ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಬೆಳ್ಳಂ ಬೆಳಗ್ಗೆ ಭಾರಿ ಮಳೆ ಆಗುತ್ತಿದ್ದು, ಹವಾಮಾನ ಇಲಾಖೆ ರಾಜ್ಯದ ಐದು ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಣೆ ಮಾಡಿದ್ದು 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಭಾರಿ ಪ್ರಮಾಣದಲ್ಲಿ ಗಾಳಿ ಬೀಸುವ ಸಂಭವವಿದ್ದು. ಎಚ್ಚರಿಕೆ ನೀಡಲಾಗಿದೆ. ಈ ಸಂಪೂರ್ಣವಾದ ಮಾಹಿತಿ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ ಹವಾಮಾನ ವರದಿ
ಈಗಾಗಲೇ ರಾಜ್ಯಾಂದ್ಯಂತ ರಣಭೀಕರ ಮಳೆ ಸುರಿದ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು ಹೊಡೆಯುವುದಲ್ಲದೆ, ದೊಡ್ಡ ದೊಡ್ಡ ಅನಾಹುತಗಳೇ ಸೃಷ್ಟಿಯಾಗಿವೆ. ಬೆಳಗಾವಿ, ಧಾರವಾಡ, ಹಾವೇರಿ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕಲಬುರಗಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದ್ದು, ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕೆಲವೆಡೆ 30ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.
ಜೂನ್ 15 ರ ವರೆಗೆ ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಪಶ್ಚಿಮ ಘಟ್ಟ ಪ್ರದೇಶಗಳಲ್ಲೂ ಸುರಿಯುತ್ತಿರುವ ಭಾರೀ ಮಳೆಯಿಂದ ನದಿಗಳಲ್ಲಿ ನೀರಿನ ಹರಿವಿನ ಪ್ರಮಾಣ ಏರಿಕೆಯಾಗಿದೆ.
ನೈಋತ್ಯ ಮಾನ್ಸೂನ್:
ಮುಂದಿನ ದಿನಗಳಲ್ಲಿ ಕೇರಳ ಮತ್ತು ಮಾಹೆ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಮತ್ತು ರಾಯಲಸೀಮಾದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ ಮತ್ತು ಮರಾಠವಾಡದಲ್ಲಿ, ಜೂನ್ 9 ರವರೆಗೆ ಪ್ರತ್ಯೇಕವಾದ ಭಾರೀ ಮತ್ತು ಅತಿ ಭಾರೀ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.