ರಾಜ್ಯದಲ್ಲಿ ಮುಖ್ಯಮಂತ್ರಿಗಳ 1 ಲಕ್ಷ ಮನೆ ಹಂಚಿಕೆ..ಫಲಾನುಭವಿಗಳಿಗೆ ಸಿಹಿಸುದ್ದಿ; ಇಲ್ಲಿದೆ ಮಾಹಿತಿ

IMG 20240729 WA0000

ಮುಖ್ಯಮಂತ್ರಿ 1 ಲಕ್ಷ ಮನೆ ಯೋಜನೆ (CM 1 Lakh House Scheme) : ಫಲಾನುಭವಿಗಳಿಗೆ ಸಿಹಿ ಸುದ್ದಿ. 1 ಲಕ್ಷ ರೂ. ಹೊರೆ ಕಡಿಮೆ ಮಾಡಲು ನಿರ್ಧಾರ ಕೈಗೊಂಡ ಸರ್ಕಾರ.

ಸಿಎಂ ಸಿದ್ದರಾಮಯ್ಯ (Siddaramaiah) ನವರು ಮುಖ್ಯಮಂತ್ರಿಗಳ ಒಂದು ಲಕ್ಷ ಮನೆ ಯೋಜನೆ (CM 1 lakh Housing Scheme) ಅಡಿಯಲ್ಲಿ ಫಲಾನುಭವಿಗಳಿಗೆ ಆರ್ಥಿಕ ಹೊರೆ ತಗ್ಗಿಸುವ ನಿಟ್ಟಿನಲ್ಲಿ ಗುರುವಾರ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ಪ್ರತಿ ಮನೆಗೆ ಒಂದು ಲಕ್ಷ ರೂಪಾಯಿಯಂತೆ 121 ಕೋಟಿ 53 ಲಕ್ಷ ರೂ.ಸರ್ಕಾರವೇ ಭರಿಸಲು ಒಪ್ಪಿಗೆ ನೀಡಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ವಸತಿ ಸಚಿವ ಜಮೀರ್ ಅಹಮದ್ ಖಾನ್ (Zameer Ahmed Khan) ನೇತೃತ್ವದಲ್ಲಿ ಸಿಎಂ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಗರದ ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರು ಮುಖ್ಯಮಂತ್ರಿಗಳ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು ಬಿಜೆಪಿ ಸರ್ಕಾರದಲ್ಲಿ (BJP Government) ಯೂನಿಟ್ ವೆಚ್ಚ ಹೆಚ್ಚಳ ನಿರ್ಧಾರದಿಂದ ಆತಂಕಗೊಂಡಿದ್ದ 12,153 ಕುಟುಂಬಗಳು, ಪ್ರತಿ ಮನೆಗೆ ಒಂದು ಲಕ್ಷ ರೂ.ನಂತೆ 121 ಕೋಟಿ 53 ಲಕ್ಷ ರೂ.ಗಳನ್ನು ಸರ್ಕಾರವೇ ಭರಿಸಲು ಒಪ್ಪಿಗೆ ನೀಡಿರುವುದು ಫಲಾನುಭವಿಗಳಲ್ಲಿ ಸಂತಸ ಮೂಡಿಸಿದೆ.

