ಇದೀಗ ರಾಜ್ಯ ಸರ್ಕಾರವು (state government) ಸರ್ಕಾರಿ ನೌಕರರಿಗೆ (government employee’s) ಒಂದು ಸುತ್ತೋಲೆಯನ್ನು (Circular) ಹೊರಡಿಸಿದೆ. ಇದರಲ್ಲಿ ಹಲವು ನಿಯಮಗಳು ಮತ್ತು ಮಾಹಿತಿಗಳಿವೆ ಅದನ್ನು ಸರ್ಕಾರಿ ನೌಕರರು ಪಾಲಿಸಲೇಬೇಕು. ಏನಿದು ಸುತ್ತೋಲೆ ಎಂಬ ಮಾಹಿತಿಯನ್ನು ಸಂಪೂರ್ಣ ವಾಗಿ ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕದ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ಇದಾಗಿದ್ದು, ಇದರಲ್ಲಿ ಹಲವು ಸರ್ಕಾರಿ ನೌಕರರ ಸೇವೆಗಳ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. HRMS ಪೋರ್ಟಲ್‌ನಲ್ಲಿ ನೌಕರರು ಸೇವೆಗಳನ್ನು ಸದುಪಯೋಗಪಡಿಸಿಕೊಳ್ಳುವ ಬಗ್ಗೆ ಸುತ್ತೋಲೆಯೊಂದನ್ನು ಹೊರಡಿಸಲಾಗಿದೆ. ಈ ಕುರಿತು ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ-2.0 ನಿರ್ದೇಶನಾಲಯ, ಆರ್ಥಿಕ ಇಲಾಖೆ ಯೋಜನಾ ವ್ಯವಸ್ಥಾಪಕರು ಹೆಚ್.ಆರ್.ಎಂ.ಎಸ್-2.0 ಸುತ್ತೋಲೆಯನ್ನು ಹೊರಡಿಸಿದ್ದಾರೆ.
ಏನಿದೆ ಈ ಸುತ್ತೋಲೆಯಲ್ಲಿ (what are the information in circular) :
ರಾಜ್ಯದ ಎಲ್ಲಾ ಸರ್ಕಾರಿ ನೌಕರರು ಹೆಚ್‌ಆರ್‌ಎಂಎಸ್‌ನ ನೌಕರರ ಸ್ವಯಂ ಸೇವೆ (Employee Self Service-ESS) ಪೋರ್ಟಲ್‌ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳುವ ಬಗ್ಗೆ ರಾಜ್ಯ ಸರ್ಕಾರವು ಈ ಸುತ್ತೋಲೆಯನ್ನು ಹೊರಡಿಸಿದೆ.
ಹೆಚ್‌ಆರ್ ಎಂಎಸ್ ನಿರ್ದೇಶನಾಲಯವು ನೌಕರರ ಸ್ವಯಂ ಸೇವೆ (Employee Self Service-ESS) ಪೋರ್ಟಲ್‌ಅನ್ನು ಸಿದ್ಧಪಡಿಸಿದೆ :
ಹೆಚ್‌ಆರ್ ಎಂಎಸ್ ನಿರ್ದೇಶನಾಲಯವು ನೌಕರರ ಸ್ವಯಂ ಸೇವೆ (Employee Self Service-ESS) ಪೋರ್ಟಲ್‌ಅನ್ನು ಸಿದ್ಧಪಡಿಸಿದ್ದು, ಇದರಲ್ಲಿ ಸರ್ಕಾರಿ ನೌಕರರಿಗೆ ಉಪಯೋಗ ಆಗುವ ಮಾಹಿತಿಯನ್ನು ಪಡೆಯಬಹುದು. ರಾಜ್ಯ ಸರ್ಕಾರಿ ನೌಕರರಿಗೆ ಅನುಕೂಲವಾಗಲೆಂದೇ ಈ ಒಂದು ಪೋರ್ಟಲ್ (portal) ಅನ್ನು ಬಿಡುಗಡೆ ಮಾಡಿದ್ದಾರೆ. ಈ ಒಂದು ಪೋರ್ಟಲ್ ಸರ್ಕಾರಿ ನೌಕರರ ಸ್ನೇಹಿಯಾಗಿದ್ದು, ಇದರಲ್ಲಿ ಹಲವು ರೀತಿಯ ಸೌಲಭ್ಯಗಳನ್ನು ಪಡೆಯಬಹುದಾಗಿದೆ.
