ಮಹಿಳೆಯರಿಗೆ ಬಂಪರ್ ಗುಡ್ ನ್ಯೂಸ್, ಬರೋಬ್ಬರಿ ₹11000 ಸಿಗುವ ಯೋಜನೆ!

mathru vandhana scheme

ಪ್ರಧಾನ ಮಂತ್ರಿ ಮಾತೃತ್ವ ವಂದನಾ ಯೋಜನೆಯಡಿಯಲ್ಲಿ (PM Matru Vandana Yojana) ಗರ್ಭಿಣಿಯರಿಗೆ ಸಿಗುತ್ತೆ 11,000.

ಮಹಿಳೆಯರಿಗೆ (For Womens) ಅನುಕೂಲವಾಗುವಂತೆ ಹಲವಾರು ಯೋಜನೆಗಳನ್ನು ಸರ್ಕಾರ ರೂಪಿಸುತ್ತಿದ್ದು, ಅದರಲ್ಲೂ ಮೋದಿ ಸರ್ಕಾರ (Modi government) ರೈತರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ತರುತ್ತಿದೆ. ಮಹಿಳೆಯರು ವಿವಾಹವಾದ ನಂತರ ಹಲವು ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿರುತ್ತಾರೆ. ಅವರ ಆರ್ಥಿಕ ನೆರವಿಗೆ ಅನುಕೂಲವಾಗುವಂತೆ ಸರ್ಕಾರ ಹಲವು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದೆ. ಈಗಾಗಲೇ ಅದರ ಲಾಭವನ್ನು ಹಲವು ವರ್ಷಗಳಿಂದ ಮಹಿಳೆಯರು ಪಡೆಯುತ್ತಿದ್ದು, ಈ ವರ್ಷವೂ ಕೂಡ ವಿವಾಹಿತ ಮಹಿಳೆಯರು ಈ ಯೋಜನೆಯ ಲಾಭವನ್ನು ಪಡೆಯಲು ಸೂಚಿಸಿದೆ. ಈ ಯೋಜನೆ ಯಾವುದು? ಇದರ ಪ್ರಯೋಜನಗಳೇನು? ಯಾರಿಗೆ ಈ ಯೋಜನೆಯ ಲಾಭ? ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಪ್ರಧಾನ ಮಂತ್ರಿ ಮಾತೃತ್ವ ವಂದನಾ ಯೋಜನೆ(PM Matru Vandana Yojana):

ಕೇಂದ್ರ ಸರ್ಕಾರದ ಈ ಯೋಜನೆಯಲ್ಲಿ ಮಹಿಳೆಯರ ಮತ್ತು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಮಹಿಳೆಯರ ಮತ್ತು ಮಕ್ಕಳ ಆರೋಗ್ಯಕ್ಕಾಗಿ 11 ಸಾವಿರ ಆರ್ಥಿಕ ನೆರವನ್ನು ನೀಡಲಾಗುತ್ತದೆ. ಪ್ರಧಾನ ಮಂತ್ರಿ ಮಾತೃತ್ವ ವಂದನಾ ಯೋಜನೆಯನ್ನು (PM Matru Vandana Yojana)2017 ರ ಬಜೆಟ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರು ಘೋಷಣೆ ಮಾಡಿದರು. ಈ ಯೋಜನೆಯ ಲಾಭವಾಗಿ ವಿವಾಹಿತ ಗರ್ಭಿಣಿ ಮಹಿಳೆಯರು ಗರ್ಭಿಣಿ ಆದಾಗ ಮತ್ತು ಮಗುವಿಗೆ ಜನ್ಮ ನೀಡಿದ ನಂತರ 11 ಸಾವಿರ ರೂಪಾಯಿಗಳ ಆರ್ಥಿಕ ನೆರವಿನ ಲಾಭವನ್ನು ಪಡೆಯಬಹುದು.ಈ ಹಣ ಮಹಿಳೆಯರ ಖಾತೆಗೆ ನೇರವಾಗಿ ವರ್ಗಾವಣೆಯಾಗುತ್ತದೆ. ಈ ಯೋಜನೆಯ ಅಡಿಯಲ್ಲಿ ಹಣಕಾಸು ನೆರವಿನ ಜೊತೆಗೆ ಗರ್ಭಿಣಿ ಸ್ತ್ರೀಗೆ ಉಚಿತ ಔಷಧಿ ಗರ್ಭಧಾರಣೆಯ ಪೂರ್ವ ಮತ್ತು ನಂತರದ ವೈದ್ಯಕೀಯ ತಪಾಸಣೆ ಸೌಲಭ್ಯವನ್ನು ಕೂಡ ಉಚಿತವಾಗಿ ನೀಡಲಾಗುತ್ತದೆ.

