ರೇಷನ್ ಕಾರ್ಡ್ (Ration card) ತಿದ್ದುಪಡಿಗಾಗಿ ಕಾಯುತ್ತಿದ್ದೀರಾ? ಆಗಿದ್ದರೆ ರೇಷನ್ ಕಾರ್ಡ ತಿದ್ದುಪಡಿಗೆ ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ.
ರಾಜ್ಯ ಸರ್ಕಾರ (state government) ಅಥವಾ ಕೇಂದ್ರ ಸರ್ಕಾರದಿಂದ (central government) ಯಾವುದೇ ಯೋಜನೆಯ ಪ್ರಯೋಜನವನ್ನು ಪಡೆಯಬೇಕೆಂದರೆ ರೇಷನ್ ಕಾರ್ಡ್ ಬಹಳ ಮುಖ್ಯವಾಗಿರುವ ದಾಖಲೆಗಳಲ್ಲಿ ಒಂದು. ಇನ್ನು ಬಹಳ ಜನರ ಮನೆಗಳಲ್ಲಿ ರೇಷನ್ ಕಾರ್ಡ್ ಗಳಲ್ಲಿ ಕೆಲವೊಂದು ತಪ್ಪುಗಳು ಆಗಿರಬಹುದು ಉದಾಹರಣೆಗೆ ಅವರ ಹೆಸರು, ಊರು, ಈ ರೀತಿಯಾದಂತಹ ದೋಷಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಇದೀಗ ಸರ್ಕಾರ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಹೌದು ನಮ್ಮ ಕರ್ನಾಟಕ ರಾಜ್ಯದಲ್ಲಿ ರೇಷನ್ ಕಾರ್ಡ್ ತಿದ್ದುಪಡಿಗೆ (Ration card correction) ಆಗಸ್ಟ್ 3 ನೇ ತಾರೀಕಿನಿಂದ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ. ಇಷ್ಟು ದಿನ ಹಲವರು ಪಡಿತರ ಚೀಟಿ ತಿದ್ದುಪಡಿಗಾಗಿ ಕಾಯುತ್ತಿದ್ದರು. ಅಂತವರಿಗೆ ಇದು ಶುಭ ಸುದ್ದಿಯಾಗಿದೆ. ನಿಮ್ಮ ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ (address change) ಸೇರಿದಂತೆ ಎಲ್ಲಾ ರೀತಿಯಲ್ಲಿ ತಿದ್ದುಪಡಿ ಮಾಡಲು ಆನ್ಲೈನಲ್ಲಿ (online) ಇದೀಗ ತಿದ್ದುಪಡಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಲು ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಇದಕ್ಕೆ ಬೇಕಾಗುವ ದಾಖಲೆಗಳು ಯಾವುವು? ಕೊನೆಯ ದಿನಾಂಕ ಯಾವಾಗ? ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಹೌದು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ರೇಷನ್ ಕಾರ್ಡ ಹೊಂದಿರುವ ಗ್ರಾಹಕರು ಅನ್ನೈನ್ ಮೂಲಕ ಅರ್ಜಿ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ. ಬಹಳ ಮುಖ್ಯವಾಗಿ ಈ ಬಾರಿ ರೇಷನ್ ಕಾರ್ಡ್ ತಿದ್ದುಪಡಿಗಾಗಿ ಅರ್ಜಿಗೆ ಸಲ್ಲಿಸಲು ಹೆಚ್ಚಿನ ಕಾಲಾವಕಾಶವನ್ನು ಕಲ್ಪಿಸಿಕೊಡಲಾಗಿದೆ. ಆಗಸ್ಟ್ 3 ರಿಂದ 10-08-2024 ತಾಲೂಕಿನವರೆಗೆ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ. ಹೊಸ ಪಡಿತರ ಚೀಟಿ(New Ration Card)ಯಲ್ಲಿ ವಿಳಾಸ ಬದಲಾವಣೆ, ಹೊಸ ಸದಸ್ಯರ ಸೇರ್ಪಡೆ, ಸೇರಿದಂತೆ ಯಾವುದೇ ರೀತಿಯಲ್ಲಿ ಅಪ್ಡೇಟ್ ಮಾಡಲು ಇದೀಗ ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದೆ.
ಯಾವೆಲ್ಲಾ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ?
ಹೊಸ ಸದಸ್ಯರ ಹೆಸರು ಸೇರ್ಪಡೆಗೆ ಅವಕಾಶ.
ಆಧಾರ್ ಈ-ಕೆವೈಸಿ
ಹೆಸರು ತೆಗೆಯುವುದು
ವಿಳಾಸ ಬದಲಾವಣೆ
ನ್ಯಾಯಬೆಲೆ ಅಂಗಡಿ ಬದಲಾವಣೆ
ಹೆಸರು ತಿದ್ದುಪಡಿ ಮಾಡಬಹುದು.
ಅರ್ಜಿ ಸಲ್ಲಿಸಬೇಕಾಗುವ ಅಗತ್ಯ ದಾಖಲಾತಿಗಳು:
ಅರ್ಜಿದಾರರ ಅಧಾರ್ ಕಾರ್ಡ ಪ್ರತಿ.
ಹೊಸ ಹೆಸರು ಸೇರ್ಪಡೆಗೆ ಜಾತಿ ಮತ್ತು ಅದಾಯ
ಪ್ರಮಾಣ ಪತ್ರ.
ಮೊಬೈಲ್ ಸಂಖ್ಯೆ.
ಹಾಲಿ ಪಡಿತರ ಚೀಟಿ/ರೇಷನ್ ಕಾರ್ಡ.
