ಕಳೆದ ವಾರದಿಂದ ರಾಜ್ಯದಲ್ಲಿ ವರುಣ ದಯೆ ತೋರಿದ್ದು ಬಹುತೇಕ ಎಲ್ಲಾ ಜಿಲ್ಲೆಗಳಿಗೆ ಮುಂಗಾರಿನ ಆಗಮನವಾಗಿದೆ. ಕಳೆದ ಎರಡು ದಿನಗಳಿಂದ ಮತ್ತೆ ಬಿಸಿಲಿನ ತಾಪಮಾನ ಏರಿದ್ದು. ಆದಷ್ಟು ಬೇಗ ಮಳೆ ಆಗಲಿ ಎಂದು ಜನ ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಈ ನಡುವೆ ಇದೇ ಬರುವ ಏಪ್ರಿಲ್ 18 ಮತ್ತು 19ರಂದು ಮತ್ತೆ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ, ಅಷ್ಟೇ ಅಲ್ಲದೆ ರಾಜ್ಯದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Karnataka weather Updates : ಕರ್ನಾಟಕ ಹವಾಮಾನ ವರದಿ
ಬಿಸಿಲಿನಿಂದ ಕಂಗೆಟ್ಟ ಜನರಿಗೆ ಮಳೆ ಖುಷಿ ತಂದಿದೆ. ನಿನ್ನೆ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು, ಗಾಳಿ ಸಹಿತ ಭಾರೀ ಮಾಳೆಯಾಗಿದೆ. ಇಂದು ಸಹ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ. ಇನ್ನು ಮತ್ತೊಂದೆಡೆ ಉತ್ತರ ಒಳನಾಡು ಹಾಗೂ ಮಲೆನಾಡುವ ಭಾಗದ ಹಲವು ಭಾಗಗಲ್ಲಿ ಬುಧವಾರ (ಏಪ್ರಿಲ್ 17) ಮಳೆರಾಯ ತಂಪೆರೆಯಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ವಾರ ರಾಜ್ಯದ ಬಹುತೇಕ ಜಿಲ್ಲಿಗಳಲ್ಲಿ ಮಳೆರಾಯ ಕರುಣೆ ತೋರಿದ್ದು, ಬೆಂಗಳೂರು, ಚಾಮರಾಜನಗರದಲ್ಲಿ ಮಾತ್ರ ಬಿಸಿಲಿನ ವಾತವಾರಣ ಮುಂದುವರೆದಿದೆ. ಹಾಗೆಯೇ ಇನ್ನು ಮುಂದಿನ ಒಂದು ವಾರವೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲಿನ ವಾತಾವರಣ ಮುಂದುವರೆಯಲಿದ್ದು, ಬಳಿಕ ಮಳೆಯಾಗುವ ಸಾಧ್ಯತೆಯಿದೆ.
ಮಧ್ಯಮ ಚಂಡಮಾರುತ ಜೊತೆಗೆ ಮಳೆ ಬರಲಿದೆ. ಅಲ್ಲದೇ 40 ರಿಂದ 50 ಕೀಮಿ ವೇಗದಲ್ಲಿ ಗಾಳಿ ಸಾಧ್ಯತೆ ಇದೆ ಎಂದು ಸೂಚನೆ ನೀಡಿದೆ ಹವಾಮಾನ ಇಲಾಖೆ. ರಾಜ್ಯದಲ್ಲಿ ಏಪ್ರಿಲ್ 18, 19ರಂದು ಧಾರಕಾರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಭಾರೀ ಮಳೆ ಸುರಿಯುವ ಮುನ್ಸೂಚನೆ ಹಿನ್ನೆಲೆ ಈ ಎರಡು ದಿನ ಎಲ್ಲಾ 31 ಜಿಲ್ಲೆಗಳಿಗೂ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.
