ತಿಳಿಸಿದೆ. ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ರಾಮನಗರ ಸೇರಿದಂತೆ ಇನ್ನು ಕೆಲವೆಡೆ ವರುಣ ತಂಪೆರೆಯಲಿದ್ದಾನೆ ಎಂದು ಸೂಚನೆ ಸಿಕ್ಕಿದೆ.ಇನ್ನು ರಾಜ್ಯದ ಅರಣ್ಯ ಪ್ರದೇಶ ಹೊಂದಿರುವ ಕೆಲವು ಕಡೆ ಮಳೆ ನಿರೀಕ್ಷಿಸಲಾಗಿದೆ. ಕೊಡಗು ಜಿಲ್ಲೆಯ ಮಡಿಕೇರಿ, ವಿರಾಜಪೇಟೆ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಮಳೆಯಾಗಲಿದೆ.
2024 ರಲ್ಲಿ ಉತ್ತಮ ಮಳೆ
ಕರ್ನಾಟಕ ರಾಜ್ಯದಲ್ಲಿ ಕಳೆದ ವರ್ಷ ನಿರೀಕ್ಷೆಯಂತೆ ಮಳೆಯಾಗದೆ ಇರುವ ಕಾರಣ ತೀರ್ವ ಬರಗಾಲ ಉಂಟಾಯಿತು. ಆದರೆ 2024ರಲ್ಲಿ ಒಳ್ಳೆಯ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದೇ ಮಾರ್ಚ್ ಎಲ್ ನಿನೋ ಪ್ರಭಾವ ತಗ್ಗಿ ಮುಂಗಾರು ಉತ್ತಮವಾಗಲಿದೆ. ಹೌದು 2023 ಜನವರಿ 1 ರಿಂದ ಡಿಸೆಂಬರ್ 31ರವರೆಗೆ ರಾಜ್ಯದಲ್ಲಿ ವಾಡಿಕೆಯ ಪ್ರಕಾರ, 1153 ಮಿ.ಮೀ. ಮಳೆ ಸುರಿಯಬೇಕು. ಆದರೆ, ಕೇವಲ 872 ಮಿ.ಮೀ. ಮಾತ್ರ ಮಳೆಯಾಗಿದೆ. 19 ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾದರೆ, 12 ಜಿಲ್ಲೆಗಧಿಳಲ್ಲಿಸಾಮಾನ್ಯ ಮಳೆ ಕೊರತೆ ಉಂಟಾಗಿದೆ. ಅತಿ ಹೆಚ್ಚು ಮಳೆಯಾಗುವ ಕರಾವಳಿಯಲ್ಲಿ ಶೇ. 19ರಷ್ಟು ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಶೇ.35ರಷ್ಟು ಮಳೆ ಕೊರತೆ ಉಂಟಾಗಿದೆ.
2023 ರಲ್ಲಿ ಬೆಂಗಳೂರಿನಲ್ಲಿ ಕೇವಲ 1020.2 ಮಿಮೀ ಮಳೆಯಾಗಿದೆ. ಇದು ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕನಿಷ್ಠ ವಾರ್ಷಿಕ ಮಳೆ. ಜೂನ್ ಮತ್ತು ಸೆಪ್ಟೆಂಬರ್ ನಡುವೆ (ನೈಋತ್ಯ ಮಾನ್ಸೂನ್) 474.6 ಮಿಮೀ ಮಳೆ ದಾಖಲಾಗಿದ್ದರೆ, ಅಕ್ಟೋಬರ್ ಮತ್ತು ನವೆಂಬರ್ನಲ್ಲಿ (ಈಶಾನ್ಯ ಮಾನ್ಸೂನ್) 202.9 ಮಿಮೀ ಮಳೆ ದಾಖಲಾಗಿದೆ. ಇಡೀ ವರ್ಷ, ಬೆಂಗಳೂರು ನಗರದಲ್ಲಿ ಕೇವಲ 54 ದಿನ ಮಾತ್ರ ಮಳೆ ಬಿದ್ದಿತ್ತು ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಗೃಹಲಕ್ಷ್ಮಿ, ಅನ್ನಭಾಗ್ಯದ ಪೆಂಡಿಂಗ್ ಹಣಕ್ಕೆ ಕಾಯುತ್ತಿರುವ ಎಲ್ಲರಿಗೂ ಬಿಗ್ ಅಪ್ಡೇಟ್ ಇಲ್ಲಿದೆ.
- SSP ವಿದ್ಯಾರ್ಥಿ ವೇತನ 2024, ಆನ್ಲೈನ್ ಅರ್ಜಿ ಸಲ್ಲಿಸಿ | Karnataka SSP Scholarship 2024
- ಈ ವರ್ಗದ ಮಹಿಳೆಯರಿಗೆ, ಉಚಿತ ಹೊಲಿಗೆ ಯಂತ್ರ ತರಬೇತಿಗೆ ಅರ್ಜಿ ಅವ್ಹಾನ!
- ವೋಟರ್ ಐಡಿಗೆ ಅರ್ಜಿ ಸಲ್ಲಿಸುವುದು ಹೇಗೆ? ಮೊಬೈಲ್ ನಲ್ಲೆ ಅರ್ಜಿ ಸಲ್ಲಿಸುವ ವಿಡಿಯೋ ಇಲ್ಲಿದೆ
- ಬರೀ 5 ವರ್ಷದಲ್ಲಿ ಹಣ ಡಬಲ್ ಆಗುವ ಹೊಸ ಎಲ್ಐಸಿ ಯೋಜನೆ.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.