ಕಳೆದ ಒಂದು ವಾರದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಹಲವು ಅವಾಂತರಗಳನ್ನು ಸೃಷ್ಟಿ ಮಾಡಿದೆ. ಇನ್ನು ಕೆಲವೇ ಸಾಧಾರಣ ಮಳೆ ಯಾಗುತ್ತಿದ್ದು ಆಗಾಗ ಬಿಸಿಲಿನ ದರ್ಶನವಾಗುತ್ತಿದೆ. ಇಂದು ಜೂನ್ 30ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕ ಹವಾಮಾನ ವರದಿ
ರಾಜ್ಯದಲ್ಲಿ ಇಂದು ಭಾರೀ ಮಳೆಯಾಗಲಿದ್ದು, ಹಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಅಲರ್ಟ್ ಘೋಷಣೆ ಮಾಡಿದೆ. ಇಂದು ಯಾವ್ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಅನ್ನೋದರ ವಿವರ ಇಲ್ಲಿದೆ. ಭಾರತೀಯ ಹವಾಮಾನ ಇಲಾಖೆ ಹಾಗೂ ಬೆಂಗಳೂರಿನ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 3 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಈಗಾಗಲೇ ಮುಂಗಾರು ಅಬ್ಬರದಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು ಉಕ್ಕಿ ಹರಿಯುತ್ತಿದ್ದರೆ, ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೆಚ್ಚಾಗುತ್ತಲೇ ಇದೆ. ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಸಹ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಹಲವು ಜಿಲ್ಲೆಗಳಲ್ಲಿಯೂ ಸಹ ಭಾರೀ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ.
ಇಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆ ಮತ್ತು ನಿರಂತರ ಗಾಳಿಯೊಂದಿಗೆ ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗಿನಲ್ಲಿ ಭಾರೀ ಮಳೆ ಆಗಲಿದೆ. ಉತ್ತರ ಕನ್ನಡದಲ್ಲಿ ಭಾರೀ ಮಳೆ ಆಗಿದೆ. ಉಡುಪಿ, ದಕ್ಷಿಣ ಕನ್ನಡದಲ್ಲಿ, ಉತ್ತರ ಕನ್ನಡದಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.