ಕರ್ನಾಟಕ ರಾಜ್ಯ ಸರ್ಕಾರ ಘೋಷಿಸಿದ ಪಂಚ ಗ್ಯಾರಂಟಿಗಳನ್ನು ಪಡೆಯಲು ಪಡಿತರ ಚೀಟಿ ಕಡ್ಡಾಯವಾಗಿರುವುದರಿಂದ ರಾಜ್ಯದಲ್ಲಿ ರೇಷನ್ ಕಾರ್ಡ್ ಗಳಿಗೆ ಭಾರಿ ಡಿಮ್ಯಾಂಡ್ ಬಂದಿದ್ದು, ಈಗಾಗಲೇ ಅನೇಕ ಜನರು ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ ಹೊಸ ಕಾರ್ಡ್ ಪಡೆಯಲು ಕಾತುರದಿಂದ ಕಾಯುತ್ತಿದ್ದಾರೆ, ಕಳೆದ ವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೆಎಚ್ ಮುನಿಯಪ್ಪ ಇದೇ ತಿಂಗಳು 31ನೇ ತಾರೀಖಿನ ಒಳಗಾಗಿ ಈಗಾಗಲೇ ಸಲ್ಲಿಸಿರುವ ಅರ್ಜೆಗಳನ್ನು ವಿಲೇವಾರಿ ಮಾಡಿ ಹೊಸ ರೇಷನ್ ಕಾರ್ಡ್ ಗಳನ್ನು ವಿತರಿಸಲಾಗುವುದು ಎಂದು ಹೇಳಿದ್ದಾರೆ. ಈಗಾಗಲೇ ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದರೆ ಅದರ ಸ್ಥಿತಿಯನ್ನು ಮೊಬೈಲ್ ನಲ್ಲೆ ಚೆಕ್ ಮಾಡುವುದು ಹೇಗೆ ಎಂಬುದರ ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಹೊಸ ಪಡಿತರ ಚೀಟಿಯ ವಿತರಣೆ ಪ್ರಾರಂಭ :
ರೇಷನ್ ಕಾರ್ಡ್ ಇದ್ದವರಿಗೆ ಸರ್ಕಾರದ ಯೋಜನೆಗಳನ್ನು ಪಡೆಯಲು ಅನುಕೂಲ ಆಗುತ್ತದೆ. ಅನ್ನಭಾಗ್ಯ ಯೋಜನೆಗೆ ಬಿಪಿಎಲ್ ಕಾರ್ಡ್ ಬೇಕು ಹಾಗೂ ಗೃಹಲಕ್ಷ್ಮಿ ಯೋಜನೆ ಪಡೆಯಲು ಸಹ ರೇಷನ್ ಕಾರ್ಡ್ ಅಗತ್ಯ ಈಗಾಗಲೇ ರೇಷನ್ ಕಾರ್ಡ್ ಹೊಂದಿರುವವರು 2,000ರೂ. ಗಳ ಪ್ರಯೋಜನ ಪಡೆಯುತ್ತಿದ್ದಾರೆ. ಹೀಗಾಗಿ ಈಗಾಗಲೇ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದವರು ಹಾಗೂ ಹೊಸದಾಗಿ ಅರ್ಜಿ ಸಲ್ಲಿಸಬೇಕು ಎಂದುಕೊಂಡವರಿಗೆ ಸಿಹಿಸುದ್ದಿ ಇದೆ.
ಈಗಾಗಲೇ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದವರಿಗೆ ಇದೇ 31ನೇ ತಾರೀಖಿನೊಳಗೆ ರೇಷನ್ ಕಾರ್ಡ್ ದೊರೆಯಲಿದ್ದು, ಹಳೆಯ ಅರ್ಜಿ ಪ್ರಕ್ರಿಯೆ ಮತ್ತು ವಿಲೇವಾರಿ ಮುಗಿದ ಬಳಿಕ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅಂದರೆ ಇದೇ ಏಪ್ರಿಲ್ 1ರ ನಂತರ ಅವಕಾಶ ಕೊಡಲಾಗುತ್ತದೆ ಎಂದು ಹೇಳಿದ್ದಾರೆ. ಈಗಾಗಲೇ 75% ಪರಿಶೀಲನೆ ಮುಗಿದಿದ್ದು ಈ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಅರ್ಹರಿಗೆ ಹೊಸ ರೇಷನ್ ಕಾರ್ಡ್ ವಿತರಿಸಿರುವಂತೆ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಿರುವುದಾಗಿ ಆಹಾರ ಸಚಿವ ಕೆ ಹೆಚ್ ಮುನಿಯಪ್ಪನವರು ಸುದ್ದಿಗೋಷ್ಠಿ ಒಂದರಲ್ಲಿ ತಿಳಿಸಿದ್ದಾರೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಹೊಸ ರೇಷನ್ ಸ್ಥಿತಿ ಚೆಕ್ ಮಾಡುವುದು ಹೇಗೆ?
