ರಾಜ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು ಬಿಸಿಲಿನಿಂದ ಹೈರಾಣಗಿದ್ದ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಇನ್ನೂ 4 ದಿನ ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿರುಗಾಳಿ ಸಹಿತ ಮಳೆಯಾರ್ಭಟ ಇರಲಿದೆ ಎಂದು ಸೂಚನೆ ನೀಡಿದೆ. ಇಂದು ರಾಜ್ಯಾದ್ಯಂತ ಎಲ್ಲೆಲ್ಲಿ ಮಳೆ ಆಗುತ್ತೆ ಎನ್ನುವುದುದರ ವಿವರ ಕೆಳಗೆ ಕೊಡಲಾಗಿದೆ
Karnataka weather Updates : ಕರ್ನಾಟಕ ಹವಾಮಾನ ವರದಿ
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೇ 18 ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಕೊಡಗು, ಮೈಸೂರು,ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ,ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ. ಉತ್ತರ ಕರ್ನಾಟಕದ- ಬೆಳಗಾವಿ, ಧಾರವಾಡ, ಹಾವೇರಿ. ದಕ್ಷಿಣ ಕರ್ನಾಟಕ -ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಭಾನುವಾರ ರಾತ್ರಿ ಹಾಗೂ ಸೋಮವಾರ ಉತ್ತಮ ಮಳೆಯಾಗಿದೆ. ಬೆಂಗಳೂರು ನಗರದಲ್ಲಿಯೇ 2 ಸೆ.ಮೀಗೂ ಅಧಿಕ ಮಳೆ ಸುರಿದಿದೆ. ದೊಡ್ಡನೆಕ್ಕುಂದಿ ಭಾಗದಲ್ಲಿ ಉತ್ತಮ ಮಳೆಯಾಗಿದ್ದು 74 ಮಿ.ಮೀ ಮಳೆ ದಾಖಲಾಗಿದೆ.
ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ 24 ಗಂಟೆಗಳಲ್ಲಿ ಮೋಡ ಕವಿದ ವಾತಾವರಣ ಕಂಡು ಬರಲಿದೆ.ಕೆಲವು ಪ್ರದೇಶಗಳಲ್ಲಿ ಸಂಜೆ ಇಲ್ಲವೇ ರಾತ್ರಿ ವೇಳೆಗೆ ಹಗುರದಿಂದ ಸಾಧಾರಣ ಮಳೆ ಗುಡುಗು ಸಹಿತ ಸುರಿಯಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನವು 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 24 ಡಿಗ್ರಿ ಸೆಲ್ಸಿಯಸ್ ದಾಖಲಾಗಬಹುದು. ಅದೇ ರೀತಿ ಮುಂದಿನ 48 ಗಂಟೆಗಳಲ್ಲೂ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗಲಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.