ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಮುಂದುವರಿದಿದೆ. ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಗುಡುಗು, ಮಿಂಚು, ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಇಂದಿನಿಂದ ಮಳೆ ಇನ್ನಷ್ಟು ಚುರುಕುಗೊಳ್ಳಲಿದೆ. ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಏಳುವ ಸಾಧ್ಯತೆ ಇದ್ದು, ಮುಂದಿನ 48 ಗಂಟೆಗಳಲ್ಲಿ ಕರ್ನಾಟಕ ಮತ್ತು ಗೋವಾಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ ಹವಾಮಾನ ವರದಿ
ರಾಜ್ಯದಾದ್ಯಂತ ಮೇ 24ರ ತನಕ ತುಂತುರು ಮಳೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಕೇರಳದಲ್ಲಿ ಅಬ್ಬರದ ಮಳೆಯಾಗುತ್ತಿದ್ದು, ಪರಿಣಾಮ ಈ ಬಾರಿ ಕರ್ನಾಟಕಕ್ಕೆ ಮುಂಗಾರು ಬೇಗನೆ ಎಂಟ್ರಿ ಕೊಡುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ರಾಜ್ಯದಾದ್ಯಂತ ಮೇ 31ರವರೆಗಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡಗು ಸಹಿತ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಎಲ್ಲೆಲ್ಲಿ ಮಳೆಯಾಗಲಿದೆ
ಭಾರತೀಯ ಹವಾಮಾನ ಇಲಾಖೆ ಪ್ರಕಾರ ಮುಂದಿನ 5 ದಿನಗಳ ಕಾಲ ಕರ್ನಾಟಕದ 8ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅದೆಲ್ಲವನ್ನು ಹೊರತುಪಡಿಸಿ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ದಕ್ಷಿಣ, ಉತ್ತರ ಒಳನಾಡು ಹಾಗೂ ಕರಾವಳಿ ಭಾಗಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಕರ್ನಾಟಕಕ್ಕೆ ಮೇ 27ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಮೇ 26ರ ಬೆಳಗ್ಗೆವರೆಗೂ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ. ಕೆಲವು ಕಡೆ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ತಿಳಿಸಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.