ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಹೆಚ್ಚಿನ ಜಿಲ್ಲೆಗಳಲ್ಲಿ ಮಳೆಯ ಆತಂಕ ಹೆಚ್ಚಾಗಿದೆ. ಭೂಗುಡ್ಡ ಕುಸಿತದಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆಯಿಂದಾಗಿ ಸಾವುನೋವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಣಭೀಕರ ಮಳೆ ಹಿನ್ನೆಲೆಯಲ್ಲಿ ಇಂದು ಶಾಲಾ ಕಾಲೇಜು ಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಕೆಳಗೆ ಓದಿ.
ಕರ್ನಾಟಕ ಹವಾಮಾನ ವರದಿ
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪುನರ್ವಸು ಮಳೆ ಭಾರೀ ಆವಾಂತರವನ್ನು ಸೃಷ್ಟಿಸುತ್ತಿದೆ. ಕುಂಭದ್ರೋಣ ಮಳೆಯಿಂದಾಗಿ ಕೆರೆಕಟ್ಟೆಗಳು ತುಂಬಿ ತುಳುಕುತ್ತಿದೆ. ತುಂಗಾ, ಭದ್ರಾ, ಕೃಷ್ಣಾ, ನೇತ್ರಾವತಿ, ಕುಮಾರಧಾರ ಮುಂತಾದ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಬೆಳಗಾವಿ, ಚಾಮರಾಜನಗರದಲ್ಲಿ ಮಳೆಯ ಆರ್ಭಟ ಜೋರಾಗಿದೆ.
ಮುಂದಿನ ಎರಡು ದಿನಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರಗಳಲ್ಲಿ ಹಗುರ ಸಸಾಧಾರಣ ಮಳೆಯಾಗಲಿದೆ. ಆದರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದ ಒಂದೆರಡು ಕಡೆ ಭಾರಿ/ಅತಿ ಭಾರಿ ಮಳೆ ಮುಂದುವರೆಯಲಿದೆ.
ಈ ಜಿಲ್ಲೆಗಳ ಶಾಲಾ ಕಾಲೇಜು ರಜೆ
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಮಳೆ ಅಬ್ಬರ ಇರುವ ಕಾರಣ ಶಾಲೆ & ಕಾಲೇಜು ಬಂದ್ ಮಾಡಲು ಆದೇಶ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಬೀಳುತ್ತಿರುವ ಕಾರಣ, ಶಾಲಾ & ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ. ಹೀಗಾಗಿ ಜುಲೈ 20 ಇಂದು ರಜೆ ಇರಲಿದೆ.
ಶಾಲಾ & ಕಾಲೇಜುಗಳಿಗೆ ರಜೆ ನೀಡಲಾಗಿದ್ದರೂ, ಪದವಿ ಕಾಲೇಜು, ಎಂಜಿನಿಯರಿಂಗ್, ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ರಜೆ ಇಲ್ಲವೆಂದು ಮಾಹಿತಿಯನ್ನ ನೀಡಲಾಗಿದೆ. ಹಾಸನ ಜಿಲ್ಲೆಯ 6 ತಾಲೂಕುಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ಸಕಲೇಶಪುರ ಸೇರಿ ಆಲೂರು, ಬೇಲೂರು, ಹಾಸನ, ಹೊಳೆನರಸೀಪುರ & ಅರಕಲಗೂಡು ತಾಲೂಕು ಪೂರ್ತಿ ಮಳೆ ಅಬ್ಬರಕ್ಕೆ ತತ್ತರಿಸಿದೆ. ಹೀಗಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.