ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗುತ್ತಿದ್ದು, ಕೆರೆಕಟ್ಟೆಗಳು ತುಂಬಿ ಹರಿಯುತ್ತಿವೆ. ಮುಂಗಾರು ಮಳೆ ಚುರುಕುಗೊಂಡಿದ್ದು. ರಾಜ್ಯದ ಹಲವು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ದಿನದಿಂದ ದಿನಕ್ಕೆ ಮಳೆಯ ಅಬ್ಬರ ಜೋರಾಗುತ್ತಿದೆ. ದೇಶಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಅನೇಕ ರಾಜ್ಯಗಳಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಓದಿ.
ಕರ್ನಾಟಕ ಹವಾಮಾನ ವರದಿ
ರಾಜ್ಯದಲ್ಲಿ ಮಳೆ ಅಬ್ಬರ (Heavy rains) ಮುಂದುವರೆದಿದೆ. ಅದರಲ್ಲೂ ಕರಾವಳಿ (coastal) ಹಾಗೂ ಮಲೆನಾಡಿನಲ್ಲಿ (Malenadu) ವರುಣನ ಆರ್ಭಟ ಜೋರಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜುಲೈ 16 ರಿಂದ 18 ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನಲೆ ಹೆಚ್ಚು ಮಳೆಯಾಗಲಿರುವ ನಿರೀಕ್ಷೆಯಿಂದ ದಕ್ಷಿಣ ಕನ್ನಡದಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹಾಸನ ಹಾಗೂ ಕೊಡಗು ಜಿಲ್ಲೆಗೆ ‘ಆರೆಂಜ್ ಅಲರ್ಟ್’, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿಯೂ ಭಾರಿ ಮಳೆಯ ಜತೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.
ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ
ಮುಂದಿನ 24 ಗಂಟೆಗಳ ಕಾಲ ಭಾರಿ ಮಳೆ ಬೀಳುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಘೋಷಣೆ ಮಾಡಲಾಗಿದ್ದು. ಭಾರಿ ಪ್ರಮಾಣದ ಮಳೆ ಬೀಳುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡವು ಸೇರಿ ಹಾಸನದ ಹಲವು ತಾಲೂಕುಗಳಲ್ಲಿ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಹಾಸನದ ಆಲೂರು, ಬೇಲೂರು, ಸಕಲೇಶಪುರ, ಅರಕಲಗೂಡು ಸೇರಿದಂತೆ ಹಾಸನ ನಗರದಲ್ಲಿ ಇರುವ ಶಾಲಾ & ಕಾಲೇಜುಗಳಿಗೆ ರಜೆ ನೀಡಲಾಗಿದೆ. ಇದರ ಜೊತೆಗೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲೂ ಅಧಿಕೃತ ರಜೆ ಘೋಷಣೆ ಆಗಿದೆ. ಇನ್ನುಳಿದಂತೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಜುಲೈ 16 ರಂದು ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ.