ಇಂದು ಮೇ 1, ಅಂದರೆ ತಿಂಗಳ ಮೊದಲ ದಿನವಾದ ಇಂದು ಹಲವು ಹೊಸ ನಿರ್ಧಾರಗಳನ್ನು ಜಾರಿಗೆ ತರಲಾಗಿದೆ. ಹೊಸ ನಿಯಮಗಳು ಜಾರಿ ಆಗಲಿದೆ. ಸಾಮಾನ್ಯವಾಗಿ ಪ್ರತಿ ತಿಂಗಳ 1 ಮತ್ತು 15 ರಂದು, ತೈಲ ಕಂಪನಿಗಳು ಗ್ಯಾಸ್ ಸಿಲಿಂಡರ್ ಬೆಲೆಗಳನ್ನು ಪರಿಷ್ಕರಿಸುತ್ತವೆ. ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ (Commercial LPG Cylinder Price) ಪರಿಷ್ಕರಣೆ ಮಾಡಲಾಗಿದ್ದು, ದರದಲ್ಲಿ 19 ರೂ. ಇಳಿಕೆ ಮಾಡಲಾಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಸಿಲಿಂಡರ್ ಬೆಲೆಯಲ್ಲಿ ಇಳಿಕೆ
ತಿಂಗಳ ಮೊದಲ ದಿನವೇ ಬೆಲೆ ಹೆಚ್ಚಳ ಅಥವಾ ಕಡಿಮೆ ಆಗುವುದು ಸಾಮಾನ್ಯ ಸಂಗತಿ. ಇದೀಗ ಮೇ 1ರಂದೇ ಜನಸಾಮಾನ್ಯರಿಗೆ ಶುಭ ಸುದ್ದಿ ಸಿಕ್ಕಿದೆ. ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆಯಾಗಿದೆ. ಆದರೆ ಮನೆಯಲ್ಲಿ ಬಳಸುವ ಅಡುಗೆ ಅನಿಲ ಸಿಲಿಂಡರ್ ಬೆಲೆ ಸ್ಥಿರವಾಗಿದ್ದು, ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ ಮಾಡಲಾಗಿದೆ.
ಮೆಟ್ರೋ ನಗರಗಳಾದ ನವದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈ ಸೇರಿದಂತೆ ದೇಶದಾದ್ಯಂತ 19 ಕಿ.ಗ್ರಾಂಗಳಷ್ಟು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ತೈಲ ಮಾರುಕಟ್ಟೆ ಕಂಪನಿಗಳು ಬುಧವಾರ ಕಡಿತಗೊಳಿಸಿವೆ. ಪರಿಷ್ಕೃತ ದರಗಳು ತಕ್ಷಣದಿಂದಲೇ ಜಾರಿಗೆ ಬರಲಿದೆ.
ಕಳೆದ ವರ್ಷ ಮೇ ತಿಂಗಳಲ್ಲಿ ಸಿಲಿಂಡರ್ ಬೆಲೆ ಇಳಿಕೆಯಾಗಿತ್ತು. ಮೇ 2023 ರ ಆರಂಭದಲ್ಲಿ, ಸಿಲಿಂಡರ್ ಬೆಲೆ ರೂಪಾಯಿ 172ರಷ್ಟು ಇಳಿಕೆಯಾಗಿತ್ತು. ಆದರೆ ಈ ಕಡಿತವು ವಾಣಿಜ್ಯ ಅನಿಲ ಸಿಲಿಂಡರ್‌ಗೆ ಮಾತ್ರ ಅನ್ವಯಿಸುತ್ತದೆ. ಕಳೆದ ವರ್ಷ ಇದೇ ಸಮಯದಲ್ಲಿ ಗೃಹಬಳಕೆಯ ಸಿಲಿಂಡರ್ ಬೆಲೆ ಬಹುತೇಕ ಸ್ಥಿರವಾಗಿತ್ತು.
ನವದೆಹಲಿಯಲ್ಲಿ ಇಂದಿನಿಂದ ವಾಣಿಜ್ಯ ಸಿಲಿಂಡರ್ ಬೆಲೆ 1,745.50 ರೂ. ಆಗಿದೆ. ಮುಂಬೈನಲ್ಲಿ 1,74917.50 ರೂ. ನಿಂದ 1,698.50 ಕ್ಕೆ ಇಳಿಕೆಯಾಗಿದೆ. ಚೆನ್ನೈನಲ್ಲೂ 19 ರೂ. ಇಳಿಕೆಯಾಗಿದೆ. ಈಗಿನ ಬೆಲೆ 1,930 ರೂ. ಗಳಾಗಿದ್ದು, 1,911 ರೂಪಾಯಿಗೆ ಇಳಿಕೆಯಾಗಿದೆ. ಈ ನಡುವೆ ಕೋಲ್ಕತ್ತಾದಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1,860 ರೂ.ನಿಂದ ಕುಸಿತ ಕಂಡಿದೆ.
19 ಕೆಜಿ LPG ಸಿಲಿಂಡರ್ ಬೆಲೆ
ಸಿಟಿ | ಬೆಲೆ |
ದೆಹಲಿ | 1,745.50 ರೂ |
ಮುಂಬೈ | 1,698.50 ರೂ |
ಕೋಲ್ಕತ್ತಾ | 1,859 ರೂ |
ಚೆನ್ನೈ | 1,911 ರೂ |
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