ಮಳೆಯಿಂದ ತತ್ತರಿಸಿದ ರಾಜ್ಯದ ಜನತೆ, ಇದೀಗ ಸಂತ್ರಸ್ತರಿಗೆ ಗುಡ್ ನ್ಯೂಸ್, ನೆರೆ ಪರಿಹಾರಕ್ಕೆ 777 ಕೋಟಿ ಹಣ ಬಿಡುಗಡೆ.
ರಾಜ್ಯದ ಹಲವಾರು ಕಡೆಗಳಲ್ಲಿ ಮಳೆಯಿಂದ ಭರ್ಜರಿ ಹಾನಿಯುಂಟಾಗಿದೆ. ದಿನ ಬಿಡದೆ ಮಳೆ (Rain) ಸುರಿದಿದೆ. ಹಲವಾರು ಸ್ಥಳಗಳಲ್ಲಿ ಪ್ರಹಾವ, ಮಣ್ಣಿನ ಕುಸಿತ ಉಂಟಾಗಿ ಜನರು ತತ್ತರಿ ಹೋಗಿದ್ದಾರೆ. ರಾಜ್ಯದ ಜನತೆಗೆ ಇದೀಗ ಮಳೆಯಿಂದ ಮನೆ-0ಮಠ ಅಷ್ಟೇ ಅಲ್ಲದೆ ಅನೇಕ ಜನರು ಜೀವವನ್ನು ಕಳೆದುಕೊಂಡಿದ್ದಾರೆ. ತಮ್ಮ ಊರುಗಳನ್ನು ಬಿಟ್ಟು ಬೇರೆ ಕಡೆಗೆ ಒಲಸೆ ಹೋಗುತ್ತಿದ್ದಾರೆ. ಹಾಗೆಯೇ ಇದೀಗ ಮಳೆಯಿಂದ ತತ್ತರಿ ಮನೆ-ಮಠ ಕಳೆದುಕೊಂಡ ಸಂತ್ರಸ್ತರ ನೆರವಿಗೆ ಸರ್ಕಾರ ಬಂದಿದೆ. ಅವರಿಗಾಗಿ ನೆರೆ ಪರಿಹಾರ ನೀಡಿದೆ. ಇದು ಸಂತ್ರಸ್ತರಿಗೆ ಸಿಹಿ ಸುದ್ದಿಯನ್ನು ನೀಡಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ರಾಜ್ಯದಲ್ಲಿ ನೆರೆ ಪರಿಹಾರ ಮತ್ತು ಇತರ ಕಾರ್ಯಕ್ರಮಗಳಿಗೆ 777 ಕೋಟಿ ಬಿಡುಗಡೆ :
ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸುರಿದಂತ ಭಾರೀ ಮಳೆಯಿಂದಾಗಿ ಹಲವೆಡೆ ಮನೆಗಳು ಬಿದ್ದು ಹೋಗಿದ್ದಾವೆ. ಮನೆ, ತಮ್ಮ ತಮ್ಮ ಹೊಲ ಗದ್ದೆ ನೀರಿನಿಂದ ಅಪಾರ ನಷ್ಟ ಉಂಟಾಗಿದೆ. ಭಾರಿ ಮಳೆಯಿಂದ ನಷ್ಟ ಅನುಭವಿಸುತ್ತಿರುವ ಸಂತ್ರಸ್ತರಿಗಾಗಿ ಇದೀಗ ರಾಜ್ಯ ಸರ್ಕಾರವು ನೆರೆ ಪರಿಹಾರವನ್ನು ನೀಡಿದೆ. ಅದಕ್ಕಾಗಿ ಒಟ್ಟು 777 ಕೋಟಿ ಬಿಡುಗಡೆ ಮಾಡಲಾಗಿದೆ. ಹಾಸನ ಜಿಲ್ಲೆಗೆ 23 ಕೋಟಿ ನೀಡಲಾಗಿದೆ. ಸಂತ್ರಸ್ತರಿಗೆ ಮತ್ತು ರೈತರಿಗೆ ನೆರವಾಗುವ ಸಲುವಾಗಿ ನೆರೆ ಪರಿಹಾರವಾಗಿ ರಾಜ್ಯ ಸರ್ಕಾರವು (state government) ಇಂತಿಷ್ಟು ಮೊತ್ತವನ್ನು ಅವರಿಗೆ ನೀಡಿದೆ. ನೆರೆ ಪರಿಹಾರ ಹಾಗೂ ಇತರೆ ಕಾರ್ಯಕ್ರಮಗಳಿಗೆ 777 ಕೋಟಿ ನೀಡಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ (Revenue Minister Krishna Byre Gowda) ತಿಳಿಸಿದ್ದಾರೆ.
