ಈಗಾಗಲೇ ದೇಶದಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಗಿದ್ದು, ದೇಶದ ಎಲ್ಲಾ ಕ್ಷೇತ್ರಗಳಲ್ಲಿ ಚುನಾವಣಾ ಕಣ ರಂಗೆರಿದೆ, ಮತ್ತು 2024ರ ಅಂತಿಮ ಮತದಾರರ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಿದ್ದು. ನಿಮ್ಮ ಮೊಬೈಲ್ ಫೋನ್ ಮೂಲಕ ನಿಮ್ಮ ಊರಿನ ಮತದಾರ ಪಟ್ಟಿಯನ್ನು ನೋಡುವುದು ಹೇಗೆ ಎಂಬುದನ್ನು ಈ ವರದಿ ಮೂಲಕ ತಿಳಿಸಿಕೊಡಲಾಗುತ್ತದೆ. ಈ ಫೈನಲ್ ಆದ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ನೀವು ಚೆಕ್ ಮಾಡಿಕೊಳ್ಳಬಹುದು.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಅಂತಿಮ ಮತದಾರರ ಪಟ್ಟಿಯನ್ನು (Final Electoral Roll) 2024, ಈಗ ಫೋನಿನಲ್ಲೇ ನೋಡಿ :
ಮುಖ್ಯ ಚುನಾವಣಾಧಿಕಾರಿ, ಕರ್ನಾಟಕ(Chief Electoral Officer, Karnataka) ಅವರು ಅಂತಿಮ ಮತದಾರರ ಪಟ್ಟಿಯನ್ನು ಹೊರಡಿಸಿದ್ದಾರೆ. ಮುಖ್ಯ ಚುನಾವಣಾಧಿಕಾರಿ, ಕರ್ನಾಟಕ ಕಛೇರಿಯು ರಾಜ್ಯದ ಮತದಾರರ ಪಟ್ಟಿಯನ್ನು ಸಿದ್ಧಪಡಿಸಿ, ಭಾವಚಿತ್ರವಿರುವ ಗುರುತಿನ ಚೀಟಿಯನ್ನು (ಎಪಿಕ್ ಕಾರ್ಡ್) ಮತದಾರರಿಗೆ ಒದಗಿಸುವುದರ ಜೊತೆಗೆ ಮತದಾರರಲ್ಲಿ ಚುನಾವಣಾ ಜಾಗೃತಿ ಮೂಡಿಸಿ, ಚುನಾವಣಾ ವ್ಯವಸ್ಥೆಯಲ್ಲಿ ಮುಕ್ತ, ನ್ಯಾಯೋಚಿತ ಹಾಗೂ ಪಾರದರ್ಶಕತೆಯನ್ನು ಜಾರಿಗೊಳಿಸಿ, ಚುನಾವಣೆ ನಡೆಸುವುದು ಈ ಕಛೇರಿಯ ಧ್ಯೇಯೋದ್ದೇಶವಾಗಿರುತ್ತದೆ. ಈ ನಿಟ್ಟಿನಲ್ಲಿ ಮುಖ್ಯ ಚುನಾವಣಾಧಿಕಾರಿ, ಕರ್ನಾಟಕ ಕಛೇರಿಯ ಜಾಲತಾಣವನ್ನು ಹೊಸದಾಗಿ ರೂಪಿಸಲಾಗಿದ್ದು, ಈ ಜಾಲತಾಣವು ಚುನಾವಣಾ ಪ್ರಕ್ರಿಯೆಗಳಿಗೆ ಸಂಬಂಧಿಸಿದ ನಿಯಮ, ಆದೇಶ, ಮಾರ್ಗಸೂಚಿ, ಕೈಪಿಡಿ, ಮತಕ್ಷೇತ್ರದ ಪರಿಮಿತಿ ಹಾಗೂ ಚುನಾವಣಾ ಕಾರ್ಯನಿರತ ಅಧಿಕಾರಿಗಳ ವಿವರವನ್ನೊಳಗೊಂಡ ಮಾಹಿತಿಗಳನ್ನು ನಾಗರೀಕರಿಗೆ ಒದಗಿಸುವುದರ ಜೊತೆಗೆ ಮತದಾರರ ನೋಂದಣಿ ಮತ್ತು ಗುರುತಿನ ಚೀಟಿಯ (ಎಪಿಕ್) ವಿತರಣೆಯಲ್ಲಿ ನಾಗರೀಕರ ಮತ್ತು ಈ ಕಛೇರಿಯ ನಡುವೆ ಸಂಪರ್ಕ ಕೊಂಡಿಯಂತೆ ಕಾರ್ಯ ನಿರ್ವಹಿಸಲು ಸಹಕಾರಿಯಾಗುತ್ತದೆ. ಅಷ್ಟೇ ಅಲ್ಲದೆ ಈ ಕಚೇರಿಯ(office) ಜಾಲತಾಣದಲ್ಲಿ ನಾವು ಅಂತಿಮ ಮತದಾರರ ಪಟ್ಟಿಯನ್ನು ಕೂಡ ನೋಡಬಹುದಾಗಿದೆ. ಅದರ ವಿಧಾನ ಕೆಳಗಿನಂತಿದೆ :
