ರಾಜ್ಯದಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ, ಕಳೆದ ವಾರ ಹಲವು ಜಿಲ್ಲೆಗಳಲ್ಲಿ ಅಬ್ಬರಿಸಿ ಕಣ್ಮರೆಯಾಗಿದ್ದ ಮಳೆರಾಯ ನಿನ್ನೆ ಚಿಕ್ಕಮಗಳೂರಿನ ಹಲವು ಕಡೆ ದರ್ಶನ ನೀಡಿದ್ದಾನೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Karnataka weather Updates : ಕರ್ನಾಟಕ ಹವಾಮಾನ ವರದಿ
ಇಂದು ಮಾರ್ಚ್ 22, ಶುಕ್ರವಾರ ಇಂದಿನಿಂದ 3 ದಿನಗಳ ಕಾಲ ಸಾಧಾರಣ ಮಳೆಯಾಗುವ (Rain) ಸಾಧ್ಯತೆಯಿದೆ. ಮುಂದಿನ ನಾಲ್ಕು ದಿನಗಳಲ್ಲಿ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಬೆಳಗಾವಿ, ಬೀದರ್, ಬಾಗಲಕೋಟೆ, ಗುಲ್ಬರ್ಗ, ರಾಯಚೂರು ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾದ ಕಾರಣ ಮಳೆ ಬೀಳುವ ಸಾಧ್ಯತೆಯಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ. ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
2024 ರಲ್ಲಿ ಉತ್ತಮ ಮಳೆ
ಕರ್ನಾಟಕ ರಾಜ್ಯದಲ್ಲಿ ಕಳೆದ ವರ್ಷ ನಿರೀಕ್ಷೆಯಂತೆ ಮಳೆಯಾಗದೆ ಇರುವ ಕಾರಣ ತೀರ್ವ ಬರಗಾಲ ಉಂಟಾಯಿತು. ಆದರೆ 2024ರಲ್ಲಿ ಒಳ್ಳೆಯ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದೇ ಮಾರ್ಚ್ ಎಲ್ ನಿನೋ ಪ್ರಭಾವ ತಗ್ಗಿ ಮುಂಗಾರು ಉತ್ತಮವಾಗಲಿದೆ. ಹೌದು 2023 ಜನವರಿ 1 ರಿಂದ ಡಿಸೆಂಬರ್ 31ರವರೆಗೆ ರಾಜ್ಯದಲ್ಲಿ ವಾಡಿಕೆಯ ಪ್ರಕಾರ, 1153 ಮಿ.ಮೀ. ಮಳೆ ಸುರಿಯಬೇಕು. ಆದರೆ, ಕೇವಲ 872 ಮಿ.ಮೀ. ಮಾತ್ರ ಮಳೆಯಾಗಿದೆ. 19 ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾದರೆ, 12 ಜಿಲ್ಲೆಗಧಿಳಲ್ಲಿಸಾಮಾನ್ಯ ಮಳೆ ಕೊರತೆ ಉಂಟಾಗಿದೆ. ಅತಿ ಹೆಚ್ಚು ಮಳೆಯಾಗುವ ಕರಾವಳಿಯಲ್ಲಿ ಶೇ. 19ರಷ್ಟು ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಶೇ.35ರಷ್ಟು ಮಳೆ ಕೊರತೆ ಉಂಟಾಗಿದೆ.
2023 ರಲ್ಲಿ ಬೆಂಗಳೂರಿನಲ್ಲಿ ಕೇವಲ 1020.2 ಮಿಮೀ ಮಳೆಯಾಗಿದೆ. ಇದು ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕನಿಷ್ಠ ವಾರ್ಷಿಕ ಮಳೆ. ಜೂನ್ ಮತ್ತು ಸೆಪ್ಟೆಂಬರ್ ನಡುವೆ (ನೈಋತ್ಯ ಮಾನ್ಸೂನ್) 474.6 ಮಿಮೀ ಮಳೆ ದಾಖಲಾಗಿದ್ದರೆ, ಅಕ್ಟೋಬರ್ ಮತ್ತು ನವೆಂಬರ್ನಲ್ಲಿ (ಈಶಾನ್ಯ ಮಾನ್ಸೂನ್) 202.9 ಮಿಮೀ ಮಳೆ ದಾಖಲಾಗಿದೆ. ಇಡೀ ವರ್ಷ, ಬೆಂಗಳೂರು ನಗರದಲ್ಲಿ ಕೇವಲ 54 ದಿನ ಮಾತ್ರ ಮಳೆ ಬಿದ್ದಿತ್ತು ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಗೃಹಜ್ಯೋತಿ ಗ್ರಾಹಕರಿಗೆ ಶಾಕಿಂಗ್ ನ್ಯೂಸ್, ಉಚಿತ ವಿದ್ಯುತ್ ಯೋಜನೆಯ ನಿಯಮ ಬದಲಾವಣೆ, ಹೊಸ ರೂಲ್ಸ್ ಜಾರಿ..!
- SSP ವಿದ್ಯಾರ್ಥಿ ವೇತನ 2024, ಆನ್ಲೈನ್ ಅರ್ಜಿ ಸಲ್ಲಿಸಿ | Karnataka SSP Scholarship 2024
- ಕರ್ನಾಟಕ ಕೃಷಿ ಭಾಗ್ಯ ಯೋಜನೆ ಅಡಿಯಲ್ಲಿ ಸಬ್ಸಿಡಿ ಪಡೆಯಲು ಕೂಡಲೇ ಅರ್ಜಿ ಸಲ್ಲಿಸಿ! ಇಲ್ಲಿದೆ ಸಂಪೂರ್ಣ ಮಾಹಿತಿ
- ವೋಟರ್ ಐಡಿಗೆ ಅರ್ಜಿ ಸಲ್ಲಿಸುವುದು ಹೇಗೆ? ಮೊಬೈಲ್ ನಲ್ಲೆ ಅರ್ಜಿ ಸಲ್ಲಿಸುವ ವಿಡಿಯೋ ಇಲ್ಲಿದೆ
- ಈ ಮಹಿಳೆಯರಿಗೆ 6 ಮತ್ತು 7ನೇ ಕಂತಿನ ಗೃಹಲಕ್ಷ್ಮಿ 2000/- ಹಣ ಜಮೆ ಆಗೋಲ್ಲ, ಇಲ್ಲಿದೆ ಕಾರಣ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.