ಬಿಗ್ ಬ್ರೇಕಿಂಗ್ : ಅಂಗನವಾಡಿ ಕೇಂದ್ರಗಳಲ್ಲಿ LKG, UKG ಪ್ರಾರಂಭ ದಿನಾಂಕ ಘೋಷಣೆ!

IMG 20240716 WA0003

ರಾಜ್ಯದ 250 ಅಂಗನವಾಡಿ (Anganvadi) ಕೇಂದ್ರಗಳಲ್ಲಿ ಎಲ್ ಕೆಜಿ(LKG), ಯುಕೆಜಿ (UKG) ಆರಂಭ ದಿನಾಂಕ ಘೋಷಣೆ.

ಎಲ್ಲಾ ದೇಶಗಳಿಗಿಂತಲೂ ಮುಂಚೂಣಿಗೆ ಬರಲು ಪ್ರಯತ್ನಿಸುತ್ತಿರುವ ನಮ್ಮ ಭಾರತ ದೇಶ ಕೇವಲ ವಿಜ್ಞಾನ ತಂತ್ರಜ್ಞಾನಗಳಲ್ಲದೆ (science and technology) ಶೈಕ್ಷಣಿಕವಾಗಿಯೂ ಕೂಡ ಮುಂದುವರೆಯಲು ಪ್ರಯತ್ನಿಸುತ್ತಿರುವ ಕಾರಣ ಶೈಕ್ಷಣಿಕ ಕ್ಷೇತ್ರದಲ್ಲಿ (educational field) ಹಲವಾರು ಯೋಜನೆಗಳು ಹಾಗೂ ಮಕ್ಕಳನ್ನು ಪ್ರೇರೇಪಿಸುವ ಕೆಲಸವನ್ನು ಮಾಡುತ್ತಿದೆ. ಅದರಲ್ಲೂ ಪೂರ್ವ ಪ್ರಾಥಮಿಕ ತರಗತಿಗಳನ್ನು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪ್ರಾರಂಭವಾಗಲಿವೆ. ಸದ್ಯಕ್ಕೆ ರಾಜ್ಯದ ಇನ್ನೂರೈವತ್ತು ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ದಿನಾಂಕವನ್ನು ಘೋಷಣೆ ಮಾಡಿದ್ದಾರೆ. ಯಾವ ದಿನದಿಂದ ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ, ಯುಕೆಜಿ ಪ್ರಾರಂಭ? ಅಂಗನವಾಡಿಯಲ್ಲಿ  ಮಕ್ಕಳಿಗೆ ಸಿಗುವ ಸೌಲಭ್ಯಗಳು ಯಾವುವು? ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲು ಕಾರಣವೇನು?

ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಬೇಕೆಂಬುದು ಎಲ್ಲಾ ಪೋಷಕರ ಕನಸಾಗಿರುತ್ತದೆ. ಆದ್ದರಿಂದ ಪ್ರಾಥಮಿಕ ಹಂತದಲ್ಲಿ ಒಳ್ಳೆಯ ವಿದ್ಯಾಭ್ಯಾಸ ಸಿಕ್ಕಿದರೆ ಮಕ್ಕಳಲ್ಲಿ ಕ್ರಿಯಾಶೀಲತೆ ಹಾಗೂ ಬುದ್ಧಿವಂತಿಕೆ ಹೆಚ್ಚಾಗುತ್ತದೆ. ಹಾಗಾಗಿ ಅಂಗನವಾಡಿ ಕೇಂದ್ರಗಳನ್ನು ಉನ್ನತಿಕರಿಸುವುದು ನಮ್ಮ ಧ್ಯೇಯವಾಗಿದೆ. ಅಂಗನವಾಡಿ ಕೇಂದ್ರಗಳು ಹೆಚ್ಚು ಅಭಿವೃದ್ಧಿ ಹೊಂದಬೇಕು, ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಇತರ ಉತ್ತಮ ಸೌಲಭ್ಯ ದೊರೆಯಬೇಕು ಎಂದು ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ಮುಂದಾಗಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ (Minister of Women and Child Development) ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar)ಹೇಳಿದ್ದಾರೆ.

ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ಎಂದಿನಿಂದ ಆರಂಭ?

ಬೆಂಗಳೂರಿನ ಮಡಿವಾಳದ ಸ್ತ್ರೀ ಶಕ್ತಿ ಭವನದಲ್ಲಿ ನಡೆದ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಯಾಗಲಿ, ಐಸಿಡಿಎಸ್ ಉಳಿಸಿ ಮಕ್ಕಳನ್ನು ರಕ್ಷಿಸಿ, ಸಂಘಟನೆ-ಸಂಘರ್ಷ-ಶಿಕ್ಷಣ ಅಧ್ಯಯನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ” ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಇದೇ ತಿಂಗಳ ಅಂದರೆ ಜುಲೈ 22 ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು “ಎಂದು ತಿಳಿಸಿದರು. ಮತ್ತು ಆಗಮಿಸುವ ಮಕ್ಕಳಿಗೆ ಬ್ಯಾಗ್, ಪುಸ್ತಕ ಹಾಗೂ ಸಮವಸ್ತ್ರಗಳನ್ನು ಇಲಾಖೆಯಿಂದಲೇ  ನೀಡಲಾಗುತ್ತದೆ ಎಂದು ತಿಳಿಸಿದರು.

ಗವರ್ನಮೆಂಟ್ ಮಾಂಟೆಸ್ಸರಿ ಆರಂಭ :

ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣ ಮಾಡುವುದೇ ಇಲಾಖೆಯ ಉದ್ದೇಶವಾಗಿದೆ. ಆದ್ದರಿಂದ ಮೊದಲ ಹಂತದಲ್ಲಿ 15 ರಿಂದ 20 ಸಾವಿರ ಶಾಲೆಗಳಲ್ಲಿ ಗವರ್ನಮೆಂಟ್ ಮಾಂಟೆಸ್ಸರಿ ಆರಂಭಿಸಲಾಗುತ್ತಿದೆ. ಈಗಾಗಲೇ ಇಲಾಖೆಯ ವತಿಯಿಂದಲೇ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಗುಣಮಟ್ಟದ ಆಹಾರ, ಶಿಕ್ಷಕಿಯರಿಗೆ ಸೀರೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಅಂಗನವಾಡಿ ಶಿಕ್ಷಕಿಯರನ್ನು ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.ಕಾರ್ಯಕರ್ತೆಯರ ಹೋರಾಟದ ಶಕ್ತಿಯೇ ಅಂಗನವಾಡಿ ಉನ್ನತೀಕರಣಕ್ಕೆ ಕಾರಣ. ನನ್ನ ಅಧಿಕಾರ ಇರುವವರೆಗೂ ಇಲಾಖೆಗೆ ಕೈಲಾದಷ್ಟು ಉತ್ತಮ ಕೆಲಸ ಮಾಡುತ್ತೇನೆ. ಹಾಗೂ 30 ವರ್ಷಕ್ಕಿಂತ ಮೇಲ್ಪಟ್ಟ ಅಂಗನವಾಡಿ ಕೇಂದ್ರಗಳನ್ನು ಉನ್ನತ ದರ್ಜೆಗೆ ಏರಿಸಲಾಗುತ್ತದೆ ಎಂದು ಸಚಿವರು ಸ್ಪಷ್ಟ ಪಡಿಸಿದರು.

ಸುಮಾರು 50 ವರ್ಷಗಳಿಂದಲೂ ಅಂಗನವಾಡಿ ಕೇಂದ್ರಗಳು ಬಹಳ ಅತ್ಯುತ್ತಮವಾಗಿ ಕಾರ್ಯವನ್ನು ನಿರ್ವಹಿಸಿಕೊಂಡು ಬಂದಿವೆ. ಇನ್ನು ಮುಂದೆ ಗವರ್ನಮೆಂಟ್ ಮಾಂಟೆಸ್ಸರಿ ಆಗಿ ಬದಲಾಗಲಿರುವ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳು ಬೇರೆ ಇತರೆ ಶಾಲೆಗಳಿಗಿಂತ ಅಂಗನವಾಡಿ ಕೇಂದ್ರದ ಮಕ್ಕಳು ಹೆಚ್ಚು ಸುರಕ್ಷಿತವಾಗಿರುತ್ತವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಗಮನಿಸಿ :

ಮುಖ್ಯಮಂತ್ರಿ ಸಿದ್ದರಾಮಯ್ಯನವರ (CM. Siddaramaiah) ಜೊತೆ ಚರ್ಚೆ ನಡೆಸಿ, ಅಂಗನವಾಡಿ ಕಾರ್ಯಕರ್ತೆಯರಿಗೆ ಇನ್ಸೂರೆನ್ಸ್ (Insurance) ನೀಡುವುದಾಗಿ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಹಾಗೂ ಗೌರವ ಧನ ಹೆಚ್ಚಳದ ಬಗ್ಗೆಯೂ ಸಿಎಂ ಜೊತೆಗೆ ಚರ್ಚಿಸಿದ್ದು, ಶೀಘ್ರವೇ ಕಾರ್ಯರೂಪಕ್ಕೆ ತರುವ ಕೆಲಸ ಆಗಲಿದೆ ಎಂದು ಸಚಿವರು ತಿಳಿಸಿದರು.

ಈ ಮಾಹಿತಿಗಳನ್ನು ಓದಿ

 


ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!