ಸೂಚನೆ – ರೇಷನ್ ಕಾರ್ಡ್ ಸ್ಥಿತಿಯನ್ನು ತಿಳಿದುಕೊಳ್ಳಲು ನೀವು ಬೆಳಿಗ್ಗೆ 10:00 ಗಂಟೆ ಮೇಲೆ ಪ್ರಯತ್ನ ಮಾಡಿ. ಈಗ ಸ್ಥಿತಿ ಚೆಕ್ ಮಾಡುವುದನ್ನು ಬಂದ್ ಮಾಡಿರುತ್ತಾರೆ
ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ
ಹಂತ 1: ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ, ನಂತರ ಕೆಳಗಡೆ e-Status ಮೇಲೆ ಕ್ಲಿಕ್ ಮಾಡಿ. ನಂತರ ಕೆಳಗಡೆ New/Existing RC Request Status ಮೇಲೆ ಕ್ಲಿಕ್ ಮಾಡಿ
ಹಂತ 2: ಹಂತ 1 – ನಿಮ್ಮ ಜಿಲ್ಲೆಯನ್ನು ಸೆಲೆಕ್ಟ್ ಮಾಡಿ
ಹಂತ 3 – ನಂತರ ಹೊಸ ಪಡಿತರ ಚೀಟಿ ಸಲ್ಲಿಸಲಾದ ಅರ್ಜಿಯ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮದು ಸಿಟಿ ಆಗಿದ್ದಲ್ಲಿ urban IRA ಸೆಲೆಕ್ಟ್ ಮಾಡಿ ಅಥವಾ ಹಳ್ಳಿ ಆಗಿದ್ರೆ RURAL ಸೆಲೆಕ್ಟ್ ಮಾಡಿ ನಂತರ ನಿಮ್ಮ ತಾಲೂಕು, ಗ್ರಾಮ ಪಂಚಾಯತಿ & ಊರು ಸೆಲೆಕ್ಟ್ ಮಾಡಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ ಸ್ವೀಕೃತಿ ಸಂಖ್ಯೆ ಹಾಕಿ GO ಮೇಲೆ ಕ್ಲಿಕ್ ಮಾಡಿ. ಇಲ್ಲಿ ನಿಮ್ಮ ಅರ್ಜಿಯ ಸ್ಥಿತಿ ಕಾಣಿಸುತ್ತದೆ
ಇಂದಿನ ದಿನಗಳಲ್ಲಿ ಬಿಪಿಎಲ್ ಕಾರ್ಡ್ ಮುಖ್ಯವಾಗಿ ಬೇಕೇ ಬೇಕಾಗುತ್ತದೆ. ಯಾವುದೇ ಯೋಜನೆಗಳ ಫಲವನ್ನು ಪಡೆದುಕೊಳ್ಳಲು ಅಥವಾ ಆಸ್ಪತ್ರೆಗಳಿಗೆ, ಹೀಗೆ ಇತ್ಯಾದಿ ಸಂದರ್ಭದಲ್ಲಿ ಬಿಪಿಎಲ್ ಕಾರ್ಡ್ ನಮಗೆ ಉಪಯೋಗಕ್ಕೆ ಬರುತ್ತದೆ. ಹಾಗಾಗಿ ನೀವೇನಾದರೂ ಬಿಪಿಎಲ್ ಕಾರ್ಡನ್ನು ಪಡೆಯಲು ಅರ್ಹರಿದ್ದರೆ ಕೂಡಲೇ ಅರ್ಜಿಗಳನ್ನು ಸಲ್ಲಿಸಿ. ಇಂತಹ ಉತ್ತಮ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಮತ್ತಷ್ಟು ಏರಿಕೆಯಾದ ಚಿನ್ನದ ಬೆಲೆ, ಇಂದು ಬರೋಬ್ಬರಿ 1300 ರೂಪಾಯಿ ಏರಿಕೆ, ಇಂದಿನ ಚಿನ್ನದ ಬೆಲೆ ಇಲ್ಲಿದೆ
- ಈಗ ಮೊಬೈಲ್ನಲ್ಲೇ ಹಳೆಯ ವೋಟರ್ ಕಾರ್ಡ್ ಡೌನ್ಲೋಡ್ ಮಾಡಿ, ಇಲ್ಲಿದೆ ಲೈವ್ ವಿಡಿಯೋ @voters.eci.gov.in
- 2024 ರ ಮತದಾರರ ಪಟ್ಟಿ ಬಿಡುಗಡೆ. ಮೊಬೈಲ್ ನಲ್ಲಿ ನೋಡುವುದು ಹೇಗೆ? Karnataka Voter List Download 2024
- ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ 2000/- ಹಣ ಜಮಾ ಆಗಿದೆ. ನಿಮ್ಮ ಖಾತೆಗೆ ಬರದೇ ಇದ್ರೆ ಹೀಗೆ ಮಾಡಿ!
- ಸ್ವಂತ ಮನೆ ಕಟ್ಟಲು ಸಾಲ ಮತ್ತು ಸಬ್ಸಿಡಿ ಯೋಜನೆಗೆ ಹೀಗೆ ಅರ್ಜಿ ಸಲ್ಲಿಸಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.