ರಾಜ್ಯದಲ್ಲಿ ನಿರೀಕ್ಷೆಯಂತೆ ಜೀವನ್ ತಿಂಗಳ ಮೊದಲ ವಾರದಲ್ಲಿ ಮುಂಗಾರು ಪ್ರವೇಶಿಸಿದ್ದು ಮುಂದಿನ ಎಂಟು ದಿನ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾವೆಲ್ಲ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎನ್ನುವ ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ ಹವಾಮಾನ ವರದಿ
ಕೇರಳದಲ್ಲಿ (Kerala) ಈಗಾಗಲೇ ಮುಂಗಾರು ಮಳೆ (Mansoon Rain) ಚುರುಕುಗೊಂಡಿದೆ. ಹವಾಮಾನ ವರದಿ ಪ್ರಕಾರ ಇಂದಿನಿಂದಲೇ ರಾಜ್ಯದಲ್ಲಿಯೂ ಮುಂಗಾರು ಮಳೆ ಆರಂಭಗೊಳ್ಳಲಿದೆ. ಅದರಲ್ಲೂ ನಿನ್ನೆ (ಜೂನ್ 2, ಭಾನುವಾರ) ಉದ್ಯಾನ ನಗರಿ ಬೆಂಗಳೂರಿನಲ್ಲಿ ಕುಂಭದ್ರೋಣ ಮಳೆಯಾಗಿದ್ದು, ರಸ್ತೆಗಳಲ್ಲಿ ಮಳೆ ನೀರು ಪ್ರವಾಹದಂತೆ ಹರಿದಿದೆ. ಬೆಂಗಳೂರು ಹವಾಮಾನ ಕೇಂದ್ರದ ವರದಿಯ ಪ್ರಕಾರ ಸೋಮವಾರ ಮಂಡ್ಯ ಜಿಲ್ಲೆಯ ಹೊನಕೆರೆಯಲ್ಲಿ ಗರಿಷ್ಠ ಮಳೆಯಾಗಿದೆ. ಇಲ್ಲಿ ಬರೋಬ್ಬರಿ 8 ಸೆಂಟಿ ಮೀಟರ್ ಮಳೆಯಾಗಿದೆ ಎಂದು ಹೇಳಿದೆ.
ಬೆಂಗಳೂರು, ಮೈಸೂರು, ಹಾಸನ ಸಹಿತ ಹಲವು ಭಾಗಗಳಲ್ಲ ಭಾರೀ ಮಳೆಯಾಗುತ್ತಿದೆ. ಪೂರ್ವ ಮುಂಗಾರು ಮಳೆ ಮುಂದಿನ ನಾಲ್ಕು ದಿನಗಳ ಕಾಲ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕಚೇರಿ ತನ್ನ ದೈನಂದಿನ ವರದಿಯಲ್ಲಿ ಹೇಳಿದೆ. ಕರಾವಳಿ, ಮಲೆನಾಡು, ಬೆಂಗಳೂರು, ಹಳೆ ಮೈಸೂರು ಭಾಗವಲ್ಲದೇ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲೂ ಜೂನ್ 6ರವರೆಗೆ ಮಳೆಯಾಗಲಿದೆ.
ಭಾರಿ ಮಳೆ ಸಾಧ್ಯತೆ..!
ಇಂದು ಸೋಮವಾರ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಶಿವಮೊಗ್ಗ, ವಿಜಯನಗರ, ಜಿಲ್ಲೆಗಳಲ್ಲಿ ಹೆಚ್ಚಿನ ಬಿರುಗಾಳಿ ಸಹಿತ ಸಾಧಾರಣ ಮಳೆ ಗುಡುಗು ಸಹಿತ ಸುರಿಯಲಿದೆ. ರಾಯಚೂರು, ಕೊಪ್ಪಳ. ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರ ನಗರ, ಚಾಮರಾಜನಗರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗಲಿದೆ. ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡಗಳಲ್ಲಿ ಭಾರೀ ಮಳೆ ಗುಡುಗು ಸಹಿತ ಆಗಬಹುದು ಎನ್ನುವ ಮುನ್ಸೂಚನೆಯನ್ನು ನೀಡಲಾಗಿದೆ.
ಭರ್ಜರಿ ಮಳೆ ಬೀಳಲಿರುವ ಜಿಲ್ಲೆಗಳು
ಜೂನ್ 4ರ ಮಂಗಳವಾರದಂದು ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯು ಗುಡುಗು ಸಿಡಿಲಿನ ಸಹಿತ ಆಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾ, ಮಂಡ್ಯ, ಮೈಸೂರು ಸೇರಿದಂತೆ ಹಲವು ಸ್ಥಳಗಳಲ್ಲಿ ಸಾಧಾರಣಾ ಮಳೆ ಗುಡುಗು ಸಹಿತವಾಗಿ ಆಗಲಿದೆ. ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಬಹುದು. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಲವು ಕಡಗಳಲ್ಲಿ ಗಾಳಿ ಸಹಿತ ಗುಡುಗಿನೊಂದಿಗೆ ಮಳೆಯಾಗಲಿದೆ.
ಜೂನ್ 5ರ ಬುಧವಾರ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ ಗುಡುಗು ಸಮೇತವಾಗಿ ಆಗಬಹುದು. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಗುಡುಗು ಕೂಡ ಇರಲಿದೆ. ಬಾಗಲಕೋಟೆ. ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಸೇರಿದಂತೆ ಹಲವೆಡೆ ಗುಡುಗು ಸಹಿ ಮಳೆ ಬೀಳಬಹುದು. ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು. ಕೋಲಾರ, ಮಂಡ್ಯ, ಮೈಸೂರು, ರಾಮನರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಜೂನ್ 6ರ ಗುರುವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ, ಗುಡುಗು ಸಹಿತವಾಗಿ ಆಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ ಸೇರಿದಂತೆ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯಲಿದೆ. ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು. ಕೋಲಾರ, ಮಂಡ್ಯ, ಮೈಸೂರು, ರಾಮನರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಹಾಗೇ ರಾಜ್ಯದ ಬಹುತೇಕ ಕೆರೆ & ಕಟ್ಟೆಗಳು ಹಾಗೂ ಡ್ಯಾಂಗಳು ತುಂಬುವ ನಿರೀಕ್ಷೆ ಕೂಡ ಇದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.