ನಾಳೆಯಿಂದ ರಾಜ್ಯದಲ್ಲಿ SSLC ಪರೀಕ್ಷೆಗಳು ಪ್ರಾರಂಭ, ವಿದ್ಯಾರ್ಥಿಗಳಿಗೆ ಮಾರ್ಗಸೂಚಿ ಪ್ರಕಟ

sslc exam 2024

ಕರ್ನಾಟಕ ರಾಜ್ಯದ್ಯಂತ ನಾಳೆಯಿಂದ 10ನೇ ತರಗತಿಯ ಪರೀಕ್ಷೆಗಳು ಪ್ರಾರಂಭವಾಗಲಿದ್ದು, ಒಟ್ಟು 2750 ಕೇಂದ್ರಗಳಲ್ಲಿ ಏಪ್ರಿಲ್ 6ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯಲಿವೆ, ಪರೀಕ್ಷಾ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಪರೀಕ್ಷಾ ಕೇಂದ್ರ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಎಸ್ ಎಸ್ ಎಲ್ ಸಿ ಪರೀಕ್ಷೆ 2024

ರಾಜ್ಯದಲ್ಲಿ ಸುಸೂತ್ರವಾಗಿ ಪರೀಕ್ಷೆ ನಡೆಯಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು. ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ನಿಷೇದಾಜ್ಞೆ ಘೋಷಣೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200ಮೀ ಅಂತರದಲ್ಲಿನ ಝರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ. ಈ ಸಾರಿ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಾಯಿಸಿಕೊಂಡು ಪರೀಕ್ಷೆ ಬರೆಯುತ್ತಿದ್ದು.ಈ ಪೈಕಿ 4,41,910 ಬಾಲಕರು, 4,28,058 ಬಾಲಕಿಯರಿದ್ದಾರೆ. ಒಟ್ಟು ವಿದ್ಯಾರ್ಥಿಗಳ ಪೈಕಿ 8.10 ಲಕ್ಷಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು (ರೆಗ್ಯಲರ್), 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. 54,254 ವಿಶೇಷ ಚೇತನ ವಿದ್ಯಾರ್ಥಿಗಳಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ

* ಮಾರ್ಚ್ 25 – ಪ್ರಥಮ ಭಾಷೆ.

* ಮಾರ್ಚ್ 27 – ಸಮಾಜ ವಿಜ್ಞಾನ.

* ಮಾರ್ಚ್ 30 – ವಿಜ್ಞಾನ.

* ಏಪ್ರಿಲ್ 2 – ಗಣಿತ.

* ಏಪ್ರಿಲ್ 4  – ತೃತೀಯ ಭಾಷೆ.

* ಏಪ್ರಿಲ್ 6 –  ದ್ವಿತೀಯ ಭಾಷೆ.

ನಿಷೇಧಾಜ್ಞೆಜಾರಿ:

ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತ 200ಮೀ ಅಂತರದಲ್ಲಿನ ಸೆಕ್ಷನ್ 144 ರ ಪ್ರಕಾರ ನಿಷೇದಾಜ್ಞೆ ಘೋಷಣೆ ಮಾಡಲಾಗಿದೆ, ಝರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ. ನೀರು, ವಿದ್ಯುತ್, ಕುಳಿತುಕೊಳ್ಳುವ ಸ್ಥಳ, ಫ್ಯಾನ್ ಹೀಗೆ ಬಹುತೇಕ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಬೇಕಾದ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜೊತೆಗೆ ಪರೀಕ್ಷೆಗೆ ಹಾಜರಾಗುವ ಮಕ್ಕಳಿಗೂ ಸಹ ಕೆಲವು ನಿಯಮಗಳನ್ನು ರೂಪಿಸಿದೆ.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ನಿಯಮಗಳು

– ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೊಠಡಿಗೆ ಬರುವಾಗ, ಪ್ರವೇಶ ಪತ್ರದ ಜೊತೆಗೆ ಪೆನ್ ಪೆನ್ಸಿಲ್ ಮತ್ತು ಜಾಮಿಟ್ರಿ ಬಾಕ್ಸ್ ಗಳನ್ನು ತರಬೇಕು, ಬೇರೆ ವಿದ್ಯಾರ್ಥಿಗಳಲ್ಲಿ ಕೇಳುವಂತಿಲ್ಲ

– ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಮೊಬೈಲ್ ಫೋನ್ ನಿಷೇಧಿಸಲಾಗಿದೆ

– ಪರೀಕ್ಷಾ ಕೊಠಡಿ ಒಳಗೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅನುಮತಿ ಇಲ್ಲ

– ಪರೀಕ್ಷೆಗೆ ಬಳಸುವ ಸಾಮಾನ್ಯ ಕ್ಯಾಲ್ಕುಲೇಟರ್ಗಳಿಗೆ ಮಾತ್ರ ಅವಕಾಶವಿದೆ, ಸೈಂಟಿಫಿಕ್ ಕ್ಯಾಲ್ಕುಲೇಟರ್ ಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ

– ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೊಠಡಿಯಲ್ಲಿ ಹಾಜರಾಗಬೇಕು. ಸಮಯ ಮೀರಿ ಬಂದ ವಿದ್ಯಾರ್ಥಿಗಳಿಗೆ ಅನುಮತಿ ಇರುವುದಿಲ್ಲ.

– ಯಾವುದೇ ರೀತಿಯ ಕಾಫಿ ಚೀಟಿ ಮತ್ತು ದೇಹದ ಅಂಗಾಂಗಗಳ ಮೇಲೆ ಉತ್ತರವನ್ನ ಬರೆದುಕೊಂಡು ಬರುವಂತಿಲ್ಲ

– ಪರೀಕ್ಷಾ ಕೊಡಡಿಗೆ ಬರುವಾಗ ಮತ್ತು ಹೋಗುವಾಗ ಶಿಸ್ತುಭದ್ಧವಾಗಿ ವರ್ತನೆ ಮಾಡಬೇಕು, ಬೇರೆ ವಿದ್ಯಾರ್ಥಿಗಳಿಗೆ ತೊಂದರೆ ಕೊಡುವಂತಿಲ್ಲ

– ಉತ್ತರ ಪತ್ರಿಕೆಯಲ್ಲಿ ಸರಿಯಾದ ರೋಲ್ ನಂಬರ್ ಮತ್ತು ಶಾಲೆಯ ಕೋಡನ್ನು ನಮೂದಿಸಬೇಕು, ಉತ್ತರ ಪತ್ರಿಕೆಯಲ್ಲಿ ಪ್ರಶ್ನೆ ಕೆಳಗೆ ಕೊಡಲಾದ ಸ್ಥಳದಲ್ಲಿಯೆ ಉತ್ತರ ಬರೆಯಬೇಕು

– ಪರೀಕ್ಷೆ ಅವಧಿ ಮುಗಿಯುವವರೆಗೂ ಪರೀಕ್ಷಾ ಕೊಠಡಿ ಬಿಟ್ಟು ಹೋಗಲು ಅನುಮತಿ ಇರುವುದಿಲ್ಲ

– ಉತ್ತರ ಪತ್ರಿಕೆಯನ್ನು ಮೇಲ್ವಿಚಾರಕರಿಗೆ ಕೊಡುವ ಮೊದಲು ಎಲ್ಲಾ ಉತ್ತರಗಳನ್ನು ಪರಿಶೀಲಿಸಿ ಕೊಡತಕ್ಕದ್ದು, ಉತ್ತರ ಪತ್ರಿಕೆಯನ್ನು ಮೇಲ್ವಿಚಾರಕರಿಗೆ ಕೊಟ್ಟ ನಂತರ ವಾಪಸ್ ಪಡೆಯಲು ಅವಕಾಶ ಇರುವುದಿಲ್ಲ

ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆ

ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಮಧ್ಯಾಹ್ನದ ಬಿಸಿ ಊಟ ವಿತರಣೆ ಸಿದ್ಧತೆಗಳು ಕೂಡ ನಡೆದಿದೆ ಎಂದು ತಿಳಿದುಬಂದಿದೆ

ಎಲ್ಲಾ ವಿದ್ಯಾರ್ಥಿಗಳಿಗೂ ಶುಭವಾಗಲಿ

ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ, ನೀಡ್ಸ್ ಆಫ್ ಪಬ್ಲಿಕ್ ಡಿಜಿಟಲ್ ಮಾಧ್ಯಮದ ಕಡೆಯಿಂದ ಆಲ್ ದ ಬೆಸ್ಟ್ ಶುಭವಾಗಲಿ, ಮುಂಬರುವ ನಿಮ್ಮ ರಿಸಲ್ಟ್ ಗೆ ಸಂಬಂಧಪಟ್ಟ ವಿಷಯಗಳು ಮತ್ತು ಪಿಯುಸಿಗೆ ಅಡ್ಮಿಶನ್ ಗೆ ಸಂಬಂಧಪಟ್ಟ ಎಲ್ಲ ವಿಷಯಗಳಿಗೆ ನಮ್ಮ ಡಿಜಿಟಲ್ ಮಾಧ್ಯಮದ ಟೆಲಿಗ್ರಾಂ ಮತ್ತು ವಾಟ್ಸಾಪ್ ಚಾನೆಲ್ ಗಳಿಗೆ ಈಗಲೇ ಜಾಯಿನ್ ಆಗಿ ನಿಖರ ಮತ್ತು ಸ್ಪಷ್ಟ ಮಾಹಿತಿಗಳನ್ನು ಪಡೆಯಿರಿ. ಎಲ್ಲರಿಗೂ ಒಳ್ಳೆಯದಾಗಲಿ ಶುಭದಿನ.

ಇಂತಹ ಉತ್ತಮ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ, ಬಂಧುಗಳಿಗೆ ಹಾಗೂ ಪೋಷಕರಿಗೆ ಶೇರ್ ಮಾಡಿ, ಧನ್ಯವಾದಗಳು.

whatss

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

 

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!