ಅತೀ ಕಡಿಮೆ ಬೆಲೆಗೆ ಲಭ್ಯವಿವೆ 5G ಸ್ಮಾರ್ಟ್ ಫೋನ್ ಗಳು!
ಇಂದು ಎಲ್ಲವೂ ಮೊಬೈಲ್ ಮಯವಾಗಿ ಬಿಟ್ಟಿದೆ. ಎಲ್ಲರ ಕೈಯಲ್ಲಿ ದೊಡ್ಡ ದೊಡ್ಡ ಸ್ಮಾರ್ಟ್ ಫೋನ್ ಗಳನ್ನು ಕಾಣುತ್ತೇವೆ. ಅತೀ ಕಡಿಮೆ ಬೆಲೆಗೆ ಉತ್ತಮ ಕ್ಯಾಮೆರಾ, ಬ್ಯಾಟರಿ ಹಾಗೂ ಉತ್ತಮ ಫಿಚರ್ಸ್ ಗಳ ಸ್ಮಾರ್ಟ್ ಫೋನ್ ಗಳು ಇಂದು ಮಾರುಕಟ್ಟೆಯಲ್ಲಿ ಲಭ್ಯವಿವೆ. ಹಾಗೆಯೇ ಇಂದು 4G ಇಂದ 5G ಸೌಲಭ್ಯ ಒಳಗೊಂಡಂತಹ ಸ್ಮಾರ್ಟ್ ಫೋನ್ ಗಳು ಲಭ್ಯವಿವೆ. ನೀವೇನಾದರೂ ಅತೀ ಕಡಿಮೆ ಬೆಲೆಗೆ 5G ಸ್ಮಾರ್ಟ್ ಫೋನ್ ಗಳನ್ನು ಖರೀದಿ ಮಾಡಲು ಬಯಸಿದರೆ ಹಲವು 5G ಸ್ಮಾರ್ಟ್ ಫೋನ್ ಗಳ (5G smart phones) ಬಗ್ಗೆ ಈ ಕೆಳಗೆ ನೀಡಲಾಗಿದೆ. ಅವುಗಳ ಬಗ್ಗೆ ಈ ವರದಿಯಲ್ಲಿ ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಹೆಚ್ಚಿನ ಜನರು 5G ಸ್ಮಾರ್ಟ್ ಫೋನ್ ಗಳತ್ತ ವಾಲುತ್ತಿದ್ದಾರೆ. ಹಾಗೆಯೇ ಇಂದು ಸ್ಮಾರ್ಟ್ ಫೋನ್ ತಯಾರಿಕಾ ಸಂಸ್ಥೆಗಳು ಸಹ ಕಡಿಮೆ ಪ್ರೈಸ್‌ಟ್ಯಾಗ್‌ನಲ್ಲಿ (low price tag) ಆಕರ್ಷಕ 5G ಫೋನ್‌ಗಳನ್ನು ಪರಿಚಯಿಸುತ್ತಿವೆ ಅವುಗಳು ಈ ಕೆಳಗಿನಂತಿವೆ.
ನೋಕಿಯಾ G42 5G (Nokia G42 5G) :
ನೋಕಿಯಾ ಕಂಪೆನಿಯು ಹಳೆಯ ಕಂಪನಿ ಆಗಿದ್ದು ಹೆಚ್ಚು ಜನಪ್ರಿಯತೆ ಮತ್ತು ಹೆಚ್ಚು ಬಾಳಿಕೆ ಬರುವ ಮೊಬೈಲ್ ಗಳನ್ನು ಬಿಡುಗಡೆ ಮಾಡುವ ಸ್ಮಾರ್ಟ್ ಫೋನ್ ಕಂಪನಿ ಇದಾಗಿದೆ. ಈ ಫೋನ್‌ನ ಆರಂಭಿಕ ಬೆಲೆ ₹ 10,999
ಡಿಸ್ಪ್ಲೇ (display) :
ನೋಕಿಯಾ G42 5G ಫೋನ್ 6.56 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಆಯ್ಕೆ ಅನ್ನು ಒಳಗೊಂಡಿದ್ದು, ಈ ಫೋನಿನ ಡಿಸ್‌ಪ್ಲೇಯು 720 x 1612 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿದೆ.
ಪ್ರೊಸೆಸರ್ (processor) :
ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 480+ ಚಿಪ್‌ಸೆಟ್ ಪ್ರೊಸೆಸರ್, 8nm ಮೊಬೈಲ್ ಪ್ಲಾಟ್‌ಫಾರ್ಮ್ ಜೊತೆಗೆ ಅಡ್ರಿನೋ 619 GPU ಅನ್ನು ಹೊಂದಿದೆ.
ಕ್ಯಾಮೆರಾ (camera) :
ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸಾಮರ್ಥ್ಯವನ್ನು ಹೊಂದಿದೆ.
ಬ್ಯಾಟರಿ (battery) :
ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದೆ.
ಪೊಕೊ M6 ಪ್ರೊ 5G (poco M6 pro 5G) :
ಡಿಸ್ಪ್ಲೇ (display) :
ಪೊಕೊ M6 ಪ್ರೊ 5G ಮೊಬೈಲ್ 6.79 ಇಂಚಿನ ಫುಲ್ ಹೆಚ್‌ಡಿ + ಎಲ್‌ಸಿಡಿ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಈ ಫೋನಿನ ಡಿಸ್‌ಪ್ಲೇಯು 2460 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸೌಲಭ್ಯ ಹೊಂದಿದೆ. ಈ ಫೋನ್‌ನ ಆರಂಭಿಕ ಬೆಲೆ ₹ 14,499
ಪ್ರೊಸೆಸರ್ (prosessor) :
ಸ್ನಾಪ್‌ಡ್ರಾಗನ್ 4 ಜನ್ 2 ಪ್ರೊಸೆಸರ್ ಸೌಲಭ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಇದರಲ್ಲಿದೆ.
ಕ್ಯಾಮೆರಾ (camera) :
ಈ ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸಾಮರ್ಥ್ಯವನ್ನು ಹೊಂದಿದೆ.
ಬ್ಯಾಟರಿ (battery) :
ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದೆ.
ವಿವೋ T3x 5G (vivo Text 5G) :
ಡಿಸ್ಪ್ಲೇ (display) :
ಈ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದು 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿದೆ. ಈ ಫೋನ್‌ನ ಆರಂಭಿಕ ಬೆಲೆ ₹ 13,499
ಪ್ರೊಸೆಸರ್ (prosessor) :
ಮೀಡಿಯಾ ಟೆಕ್ ಡೈಮೆನ್ಸಿಟಿ 7200 4nm ಪ್ರೊಸೆಸರ್ ಬಲ ಪಡೆದಿದ್ದು. ಇತ್ತೀಚಿನ ಆಂಡ್ರಾಯ್ಡ್ 14 ಓಎಸ್ ಬೆಂಬಲ ಹೊಂದಿದೆ.
ಕ್ಯಾಮೆರಾ (camera) :
ಈ ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆ ಹೊಂದಿದ್ದು, 50 ಮೆಗಾ ಪಿಕ್ಸೆಲ್ ಸೆನ್ಸಾರ್ ಮುಖ್ಯ ಕ್ಯಾಮೆರಾ ಪಡೆದಿದ್ದು, 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.
ಬ್ಯಾಟರಿ (battery) :
ಈ ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 44W ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ನೀಡಲಾಗಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.