ರಾಜ್ಯದ ಹಲವು ಭಾಗಗಳಲ್ಲಿ ಜೂನ್ ತಿಂಗಳ ಮೊದಲ ದಿನವೇ ಭಾರಿ ಮಳೆಯಾಗಿದ್ದು ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಹಲವು ಜಿಲ್ಲೆಗಳಲ್ಲಿ ಈಗಾಗಲೇ ಜೂನ್ 8ರವರೆಗೆ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕಳೆದ ಒಂದು ವಾರದಿಂದ ಬಿಸಿಲಿನ ಬೇಗೆಯಿಂದ ಸುಡುತ್ತಿರುವ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಭಾರೀ ಮಳೆ ನಿರೀಕ್ಷಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ ಹವಾಮಾನ ವರದಿ
ಈಗಾಗಲೇ ಕೇರಳದಲ್ಲಿ ಮುಂಗಾರು ಮಾರುತಗಳು ಅಪ್ಪಳಿಸಿ ಬಾರಿ ಮಳೆ ಆಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಈಗಾಗಲೇ ಮಳೆ ಆರ್ಭಟ ಪ್ರಾರಂಭವಾಗಿದ್ದು ನಿನ್ನೆ ಬಹುತೇಕ ಪ್ರದೇಶಗಳಲ್ಲಿ ಭಾರಿ ಮಳೆ ಸುರಿದಿದೆ.
ಬೆಂಗಳೂರಿನ ಶೇಷಾದ್ರಿಪುರಂ, ಶಿವಾನಂದ ಸರ್ಕಲ್, ವಿಜಯನಗರ, ಶಿವಾಜಿನಗರ, ಮೈಸೂರು ರಸ್ತೆ, ಚಾಮರಾಜಪೇಟೆ, ಮಲ್ಲೇಶ್ವರಂ, ವಸಂತನಗರ, ಶಾಂತಿನಗರ, ಜಯನಗರ, ಯಶವಂತಪುರ, ರಾಜಾಜಿನಗರ, ಕೋರಮಂಗಲ ಹಾಗೂ ಎಂಜಿ ರಸ್ತೆ, ಕಬ್ಬನ್ ಪಾರ್ಕ್ ಸೇರಿದಂತೆ ನಗರದ ಹಲವೆಡೆ ಧಾರಾಕಾರ ಮಳೆಯಾಗಿದೆ.
ಮುಂಗಾರು ಮಳೆ ಈ ಬಾರಿ ವಾಡಿಕೆಗಿಂತ ಹೆಚ್ಚೇ ಸುರಿಯುವ ಸಾಧ್ಯತೆ ಇದೆ. ಕಳೆದ ವರ್ಷ ಮುಂಗಾರು ಒಂದು ತಿಂಗಳು ತಡವಾಗಿ ರಾಜ್ಯಕ್ಕೆ ಆಗಮಿಸಿತ್ತು. ಆದರೆ, ಈ ಬಾರಿ ಮಾನ್ಸೂನ್ ಪೂರ್ವ ಮಳೆಯು ಉತ್ತಮವಾಗಿ ಸುರಿದಿದ್ದು, ಆದ್ದರಿಂದ ಮುಂಗಾರು ಮಳೆಯೂ ಭರ್ಜರಿಯಾಗಿ ಸುರಿಯುವ ನಿರೀಕ್ಷೆ ಇದೆ.
9 ಜಿಲ್ಲೆಗೆ ಯೆಲ್ಲೋ ಅಲರ್ಟ್
ರಾಜ್ಯದಲ್ಲಿ ಜೂನ್ 1ರಿಂದಲೇ ಮುಂಗಾರು ಮಳೆ ಪ್ರವೇಶ ಆಗಿದ್ದು, ಇಂದಿನಿಂದ 5 ದಿನಗಳ ಕಾಲ ಭಾರೀ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಂಗಾರು ಪ್ರವೇಶದಿಂದ ಕ್ರಮೇಣ ಧಗೆಯ ತಾಪಮಾನ ಇಳಿಕೆಯಾಗುವ ಸಂಭವವಿದೆ. ಜೂ.2 ಮತ್ತು 3ಕ್ಕೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ನಗರ, ಕೊಡಗು ಸೇರಿ 9 ಜಿಲ್ಲೆಗಳಲ್ಲಿ 6 ರಿಂದ 11 ಸೆಂ.ಮೀ.ವರೆಗೆ ಮಳೆ ಯಾಗುವ ಸಾಧ್ಯತೆ ಇದ್ದು ಜೂನ್ 2ಕ್ಕೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.