ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ದಿನೇ ದಿನೇ ಹೆಚ್ಚಾಗುತ್ತಿದ್ದು, ಕುಡಿಯುವ ನೀರಿನ ಅಭಾವವು ಹೆಚ್ಚುತ್ತಿದೆ, ಇನ್ನು ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ ಎಂದು ವರದಿಯಾಗುತ್ತಿದೆ. ಕೆಲವೆಡೆ ಮೋಡ ಕವಿದ ವಾತಾವರಣವಿದ್ದರೆ ಇನ್ನೂ ಇನ್ನೂ ರಾಜ್ಯದ ಕೆಲವೆಡೆ ಮಳೆಯ ಸಿಂಚನವಾಗಿದೆ. ಮಾರ್ಚ್ 31 ರಿಂದ ಎರಡು ದಿನಗಳ ಕಾಲ 7ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Karnataka weather Updates : ಕರ್ನಾಟಕ ಹವಾಮಾನ ವರದಿ
ರಾಜ್ಯದಲ್ಲಿ ಮೈಸೂರು ಸೇರಿದಂತೆ ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ ,ದಕ್ಷಿಣ ಕನ್ನಡ ,ಉತ್ತರ ಕನ್ನಡ, ಉಡುಪಿ ಮತ್ತು ಹಲವು ಜಿಲ್ಲೆಗಳಲ್ಲಿ ಮಾರ್ಚ್ 31 ರಿಂದ ಎರಡು ದಿನಗಳ ಕಾಲ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಾವೇರಿ, ದಾವಣಗೆರೆ, ಚಿತ್ರದುರ್ಗ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
ಬಾಳೆಹೊನ್ನೂರು, ಲೋಂಡಾದಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 39.3 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಮಂಡ್ಯದಲ್ಲಿ 19.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ
ಈಗಾಗಲೇ ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಉಡುಪಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳ ಹಲವೆಡೆ ಲಘು ಮಳೆ ಸುರಿಯುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ.
2024 ರಲ್ಲಿ ಉತ್ತಮ ಮಳೆ
ಕರ್ನಾಟಕ ರಾಜ್ಯದಲ್ಲಿ ಕಳೆದ ವರ್ಷ ನಿರೀಕ್ಷೆಯಂತೆ ಮಳೆಯಾಗದೆ ಇರುವ ಕಾರಣ ತೀರ್ವ ಬರಗಾಲ ಉಂಟಾಯಿತು. ಆದರೆ 2024ರಲ್ಲಿ ಒಳ್ಳೆಯ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದೇ ಮಾರ್ಚ್ ಎಲ್ ನಿನೋ ಪ್ರಭಾವ ತಗ್ಗಿ ಮುಂಗಾರು ಉತ್ತಮವಾಗಲಿದೆ. ಹೌದು 2023 ಜನವರಿ 1 ರಿಂದ ಡಿಸೆಂಬರ್ 31ರವರೆಗೆ ರಾಜ್ಯದಲ್ಲಿ ವಾಡಿಕೆಯ ಪ್ರಕಾರ, 1153 ಮಿ.ಮೀ. ಮಳೆ ಸುರಿಯಬೇಕು. ಆದರೆ, ಕೇವಲ 872 ಮಿ.ಮೀ. ಮಾತ್ರ ಮಳೆಯಾಗಿದೆ. 19 ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾದರೆ, 12 ಜಿಲ್ಲೆಗಧಿಳಲ್ಲಿಸಾಮಾನ್ಯ ಮಳೆ ಕೊರತೆ ಉಂಟಾಗಿದೆ. ಅತಿ ಹೆಚ್ಚು ಮಳೆಯಾಗುವ ಕರಾವಳಿಯಲ್ಲಿ ಶೇ. 19ರಷ್ಟು ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಶೇ.35ರಷ್ಟು ಮಳೆ ಕೊರತೆ ಉಂಟಾಗಿದೆ.
2023 ರಲ್ಲಿ ಬೆಂಗಳೂರಿನಲ್ಲಿ ಕೇವಲ 1020.2 ಮಿಮೀ ಮಳೆಯಾಗಿದೆ. ಇದು ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕನಿಷ್ಠ ವಾರ್ಷಿಕ ಮಳೆ. ಜೂನ್ ಮತ್ತು ಸೆಪ್ಟೆಂಬರ್ ನಡುವೆ (ನೈಋತ್ಯ ಮಾನ್ಸೂನ್) 474.6 ಮಿಮೀ ಮಳೆ ದಾಖಲಾಗಿದ್ದರೆ, ಅಕ್ಟೋಬರ್ ಮತ್ತು ನವೆಂಬರ್ನಲ್ಲಿ (ಈಶಾನ್ಯ ಮಾನ್ಸೂನ್) 202.9 ಮಿಮೀ ಮಳೆ ದಾಖಲಾಗಿದೆ. ಇಡೀ ವರ್ಷ, ಬೆಂಗಳೂರು ನಗರದಲ್ಲಿ ಕೇವಲ 54 ದಿನ ಮಾತ್ರ ಮಳೆ ಬಿದ್ದಿತ್ತು ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಚಂದ್ರ ಗ್ರಹಣ ಸಂಪೂರ್ಣ ಮಾಹಿತಿ! ಕರ್ನಾಟಕದಲ್ಲಿ ಕಾಣಿಸುತ್ತಾ ಚಂದ್ರಗ್ರಹಣ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
- ಗೃಹಲಕ್ಷ್ಮಿ 7ನೇ ಕಂತಿನ 2000/- ಹಣ ಬಿಡುಗಡೆ, ಪೆಂಡಿಂಗ್ ಹಣ ಪಡೆಯಲು ಹೊಸ ಮಾರ್ಗಸೂಚಿ ಪ್ರಕಟ
- ಹೋಳಿ ಹಬ್ಬದಂದು ಚಿನ್ನದ ಬೆಲೆಯಲ್ಲಿ ಕುಸಿತ, ಇಲ್ಲಿದೆ ಇಂದಿನ ಚಿನ್ನ & ಬೆಳ್ಳಿಯ ಬೆಲೆ
- SSP ವಿದ್ಯಾರ್ಥಿ ವೇತನ 2024, ಆನ್ಲೈನ್ ಅರ್ಜಿ ಸಲ್ಲಿಸಿ | Karnataka SSP Scholarship 2024
- ಕರ್ನಾಟಕ ಕೃಷಿ ಭಾಗ್ಯ ಯೋಜನೆ ಅಡಿಯಲ್ಲಿ ಸಬ್ಸಿಡಿ ಪಡೆಯಲು ಕೂಡಲೇ ಅರ್ಜಿ ಸಲ್ಲಿಸಿ! ಇಲ್ಲಿದೆ ಸಂಪೂರ್ಣ ಮಾಹಿತಿ
- ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಈ ಮಹಿಳೆಯರಿಗೆ 6 ಮತ್ತು 7ನೇ ಕಂತಿನ ಗೃಹಲಕ್ಷ್ಮಿ 2000/- ಹಣ ಜಮೆ ಆಗೋಲ್ಲ, ಇಲ್ಲಿದೆ ಕಾರಣ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.