2024 ರಲ್ಲಿ ಉತ್ತಮ ಮಳೆ
ಕರ್ನಾಟಕ ರಾಜ್ಯದಲ್ಲಿ ಕಳೆದ ವರ್ಷ ನಿರೀಕ್ಷೆಯಂತೆ ಮಳೆಯಾಗದೆ ಇರುವ ಕಾರಣ ತೀರ್ವ ಬರಗಾಲ ಉಂಟಾಯಿತು. ಆದರೆ 2024ರಲ್ಲಿ ಒಳ್ಳೆಯ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದೇ ಮಾರ್ಚ್ ಎಲ್ ನಿನೋ ಪ್ರಭಾವ ತಗ್ಗಿ ಮುಂಗಾರು ಉತ್ತಮವಾಗಲಿದೆ. ಹೌದು 2023 ಜನವರಿ 1 ರಿಂದ ಡಿಸೆಂಬರ್ 31ರವರೆಗೆ ರಾಜ್ಯದಲ್ಲಿ ವಾಡಿಕೆಯ ಪ್ರಕಾರ, 1153 ಮಿ.ಮೀ. ಮಳೆ ಸುರಿಯಬೇಕು. ಆದರೆ, ಕೇವಲ 872 ಮಿ.ಮೀ. ಮಾತ್ರ ಮಳೆಯಾಗಿದೆ. 19 ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾದರೆ, 12 ಜಿಲ್ಲೆಗಧಿಳಲ್ಲಿಸಾಮಾನ್ಯ ಮಳೆ ಕೊರತೆ ಉಂಟಾಗಿದೆ. ಅತಿ ಹೆಚ್ಚು ಮಳೆಯಾಗುವ ಕರಾವಳಿಯಲ್ಲಿ ಶೇ. 19ರಷ್ಟು ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಶೇ.35ರಷ್ಟು ಮಳೆ ಕೊರತೆ ಉಂಟಾಗಿದೆ.
2023 ರಲ್ಲಿ ಬೆಂಗಳೂರಿನಲ್ಲಿ ಕೇವಲ 1020.2 ಮಿಮೀ ಮಳೆಯಾಗಿದೆ. ಇದು ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕನಿಷ್ಠ ವಾರ್ಷಿಕ ಮಳೆ. ಜೂನ್ ಮತ್ತು ಸೆಪ್ಟೆಂಬರ್ ನಡುವೆ (ನೈಋತ್ಯ ಮಾನ್ಸೂನ್) 474.6 ಮಿಮೀ ಮಳೆ ದಾಖಲಾಗಿದ್ದರೆ, ಅಕ್ಟೋಬರ್ ಮತ್ತು ನವೆಂಬರ್ನಲ್ಲಿ (ಈಶಾನ್ಯ ಮಾನ್ಸೂನ್) 202.9 ಮಿಮೀ ಮಳೆ ದಾಖಲಾಗಿದೆ. ಇಡೀ ವರ್ಷ, ಬೆಂಗಳೂರು ನಗರದಲ್ಲಿ ಕೇವಲ 54 ದಿನ ಮಾತ್ರ ಮಳೆ ಬಿದ್ದಿತ್ತು ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.
ಈ ಮಾಹಿತಿಗಳನ್ನು ಓದಿ
- ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಪಡೆಯಲು, ಸರ್ಕಾರದಿಂದ ಹೊಸ ಕಾರ್ಡ್ ವಿತರಣೆ
- ರೈತರೇ ಗಮನಿಸಿ, ಅತಿ ಕಡಿಮೆ ಬಡ್ಡಿ ದರದಲ್ಲಿ ಬರೋಬ್ಬರಿ 3 ಲಕ್ಷ ರೂ. ಸಾಲ ಸೌಲಭ್ಯ, ಹೀಗೆ ಅಪ್ಲೈ ಮಾಡಿ
- ರಾಜ್ಯದಲ್ಲಿ ಏ.17 ರವರೆಗೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ..