Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ! ರೆಡ್ ಅಲರ್ಟ್ ಘೋಷಣೆ

july alert

ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಮಲೆನಾಡಿನಲ್ಲಿ ನಿರಂತರವಾಗಿ ಮಳೆಗೆ ತುಂಗಭದ್ರಾ ವರದಾ,ಮಾಲತಿ ಹೇಮಾವತಿ, ಕುಮದ್ವತಿ ಶರಾವತಿ, ಗಂಗಾವಳಿ, ಅಗನಾಶಿನಿ ಕಾಳಿ ನದಿಗಳ ಆರ್ಭಟ ಜೋರಾಗಿದ್ದು , ಈ ಪುನರ್ವಸು ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ ಕೆಲವೆಡೆ ರಸ್ತೆ ಸಂಪರ್ಕ ಬಂದ್ ಆಗಿದ್ದು. ಜಲಾಶಯಗಳ ಒಳಹರಿವು ಹೆಚ್ಚಾಗಿದೆ. ಇನ್ನು ಹಲವು ಕಡೆ ಜಮೀನುಗಳಿಗೆ ನೀರು ನುಗ್ಗಿ ಬೆಳೆ ಹಾನಿಯಾಗಿದೆ. ಈ ನೆಲೆಯಲ್ಲಿ ರಾಜ್ಯದ ಹಲವು ಭಾಗಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು. ಈ ಕುರಿತು ಸಂಪೂರ್ಣವಾದ ವರದಿ ಕೆಳಗೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ಹವಾಮಾನ ವರದಿ

 ಮುಂಗಾರು ಚುರುಕಾಗಿದ್ದು ರಾಜ್ಯದಲ್ಲಿ ವರುಣನು ರುದ್ರನರ್ತನ ಮಾಡುತ್ತಿದ್ದಾನೆ. ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಅಲ್ಲಿ ಭೂಕುಸಿತ ಮುಂತಾದ ಅವಗಢಗಳು ನಡೆಯುತ್ತಿವೆ ಕರಾವಳಿ, ಮಲೆನಾಡು ಭಾಗದಲ್ಲಿ ಜುಲೈ 19ರ ತನಕ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಕೊಡಗು ಜಿಲ್ಲೆಯಲ್ಲಿ ನೈಋತ್ಯ ಮುಂಗಾರು ಮಳೆಯ ಅಬ್ಬರ ಮುಂದುವರೆದಿದೆ. ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 80.42 ಮಿ. ಮೀ. ಮಳೆಯಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡದ ಸಮುದ್ರಕ್ಕೆ ಹತ್ತಿರುವ ಪ್ರಾಂತ್ಯಗಳಲ್ಲಿ ಅಕ್ಷರಶಃ ಭಾರೀ ಮಳೆಯಾಗಲಿದೆ. ಬಿರುಸಿನಿಂದ ಕೂಡಿರುವ ಮಳೆಯಾಗಲಿದ್ದು, ಈ ಪ್ರಾಂತ್ಯದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಡಳಿತ ಹೇಳಿದೆ. ಮಳೆಯಿಂದ ಶಾಲಾ ಕಾಲೇಜುಗಳಿಗೆ ತೆರಳಲು ಸಮಸ್ಯೆ ಉಂಟಾಗುತ್ತಿದ್ದ ಬೆನ್ನಲ್ಲಿ ರಜೆ ಘೋಷಣೆ ಮಾಡಲಾಗುತ್ತಿದೆ. 

ಹೊಸನಗರ ತಾಲೂಕಿನಲ್ಲಿ ಪುನರ್ವಸು ಮಳೆ ನಿರಂತರ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹೊಸನಗರ ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 18) ರಜೆ ಘೋಷಣೆ ಮಾಡಲಾಗಿದೆ.

ಜು. 24ರಿಂದ ಆ. 1ರ ನಡುವೆ, ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದ್ದು, ಬಳ್ಳಾರಿ, ಕೋಲಾರದಂಥ ಗಡಿಭಾಗದ ಜಿಲ್ಲೆಗಳೂ ಸಹ ಭಾರೀ ವರ್ಷಧಾರೆಯನ್ನು ಕಾಣಲಿವೆ ಎಂದು ಹೇಳಲಾಗಿದೆ.

ಉತ್ತರ ಹಾಗೂ ದಕ್ಷಿಣ ಒಳನಾಡಿನ ಉಳಿದೆಲ್ಲಾ ಜಿಲ್ಲೆಗಳಲ್ಲಿ 20ರಿಂದ 50 ಮಿ.ಮೀ.ನಷ್ಟು ಮಳೆಯಾಗುತ್ತದೆ. ಮೈಸೂರು, ಕೋಲಾರ, ಚಿತ್ರದುರ್ಗ, ದಾವಣಗೆರೆ ಮುಂತಾದ ಕಡೆಗಳಲ್ಲಿ ಸಾಧಾರಣವಾಗಿ ಮಳೆಯಾಗುತ್ತದೆ. ಅದರಲ್ಲೂ ವಿಶೇಷವಾಗಿ ಕಲಬುರಗಿ, ಬೀದರ್ ಜಿಲ್ಲೆಗಳಿಗೆ 20ರಿಂದ 50 ಮಿ.ಮೀ.ವರೆಗೆ ಮಳೆ ಬೀಳಲಿದೆ ಎಂದು ಹೇಳಲಾಗಿದೆ.

ಕರಾವಳಿ ಕರ್ನಾಟಕಕ್ಕೆ ಜುಲೈ 17ರಂದು ರೆಡ್ ಅಲರ್ಟ್‌ ಘೋಷಣೆ ಮಾಡಿದೆ. ಮತ್ತು ಜುಲೈ 18-21ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!