Gruhalakshmi: 11ನೇ ಕಂತಿನ 2000/- ಹಣ ಬಿಡುಗಡೆ, ಯಜಮಾನಿಯರೇ ಅಕೌಂಟ್ ಚೆಕ್ ಮಾಡಿಕೊಳ್ಳಿ

gruhalakshmi

ರಾಜ್ಯದಲ್ಲಿ ಚುನಾವಣೆಯ ಸಂದರ್ಭದಲ್ಲಿ ಗೃಹಲಕ್ಷ್ಮಿಯ 10ನೇ ಕಂತಿನ ಹಣ ಜಮಾ ಆಗಿದ್ದು, 11ನೇ ಕಂತಿನ ಹಣ ಯಾವಾಗ ಬರುತ್ತದೆ ಎಂದು ಹಲವು ಮಹಿಳೆಯರು ಕಾದು ಕುಳಿತಿದ್ದಾರೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಭಾರಿ ಸದ್ದು ಮಾಡುತ್ತಿದ್ದರು ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬಾರಿ ಪ್ರಮಾಣದಲ್ಲಿ ಜನ ಬೆಂಬಲ ಸಿಕ್ಕಿಲ್ಲ ವಾದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಹಾಗಾದರೆ 11ನೇ ಕಂತಿನ ಹಣ ಯಾವಾಗ ಬರುತ್ತದೆ ಎನ್ನುವ ಅಪ್ಡೇಟ್ ಕೆಳಗೆ ಕೊಡಲಾಗಿದೆ. ಇದೇ ರೀತಿಯ  ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಗೃಹಲಕ್ಷ್ಮಿ 11ನೇ ಕಂತಿನ ಹಣ

ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಂದ ನಂತರ, ಅನೇಕ ಜನರು ಗ್ಯಾರೆಂಟಿ ಯೋಜನೆ(Guarantee schemes)ಗಳನ್ನು ರದ್ದು ಮಾಡಲಾಗುತ್ತದೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಇದರ ಕುರಿತಾಗಿ ಸಚಿವರಾದ ಪರಮೇಶ್ವರ್ ಅವರು ಮಾತನಾಡಿ, ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸಲು ಸರ್ಕಾರ ಯಾವುದೇ ರೀತಿಯ ತೀರ್ಮಾನವನ್ನು ಮಾಡಿಲ್ಲ, ಮಹಿಳೆಯರ ಕಲ್ಯಾಣಕ್ಕಾಗಿ ಈ ಯೋಜನೆಗಳನ್ನು ಜಾರಿ ಮಾಡಲಾಗಿದ್ದು, ಯಾವುದೇ ಕಾರಣಕ್ಕೂ ಯೋಚನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸುತ್ತಿದ್ದಾರೆ. ಹಾಗಾಗಿ 11ನೇ ಕಂತಿನ ಹಣವನ್ನು ಬಿಡುಗಡೆ ಮಾಡಲು ಯಾವುದೇ ರೀತಿಯ ತೊಂದರೆಗಳಿಲ್ಲ. ಎಲ್ಲಾ ಮಹಿಳೆಯರಿಗೂ ಇನ್ನೇನು ಎರಡು ಮೂರು ದಿನಗಳಲ್ಲಿ 11ನೇ ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದರ ಜೊತೆಗೆ ಅನ್ನ ಭಾಗ್ಯದ ಹಣವು ಸಹಿತ ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ.

ಈ ಜಿಲ್ಲೆಗಳಿಗೆ ಮೊದಲು ಬರಲಿದೆ ಹಣ :

ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ದಕ್ಷಿಣ ಕನ್ನಡ, ಹಾಸನ, ಚಾಮರಾಜನಗರ, ಉಡುಪಿ, ತುಮಕೂರು, ಬೆಂಗಳೂರು ಕೇಂದ್ರ ಹಾಗೂ ಚಿಕ್ಕಮಂಗಳೂರು ಜಿಲ್ಲೆಗಳಿಗೆ ಗೃಹಲಕ್ಷ್ಮಿಯ 11ನೇ ಕಂತಿನ ಹಣ ಮೊದಲು ಜಮಾ ಆಗುತ್ತದೆ. ಈ ದಿನಗಳಿಗೆ ಜಮಾ ಆದ ಮುಂದಿನ ದಿನದಲ್ಲಿ ಬೇರೆ ಜಿಲ್ಲೆಗಳಿಗೆ ಹಣ ಜಮವಾಗುತ್ತದೆ. 

ಪೆಂಡಿಂಗ್ ಹಣ ಪಡೆಯಲು ಇಲ್ಲಿದೆ ಪರಿಹಾರ 

ಇದುವರೆಗೂ ಒಂದು ಕಂತಿನ ಹಣ ಬಂದೇ ಇಲ್ಲ ಎನ್ನುವ ಮಹಿಳೆಯರ ಬ್ಯಾಂಕ್ ಖಾತೆಯೇ ಕಾರಣ ಎನ್ನಬಹುದು, ಆದ್ದರಿಂದ ಅಂತಹ ಮಹಿಳೆಯರು ಕೂಡಲೇ ಬ್ಯಾಂಕಿಗೆ ಭೇಟಿ ನೀಡಿ ಖಾತೆಗೆ ಅಗತ್ಯ ಇರುವ ಎಲ್ಲಾ ಅಪ್ಡೇಟ್ಸ್ ಗಳನ್ನು ಮಾಡಿಸಿ, ಅದರಲ್ಲೂ ಮುಖ್ಯವಾಗಿ ಎನ್ಪಿಸಿಐ ಮ್ಯಾಪಿಂಗ್, ಆಧಾರ್ ಕಾರ್ಡ್ ಲಿಂಕ್ ಕಡ್ಡಾಯವಾಗಿ ಮಾಡಿಸಲೇಬೇಕು. ಆಧಾರ್ ಕಾರ್ಡ್ ಹತ್ತು ವರ್ಷಗಳಷ್ಟು ಹಳೆಯದಾಗಿದ್ದರೆ ತಕ್ಷಣ ಅದನ್ನು ಆಧಾರ್ ಕಾರ್ಡ್ ತಿದ್ದುಪಡಿ ಕೇಂದ್ರದಲ್ಲಿ ತಪ್ಪದೇ ಅಪ್ಡೇಟ್ ಮಾಡಿಸಿ. ಆಧಾರ್ ಕಾರ್ಡ್ ನಲ್ಲಿ ಹೆಸರು, ಅಡ್ರೆಸ್, ಲಿಂಗ, ಜನ್ಮ ದಿನಾಂಕ ಮೊದಲಾದ ವಿವರಗಳನ್ನು ನವೀಕರಣಗೊಳಿಸಬಹುದು.

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!