2017 ರಲ್ಲಿ ಸೆಪ್ಟೆಂಬರ್ 23 ರಂದು ಮುಖ್ಯಮಂತ್ರಿಗಳ (chief minister) 1 ಲಕ್ಷ ಮನೆ ಯೋಜನೆಗೆ ಅಧಿಸೂಚನೆ ಹೊರಡಿಸಿ ಘಟಕ ವೆಚ್ಚ 6 ಲಕ್ಷ ರೂ. ನಿಗದಿ ಮಾಡಲಾಗಿತ್ತು. ಕೇಂದ್ರ ಸರ್ಕಾರ 1.50 ಲಕ್ಷ, ರಾಜ್ಯ ಸರ್ಕಾರ ಸಾಮಾನ್ಯ ವರ್ಗಕ್ಕೆ 1.20 ಲಕ್ಷ, ಎಸ್ ಟಿ -ಎಸ್ ಸಿ ವರ್ಗಕ್ಕೆ 2 ಲಕ್ಷ ರೂ. ನಿಗದಿಯಾಗಿತ್ತು. ನಂತರ ಬಿ. ಎಸ್. ಯಡಿಯೂರಪ್ಪ (B.S yadiyurappa) ಅವರು ಮುಖ್ಯಮಂತ್ರಿ ಆಗಿದ್ದಾಗ ಬಿಜೆಪಿ ಸರ್ಕಾರ(BJP government)ದಲ್ಲಿ ಘಟಕ ವೆಚ್ಚ 10 ಲಕ್ಷದ 60 ಸಾವಿರ ರೂ. ನಿಗದಿ ಮಾಡಲಾಗಿತ್ತು. ಜಿಎಸ್  ಟಿ ಸೇರಿ 11 ಲಕ್ಷದ 20 ಸಾವಿರ ರೂ. ಆಗಿತ್ತು.ಇಷ್ಟು ಮೊತ್ತ ಭರಿಸಲು ಕಷ್ಟ ಎಂದು ಫಲಾನುಭವಿಗಳು ಸಚಿವರ ಬಳಿ ಮನವಿ ಮಾಡಿಕೊಂಡಿದ್ದರು.

ಎಷ್ಟು ಮನೆಗಳಿಗೆ ಅನುಕೂಲವಾಗಲಿದೆ?

ಇದೀಗ ಸರ್ಕಾರದ ಮಹತ್ವದ ತೀರ್ಮಾನದಿಂದ ಸಬ್ಸಿಡಿ (subsidy) ಹೊರತುಪಡಿಸಿ ಸಾಮಾನ್ಯ ವರ್ಗ 7.50 ಲಕ್ಷ ರೂ., ಎಸ್ ಸಿ -ಎಸ್  ಟಿ (ST/SC) ವರ್ಗ 6.70 ಲಕ್ಷ ರೂ. ಕಟ್ಟಬೇಕಾಗುತ್ತದೆ. ಇದರಿಂದ 12,153 ಕುಟುಂಬಗಳಿಗೆ ನೆರವಾಗಲಿದೆ.ಈ ಹಿಂದೆ ಕ್ರಮವಾಗಿ 8.50 ಲಕ್ಷ ಹಾಗೂ 7.70 ಲಕ್ಷ ರೂ. ಕಟ್ಟಬೇಕಿತ್ತು. ಈ ತೀರ್ಮಾನ 2020 ರಲ್ಲಿ ಘಟಕ ವೆಚ್ಚ ಹೆಚ್ಚಳ ತೀರ್ಮಾನದ ಅಧಿಸೂಚನೆ ಹೊರಡಿಸಿದ ಸಂದರ್ಭದಲ್ಲಿ ಪ್ರಾರಂಭಿಕ ಠೇವಣಿ (deposite) ಮೊತ್ತ ಪಾವತಿ ಮಾಡಿರುವ 12,153 ಮಂದಿಗೆ ಮಾತ್ರ ಅನ್ವಯವಾಗಲಿದೆ. ಪ್ರಾರಂಭಿಕ ಠೇವಣಿ ಮೊತ್ತ ಪಾವತಿ ಮಾಡದ ಆನ್ ಲೈನ್ ಅರ್ಜಿ ಗಳಿಗೆ (Online Application) ಅನ್ವಯ ಆಗದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ (Jameer Ahammad khan) ಸ್ಪಷ್ಟ ಪಡಿಸಿದ್ದಾರೆ.

ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ, ಶಾಸಕರಾದ ಎಸ್. ಟಿ. ಸೋಮಶೇಖರ್, ಎಸ್. ಆರ್. ವಿಶ್ವನಾಥ್, ಮಂಜುಳಾ ಲಿಂಬಾವಳಿ, ಎಂ. ಕೃಷ್ಣಪ್ಪ, ಮುನಿರಾಜು,ಶಿವಣ್ಣ ಹಾಜರಿದ್ದರು.

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!