ಈ ಯೋಜನೆಯ ಅಡಿಯಲ್ಲಿ ಫಲಾನುಭವಿಗಳಿಗೆ ಹಣ ಹೇಗೆ ವರ್ಗಾವಣೆಯಾಗುತ್ತದೆ :

ಈ ಯೋಜನೆಯ ಅಡಿಯಲ್ಲಿ ಫಲಾನುಭವಿಗಳಿಗೆ ಎರಡು ಕಂತುಗಳಲ್ಲಿ ಹಣವನ್ನು ನೇರವಾಗಿ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ. ಫಲಾನುಭವಿ ಮಹಿಳೆ ಮೊದಲ ಬಾರಿಗೆ ತಾಯಿಯಾದರೆ 5000 ಹಾಗೂ ಎರಡನೇ ಬಾರಿಗೆ ಹೆಣ್ಣು ಮಗುವಿಗೆ ಜನನ ನೀಡಿದರೆ 6,000 ಗಳನ್ನು ನೀಡಲಾಗುವುದು. ಮೊದಲ ಬಾರಿಗೆ ತಾಯಿಯಾದರೆ ಬರುವ 5000 ಗಳನ್ನು ಎರಡು ಕಂತುಗಳಲ್ಲಿ ಜಮಾ ಮಾಡಲಾಗುತ್ತದೆ. ಮೊದಲ ಒಂದು ಕಂತು  ಜಮಾ ಮಾಡಿದ ನಂತರ 3000 ಹಾಗೂ ಎರಡನೇ ಕಂತಿನ ಹಣ ಜನನ ನೋಂದಣಿ ಆಗಿ ಮಗುವಿಗೆ ಮೊದಲ ಲಸಿಕೆ (vaccine) ಕೊಟ್ಟ ನಂತರ 2000 ಕೊಡಲಾಗುತ್ತದೆ. ಎರಡನೇ ಬಾರಿಗೆ ಹೆಣ್ಣು ಮಗುವಿಗೆ ಜನನ ನೀಡಿದರೆ ಜನನ ಆದ ಬಳಿಕ 6,000 ಗಳನ್ನು ಒಂದೇ ಬಾರಿಗೆ ಖಾತೆಗೆ ವರ್ಗಾವಣೆ ಮಾಡಲಾಗುವುದು.

ಯಾರಿಗೆ ಸಿಗುತ್ತದೆ ಈ ಯೋಜನೆಯ ಲಾಭ?

ಪ್ರಧಾನ ಮಂತ್ರಿ ಮಾತೃತ್ವ ವಂದನಾ ಯೋಜನೆಯ ಲಾಭ ಸಿಗುವುದು ಫಲಾನುಭವಿ ಮೊದಲಿಗೆ ಭಾರತೀಯ ನಾಗರಿಕರಾಗಿರಬೇಕು, ಎರಡನೆಯದಾಗಿ 19 ವರ್ಷ ಮೇಲ್ಪಟ್ಟ ಮಹಿಳಾ ಅಭ್ಯರ್ಥಿಗಳಿಗೆ ಸಿಗುತ್ತದೆ. ಹಾಗೂ ಗರ್ಭಿಣಿಯರು ಮತ್ತು ಹಾಲುಣಿಸುವ ಮಹಿಳೆಯರು ಮಾತ್ರ ಈ ಯೋಜನೆಯ ಅಡಿಯಲ್ಲಿ ಪ್ರಯೋಜನ ಪಡೆಯಬಹುದು. ಅಂಗನವಾಡಿ ಕಾರ್ಯಕರ್ತೆಯರು (Anganavadi Worker’s), ಅಂಗನವಾಡಿ ಸಹಾಯಕಿಯರು ಆಶಾ ಕಾರ್ಯಕರ್ತೆಯರು (Asha Worker’s) ಕೂಡ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು (documents) ಯಾವುದು?:

ಫಲಾನುಭವಿಯ ಆಧಾರ್ ಕಾರ್ಡ್
ಮಗುವಿನ ಜನನ ಪ್ರಮಾಣ ಪತ್ರ
ಫಲಾನುಭವಿಯ ಆದಾಯ ಪ್ರಮಾಣ ಪತ್ರ
ಪಾನ್ ಕಾರ್ಡ್
ಬ್ಯಾಂಕ್ ಖಾತೆಯ ವಿವರ
ಪಾಸ್ ಪೋರ್ಟ್ ಅಳತೆಯ ಫೋಟೋ

ಅರ್ಜಿ ಸಲ್ಲಿಸುವುದು ಹೇಗೆ :

ಫಲಾನುಭವಿಯು ಈ ಯೋಜನೆಗೆ ಅರ್ಜಿ ಸಲ್ಲಿಸಬೇಕೆಂದರೆ, ಆನ್ ಲೈನ್ ಮತ್ತು ಆಫ್ ಲೈನ್ ಎರಡರ ಮುಖಾಂತರವೂ ಕೂಡ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು.

ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವ ವಿಧಾನ  :

ಫಲಾನುಭವಿಯು ಹತ್ತಿರದ ಆರೋಗ್ಯ ಕೇಂದ್ರ ಅಥವಾ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಗರ್ಭಿಣಿ ಆಗಿರುವುದರ ಬಗ್ಗೆ ಮೆಡಿಕಲ್ ಸರ್ಟಿಫಿಕೇಟ್ ಒದಗಿಸಿದರೆ ನಿಮ್ಮ ಹೆಸರನ್ನು ನೋಂದಾಯಿಸಿಕೊಂಡು ಹಣವನ್ನು ಖಾತೆಗೆ ಬರುವಂತೆ ಮಾಡಬಹುದು.

ಇನ್ನು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದಾದರೆ https://pmmvy.wcd.gov.in/Account/Login ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಈ ಮಾಹಿತಿಗಳನ್ನು ಓದಿ

 


ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!