ವಿಮಾ ಪಾಲಿಸಿ (Insurance policies) ಮತ್ತು ಹಲವು ಯೋಜನೆಗಳ ಮಾಹಿತಿ HRMS-ESS ಪೋರ್ಟಲ್ ನಲ್ಲಿ ಲಭ್ಯ :
HRMS-ESS ಪೋರ್ಟಲ್ ನಲ್ಲಿ ಇನ್ನು ಹಲವು ಮಾಹಿತಿ ಮತ್ತು ವಿಮಾ ಪಾಲಿಸಗಳ ಬಗ್ಗೆ ಲಾಗಿನ್ ಆಗುವ ಮೂಲಕ ತಿಳಿದು ಕೊಳ್ಳಬಹುದು. ರಾಜ್ಯ ಸರ್ಕಾರದ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ/ಸಿಬ್ಬಂದಿ ವರ್ಗದವರು ಪ್ರಧಾನ ಮಂತ್ರಿ ಜನ ಸುರಕ್ಷಾ ಯೋಜನೆಯ (Pradhan Mantri Jan Suraksha Yojana) ವ್ಯಾಪ್ತಿಗೆ ಬರುವ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (PMJJBY) (ಪಿಎಂಜೆಜೆಬಿವೈ), ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ (PMSBY) (ಪಿಎಂಎಸ್‌ಬಿವೈ) ಯೋಜನೆಗಳಡಿ ಮಾಡಿಸಿದ ವಿಮಾ ಪಾಲಿಸಿಗಳ ಮಾಹಿತಿಯನ್ನು HRMS-ESS Login ನಲ್ಲಿ ಭರ್ತಿ ಮಾಡಲು ಸಹ ತಿಳಿಸಿದ್ದಾರೆ.
ಈ ಪೋರ್ಟಲ್ ಮೂಲಕ ವೇತನ ಚೀಟಿ, ರಜೆ ವಿವರಗಳ ಮಾಹಿತಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು :
ಈಗಾಗಲೇ ತಿಳಿಸಿರುವ ಪ್ರಕಾರ ರಾಜ್ಯ ಸರ್ಕಾರದ ಪ್ರತಿ ಸಿಬ್ಬಂದಿಗಳ ತಮ್ಮದೇ ಆದ ವೇತನ ಚೀಟಿ, ರಜೆ ವಿವರಗಳು ಮತ್ತು ಕಡಿತದ ಸಾರಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳುವ ಸದುಪಯೋಗವನ್ನು ಪಡೆದುಕೊಳ್ಳಲು HRMSESS Login (https://hrmsess.karnataka.gov.in) ಪೋರ್ಟಲ್ ನಲ್ಲಿ ನೋಂದಾಯಿಸಿಕೊಳ್ಳಬಹುದು.
ಅಷ್ಟೇ ಅಲ್ಲದೇ ಪ್ರತಿ ಸಿಬ್ಬಂದಿಗಳು ESS ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡು, ನೌಕರರಿಗೆ ನೀಡಿರುವ ಸೌಲಭ್ಯವನ್ನು ಪಡೆಯುತ್ತಿರುವ ಬಗ್ಗೆ ಡಿಡಿಓರವರು (DDO) ಖಚಿತಪಡಿಸಿಕೊಳ್ಳಬೇಕೆಂದು ತಿಳಿಸಿದೆ. ಹಾಗೂ ತಮ್ಮ ಎಲ್ಲಾ ಉದ್ಯೋಗಿಗಳು ಮೇ-2024 ರ ಮೊದಲು ಈ ಪೋರ್ಟಲ್‌ನಲ್ಲಿ ನೋಂದಾಯಿಸಲು ಅನುವು ಮಾಡಿಕೊಡುವ ಜವಾಬ್ದಾರಿ ಡಿಡಿಓರವರದಾಗಿರುತ್ತದೆ ಎಂದು ಕೂಡ ಈ ಒಂದು ಸುತ್ತೋಲೆಯಲ್ಲಿ ತಿಳಿಸಿದೆ.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿ
ಈ ಮಾಹಿತಿಗಳನ್ನು ಓದಿ