ವಿಪತ್ತು ನಿರ್ವಹಣೆಗಾಗಿ ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಖಾತೆಗೆ ಒಟ್ಟು 770 ಕೋಟಿ ಹಣವನ್ನು ಮೀಸಲಿರಿಸಲಾಗಿದೆ :
ಹೌದು, ಭಾರಿ ಮಳೆಯಿಂದ ಯಾವಾಗ ಏನು ಹಾನಿ ಆಗುತ್ತದೆ ಎಂದು ತಿಳಿದಿರುವುದಿಲ್ಲ. ಅದಕ್ಕಾಗಿ ರಾಜ್ಯದ ಹಲವಾರು ಜಿಲ್ಲೆಗಳಿಗೆ ಇಂತಿಷ್ಟು ಹಣವನ್ನು ಜಿಲ್ಲಾಧಿಕಾರಿಗಳ ಖಾತೆಗೆ ಜಮಾ ಮಾಡಿದ್ದಾರೆ. ಮಂಡ್ಯ (Mandya) ಜಿಲ್ಲೆಗೆ 20 ಕೋಟಿ, ಹಾಗೂ ಎಲ್ಲಾ ತಾಲ್ಲೂಕುಗಳಿಗೆ ತಲಾ 25 ಲಕ್ಷ ರೂ ನೀಡಲಾಗಿದೆ. ಸಣ್ಣ ಪುಟ್ಟ ತೊಂದರೆಯಾದಾಗ ರಾಜ್ಯ ಸರ್ಕಾರ ನಿಭಾಯಿಸುತ್ತದೆ. ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಹಾನಿ ಆದಾಗ ಮಾತ್ರ ಎನ್ ಡಿ ಆರ್ ಎಫ್ ತಂಡಕ್ಕೆ ಆಹ್ವಾನ ನೀಡಬೇಕಿದೆ ಎಂದಿದ್ದಾರೆ.
ನದಿ ಬದಿಗಳಲ್ಲಿ ವಾಸವಿದ್ದು, ನೆರೆ ಬಂದಾಗ ಹಿಂದಕ್ಕೆ ಸರಿಯುವವರಿಗೆ ನೆರೆ ಪರಿಹಾರ ದೊರೆಯುದಿಲ್ಲ :
ನದಿಯ ಬದಿಗಳಲ್ಲಿ ಹಾಗೂ ಜಲಾಶಯದ ಹತ್ತಿರ ವಾಸವಿದ್ದು, ನೆರೆ ಇಲ್ಲದ ಸಂದರ್ಭದಲ್ಲಿ ರೈತರು ಬೆಳೆಯನ್ನು ಬೆಳೆಯುವುದು ಹಾಗೂ ನೆರೆ ಬಂದ ಸಂದರ್ಭದಲ್ಲಿ ಹಿಂದಕ್ಕೆ ಸರಿಯುತ್ತಾರೆ. ಇದು ಕಾನೂನಾತ್ಮಕ ವಾಗಿ ತಪ್ಪು ನೆರೆ ಬಂದ ಸಂದರ್ಭದಲ್ಲಿ ಪ್ರಾಣ ಹಾನಿಯಾಗಬಹುದು ಹಾಗೂ ಇಲ್ಲಿ ಬೆಳೆಯುವ ಬೆಳೆಗಳಿಗೆ ಬೆಳೆ ಹಾನಿ ಪರಿಹಾರ ಒದಗಿಸುವುದು ಸಾಧ್ಯವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.