ಅಂತಿಮ ಮತದಾರರ ಪಟ್ಟಿಯನ್ನು ನೋಡುವ ವಿಧಾನ :
ಹಂತ 1: ಮೊದಲಿಗೆ ಮುಖ್ಯ ಚುನಾವಣಾಧಿಕಾರಿ, ಕರ್ನಾಟಕದ ಅಧಿಕೃತ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ https://ceo.karnataka.gov.in/kn
ನಂತರ ಇಲ್ಲಿ ನಿಮ್ಮ ಜಿಲ್ಲೆ ತಾಲೂಕು ಮತ್ತು ಭಾಷೆಯನ್ನು ಆಯ್ಕೆ ಮಾಡಿ ಕೆಳಗಿರುವ ಕ್ಯಾಪ್ಚ ಕೋಡ್ ಅನ್ನು ಸರಿಯಾಗಿ ಎಂಟರ್ ಮಾಡಬೇಕು
ಹಂತ 2: ನಂತರ ಸ್ಕ್ರೀನ್ ಮೇಲೆ ಕಾಣುವ ನಿಮ್ಮ ಪೋಲಿಂಗ್ ಬೂತ್ ಮುಂದುಗಡೆ ಇರುವ ಫೈನಲ್ ರೋಲ್ 2024ರ ಕೆಳಗೆ ಡೌನ್ಲೋಡ್ ಬಟನ್ ಮೇಲೆ ಕ್ಲಿಕ್ ಮಾಡಬೇಕು
ಹಂತ 4: ಈಗ ನಿಮ್ಮ ಪೊಲೀಸ್ ನ ಫೈನಲ್ ಆಗಿರುವ ಎಲ್ಲಾ ಮತದಾರರ ಯಾದಿ ನಿಮಗೆ ಕಾಣಿಸುತ್ತದೆ
ಹೀಗೆ ನಿಮ್ಮ ಫೋನಿನಲ್ಲಿ ಅಥವಾ ಕಂಪ್ಯೂಟರ್ನಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ನೋಡಬಹುದಾಗಿದೆ. ಅಷ್ಟೇ ಅಲ್ಲದೇ ನಿಮ್ಮ ಹೆಸರು ಸರಿಯಿದೆಯೇ ಎಂಬ ಮಾಹಿತಿ ಕೂಡ ಅಲ್ಲಿ ದೊರೆಯುತ್ತದೆ. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಆರ್ಟಿಇ ಅಡಿಯಲ್ಲಿ ಖಾಸಗಿ ಶಾಲೆಗಳಿಗೆ LKG &1ನೇ ತರಗತಿ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ
- SSP ವಿದ್ಯಾರ್ಥಿ ವೇತನ 2024, ಆನ್ಲೈನ್ ಅರ್ಜಿ ಸಲ್ಲಿಸಿ | Karnataka SSP Scholarship 2024
- ಈ ವಿದ್ಯಾರ್ಥಿಗಳಿಗೆ ಸಿಗಲಿದೆ ಬರೋಬ್ಬರಿ 35,000 ರೂಪಾಯಿ ಪ್ರೋತ್ಸಾಹ ಧನ
- ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಮಾರ್ಚ್ 31 ರಿಂದ ಶಿವಮೊಗ್ಗ ಸೇರಿ ಈ ಜಿಲ್ಲೆಗಳಲ್ಲಿ 2ದಿನ ಮಳೆ ಮುನ್ಸೂಚನೆ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.