ರಾಜ್ಯದಲ್ಲಿ ಹಲವು ದಿನಗಳಿಂದ ಬಿಟ್ಟುಬಿಡದೆ ಮಳೆರಾಯ ಅಬ್ಬರಿಸುತ್ತಿದ್ದು, ಅನೇಕ ಜಿಲ್ಲೆಗಳಲ್ಲಿ ಜನರ ಜೀವನ ಅಸ್ತವ್ಯಸ್ತವಾಗಿದೆ, ರಾಜಧಾನಿ ಬೆಂಗಳೂರಿನಲ್ಲಿ ಜನ ಮಳೆಗೆ ತತ್ತರಿಸಿ ಹೋಗಿದ್ದಾರೆ. ಈ ನೆಲೆಯಲ್ಲಿ ಹವಾಮಾನ ಇಲಾಖೆ ಬೆಂಗಳೂರಿನಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯ ಮುನ್ಸೂಚನೆ ಕೊಟ್ಟಿದ್ದು. ಸಂಪೂರ್ಣ ವಿವರ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ ಹವಾಮಾನ ವರದಿ
ರಾಜ್ಯದಲ್ಲಿ ಮಾನ್ಸೂನ್ ವ್ಯಾಪಕವಾಗಿದ್ದು, ಜುಲೈ ತಿಂಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಕರ್ನಾಟಕ, ಗುಜರಾತ್, ಕೇರಳದ ಕರಾವಳಿ ಭಾಗಗಳಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಜುಲೈ 27 ರಿಂದ 30ರವರೆಗೆ ಭಾರೀ ಮಳೆಯ ಎಚ್ಚರಿಕೆ ನೀಡಿದೆ. ಉತ್ತರ ಮತ್ತು ದಕ್ಷಣ ಒಳನಾಡಿನಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. 26 ಮತ್ತು 27ರಂದಿ ಉತ್ತರ ಕನ್ನಡ, ಹಾಸನ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಮತ್ತು ಉಡುಪಿ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಜುಲೈ 30 ರ ವರೆಗೆ ಭಾರಿ ಮಳೆಯಾಗಲಿದೆ ಎಚ್ಚರಿಕೆ ನೀಡಿದೆ. ಕರಾವಳಿ ದಕ್ಷಿಣ ಒಳನಾಡು ಮತ್ತು ಉತ್ತರಗಳನ್ನು ವ್ಯಾಪಕ ಮಳೆ ಬೀಳುವ ಸಾಧ್ಯತೆಯಿದ್ದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಶಿರಸಿ, ಸಿದ್ದಾಪುರ, ಜೋಯಿಡಾ, ಯಲ್ಲಾಪುರ, ಭಟ್ಕಳ ಹಾಗೂ ದಾಂಡೇಲಿ,ಶಿವಮೊಗ್ಗ ಜಿಲ್ಲೆಯ ಹೊಸನಗರ, ಕೊಡಗು ಜಿಲ್ಲೆ, ಬೀರೂರು , ಧಾರವಾಡ ಜಿಲ್ಲೆ , ಸಕಲೇಶಪುರ ತಾಲೂಕ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಇನ್ನೂ ಚಿಕ್ಕಮಗಳೂರು ಜಿಲ್ಲೆಯ ಕಡೂರು, ತರೀಕೆರೆ ಹಾಗೂ ಅಜ್ಜಂಪುರ ತಾಲ್ಲೂಕುಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕದಲ್ಲಿಯೂ ಮಳೆಯ ಅಬ್ಬರ ಜೋರಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ, ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಕೂಡ ಮೋಡ ಮುಸುಕಿದ ವಾತಾವರಣ ಇದ್ದು, ಮಧ್ಯಾಹ್ನ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.