ಎಲ್ಲಿ ಅರ್ಜಿ ಸಲ್ಲಿಸಬೇಕು?
ಪಡಿತರ ಚೀಟಿಯಲ್ಲಿ ಯಾವುದೇ ರೀತಿಯಲ್ಲಿ ತಿದ್ದುಪಡಿಯನ್ನು ಮಾಡಲು ನಿಮ್ಮ ಹತ್ತಿರದ ಯಾವುದೇ ಸಿಎಸ್ಸಿ ಕೇಂದ್ರ, ಗ್ರಾಮಒನ್(Gram one) ಕೇಂದ್ರ, ಕರ್ನಾಟಕ ಒನ್, ಕೇಂದ್ರಕ್ಕೆ ಭೇಟಿ ನೀಡಿ ಅಥವಾ ನಾಡ ಕಚೇರಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ನೀವು ಹೋಗಿ ಈ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಅವಧಿ (Ration card tiddupadi date)
ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ದಿನಾಂಕ: 03 ಆಗಸ್ಟ್ 2024 ರಿಂದ 10 ಆಗಸ್ಟ್ 2024ರ ವರೆಗೆ ಪ್ರತಿ ದಿನ ಬೆಳ್ಳಗೆ 10-00 ಗಂಟೆಯಿಂದ ಸಂಜೆ 5-00 ಗಂಟೆ ವರೆಗೆ ಅವಕಾಶ ಮಾಡಿಕೊಡಲಾಗಿದೆ. ಕರ್ನಾಟಕದಲ್ಲಿ 31 ಜಿಲ್ಲೆಗಳಿಗೂ ಕೂಡ ರೇಷನ್ ಕಾರ್ಡ್ ತಿದ್ದುಪಡಿ ಅರ್ಜಿ ಸಲ್ಲಿಸಲು (New Ration card Karnataka)ಅವಕಾಶವಿದೆ.
ಅರ್ಜಿ ಸಲ್ಲಿಸಿದ ನಂತರ ಅರ್ಜಿಯು ಯಾವ ಹಂತದಲ್ಲಿದೆ ಎಂದು ಚೆಕ್ ಮಾಡುವ ವಿಧಾನ:
ಗ್ರಾಹಕರು ಆನ್ಲೈನ್ ಮೂಲಕ ರೇಷನ್ ಕಾರ್ಡ್ ತಿದ್ದುಪಡಿಗೆ ಅಥವಾ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿದ ತದ ನಂತರ ಅರ್ಜಿ ಯಾವ ಹಂತದಲ್ಲಿದೆ ಎಂದು ನಿಮ್ಮ ಮೊಬೈಲ್ ನಲ್ಲೇ ತಿಳಿದುಕೊಳ್ಳಬಹುದಾಗಿದೆ.
Step-1: ಮೊದಲು ಈ ration card application status ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು.
https://ahara.kar.nic.in/Home/EServices
Step-2: ನಂತರ ಆಯ್ಕೆಯ ವಿಭಾಗಗಳು ತೋರಿಸುತ್ತವೆ ಇಲ್ಲಿ “ಇ-ಸ್ಥಿತಿ” ಬಟನ್ ಮೇಲೆ ಕ್ಲಿಕ್ ಮಾಡಿ “ತಿದ್ದುಪಡಿ ವಿನಂತಿಯ ಸ್ಥಿತಿ” ಬಟನ್ ಮೇಲೆ ಕ್ಲಿಕ್ ಮಾಡಬೇಕು.
Step-3: “ತಿದ್ದುಪಡಿ ವಿನಂತಿಯ ಸ್ಥಿತಿ” ಬಟನ್ ಮೇಲೆ ಕ್ಲಿಕ್ ಮಾಡಿದ ನಂತರ ಈ ರೀತಿ ಮೂರು ಆಯ್ಕೆಗಳು ತೋರಿಸುತ್ತದೆ.
ONLY FOR BENGALURU DISTRICTS CLICK HERE
(BENGALURU(URBAN/RURAL/CITY) districts only)
ONLY FOR KALABURAGI/BENGALURU DIVISIONS EXCEPT BENGALURU(URBAN/RURAL/CITY) CLICK HERE
(Ballari, Bidar, Chikkaballapura, Chitradurga, Davangere, Kalaburagi, Kolar, Koppal, Raichur, Ramanagara, Shivamoga, Tumakuru, Yadgir, Vijayanagara districts only)
ONLY FOR BELAGAVI/MYSURU DIVISIONS CLICK HERE
(Bagalkote, Belagavi, Chamarajnagara, Chikkamagaluru, Dakshinakannada, Dharwar, Gadag, Hassan, Haveri, Kodagu, Mandya, Mysuru, Udupi, Uttarakannada, Vijayapura districts only)
ಇದರಲ್ಲಿ ನೀವು ನಿಮ್ಮ ಜಿಲ್ಲೆಯ ಹೆಸರು ಇರುವ ಆಯ್ಕೆಯ ಮೇಲೆ ಕ್ಲಿಕ್ ಮಾಡಿಕೊಂಡು ಮುಂದುವರೆಯಬೇಕು.
Step-4: RC No ಮತ್ತು Akcnowledgment No ಅನ್ನು ಹಾಕಿ “Go” ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ರೇಶನ್ ಕಾರ್ಡ ತಿದ್ದುಪಡಿ ಅರ್ಜಿ ಯಾವ ಹಂತದಲ್ಲಿದೆ ಎಂದು ನಿಮ್ಮ ಮೊಬೈಲ್ ನಲ್ಲೇ ನೋಡಬಹುದು.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.