ಎಸ್ ಎಸ್ ಎಲ್ ಸಿ ಫಲಿತಾಂಶ ಅಧಿಕೃತವಾಗಿ ಈ ಕೆಳಗಿನ ವೆಬ್ಸೈಟ್ಗಳಲ್ಲಿ ಮಧ್ಯಾಹ್ನ 1:00 ಗಂಟೆ ನಂತರ ಲಭ್ಯವಾಗಲಿದೆ.
ಫಲಿತಾಂಶವನ್ನು ನೋಡಲು ಈ ಕೆಳಕಂಡ ವೆಬ್‌ಸೈಟ್ ಅನ್ನು ಭೇಟಿ ನೀಡಬಹುದಾಗಿದೆ
https://kseab.karnataka.gov.in
https://karresults.nic.in
https://sslc.karnataka.gov.in
ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಕ್ಕೆ ವಿದ್ಯಾರ್ಥಿಗಳು ಮತ್ತು ಪೋಷಕರು ಭಾರಿ ಕಾತುರದಿಂದ ಕಾಯುತ್ತಿದ್ದಾರೆ ,
ನಾಳೆ(ಗುರುವಾರ) ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಬೆಳಗ್ಗೆ 10.30 ರಿಂದ ಅಂತರ್ಜಾಲದಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಮಾರ್ಚ್/ಏಪ್ರಿಲ್ 2024ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ನ್ನು 25.03.2024 ರಿಂದ 06.04.2024ರ ವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ನಾಳೆ (09.05.2024) ಬೆಳಗ್ಗೆ 10.30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.
ಫಲಿತಾಂಶ ನೋಡುವುದು ಹೇಗೆ?
ಅಧಿಕೃತ ಸೂಚನೆಯಂತೆ, ಫಲಿತಾಂಶವನ್ನು ಮೇ 9 ರಂದು ಬೆಳಗ್ಗೆ 10:30 ಕ್ಕೆ ಪತ್ರಿಕಾಗೋಷ್ಠಿಯ ಮೂಲಕ ಪ್ರಕಟಿಸಲಾಗುವುದು. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು KSEAB ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶಗಳು 2024 ಅನ್ನು ಅಧಿಕೃತ ವೆಬ್‌ಸೈಟ್ https://karresults.nic.in/ ಮತ್ತು https://kseab.karnataka.gov.in/ ನಲ್ಲಿ ಪರಿಶೀಲಿಸಲು ಮತ್ತು ಡೌನ್‌ಲೋಡ್ ಮಾಡಲು ಸಾಧ್ಯವಾಗುತ್ತದೆ. ಕರ್ನಾಟಕ SSLC ಫಲಿತಾಂಶ 2024 ಡೌನ್‌ಲೋಡ್ ಮಾಡುವುದು ಹೇಗೆ ಎಂಬುದನ್ನು ಪರಿಶೀಲಿಸಿ.
ಹಂತ 1: kseab.karnataka.gov.in ಮತ್ತು karresults.nic.in ಅಧಿಕೃತ ವೆಬ್‌ಸೈಟ್‌ಗಳಿಗೆ ಹೋಗಿ
ಹಂತ 2: ಹೋಂ ಪೇಜ್ ನಲ್ಲಿ ಕರ್ನಾಟಕ SSLC ಫಲಿತಾಂಶ 2024 ಅನ್ನು ಡೌನ್‌ಲೋಡ್ ಮಾಡಲು ಲಿಂಕ್ ಕ್ಲಿಕ್ ಮಾಡಿ.
ಹಂತ 3: ನಿಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ಬಳಸಿಕೊಂಡು ಲಾಗ್ ಇನ್ ಮಾಡಿ.
ಹಂತ 4: “Submit” ಬಟನ್ ಕ್ಲಿಕ್ ಮಾಡಿ.
ಹಂತ 5: ಕರ್ನಾಟಕ SSLC ಫಲಿತಾಂಶ 2024 ಅನ್ನು ಸ್ಕ್ರೀನ್ ಮೇಲೆ ಪ್ರದರ್ಶಿಸಲಾಗುತ್ತದೆ
ಹಂತ 6: ಹೆಚ್ಚಿನ ರೆಫೆರೆನ್ಸ್ ಗಾಗಿ ಫಲಿತಾಂಶ ಡೌನ್‌ಲೋಡ್ ಮಾಡಿ ಅಥವಾ ಪ್ರಿಂಟ್ ಔಟ್ ತೆಗೆದುಕೊಳ್ಳಿ
ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆಯ ಕ್ಷಣಕ್ಷಣದ ಮಾಹಿತಿ ನೀಡ್ಸ್ ಪಬ್ಲಿಕ್ ಆಂಡ್ರಾಯ್ಡ್ ಆಪ್ ನಲ್ಲಿ ಲಭ್ಯವಿದ್ದು. ಈ ಕೆಳಗೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಆಪ್ ಇನ್ಸ್ಟಾಲ್ ಮಾಡಿಕೊಳ್ಳಿ.
https://play.google.com/store/apps/details?id=com.needsofpublic.universal
ನಂತರ ಹೋಂ ಪೇಜ್ ನಲ್ಲಿರುವ ರಿಸಲ್ಟ್ ಆಪ್ಷನ್ ಮೇಲೆ ಕ್ಲಿಕ್ ಮಾಡಿ. ಎಸ್ ಎಸ್ ಎಲ್ ಸಿ ಪರೀಕ್ಷಾ ರಿಸಲ್ಟ್ ನೇರವಾದ ಲಿಂಕ್ ಮೂಲಕ ತಮ್ಮ ರಿಸಲ್ಟ್ಗಳನ್ನು ಡೌನ್ಲೋಡ್ ಮಾಡಿಕೊಳ್ಳ ಬಹುದು
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Timmayya Nayak