ಗೃಹಲಕ್ಷ್ಮಿ ಜೂನ್, ಜುಲೈ ತಿಂಗಳ 4000/- ಹಣ ಈ ಜಿಲ್ಲೆಯವರಿಗೆ ಮೊದಲು ಜಮಾ.!

IMG 20240805 WA0004

ಕೊಡಗು ಜಿಲ್ಲೆಯಲ್ಲಿ ಭೂಕುಸಿತ ಮತ್ತು ಪ್ರವಾಹದಂತಹ ಪ್ರಕೃತಿಕ ಆಪತ್ತುಗಳು ಸಂಭವಿಸಿರುವ ಕುರಿತು ಪರಿಶೀಲನೆ ನಡೆಸಿದ ನಂತರ, ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮೇ ತಿಂಗಳವರೆಗೆ ಹಣವನ್ನು ನೀಡಲಾಗಿದೆ, ಇನ್ನೂ ಜೂನ್ ಮತ್ತು ಜುಲೈ ತಿಂಗಳ ಗೃಹ ಲಕ್ಷ್ಮಿ(Gruhalakshmi) ಹಣವನ್ನು ಕೂಡಾ ಶೀಘ್ರದಲ್ಲಿಯೇ ನೀಡುವುದಾಗಿ ಹೇಳಿದರು.ಮತ್ತು ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಲಿದೆ ಎಂದು ಕೂಡಾ ಹೇಳಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಈ ದಿನ ಬಿಡುಗಡೆಯಾಗಲಿದೆ ಗೃಹಲಕ್ಷ್ಮಿಯ ಹಣ :

ಆಗಸ್ಟ್ 6 ರ ನಾಳೆ ಬೆಳಗಾವಿ, ಕಲಬುರ್ಗಿ, ಬೀದ‌ರ್, ವಿಜಯಪುರ, ಬಳ್ಳಾರಿ, ರಾಯಚೂರು, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಜಿಲ್ಲೆಗಳಿಗೆ ಹಣ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ಉಳಿದ ಜಿಲ್ಲೆಗಳಿಗೆ ಆಗಸ್ಟ್ 6 ರ ನಂತರ ಹಣ ಬಿಡುಗಡೆ ಆಗಲಿದೆ ಎನ್ನಲಾಗಿದೆ.

ಪ್ರವಾಹ (flood) ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಿಎಂ ಸಿದ್ದರಾಮಯ್ಯ (Siddaramaiah)  ಪರಿಶೀಲನೆ ಮಾಡಿದ್ದಾರೆ. ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಶೇ.50ರಷ್ಟು ಮಳೆ ಹೆಚ್ಚಾಗಿದೆ. 20ಕ್ಕೂ ಹೆಚ್ಚು ಕಡೆ ಭೂಕುಸಿತವಾಗಿದೆ. ಮಳೆ ನಿಂತ ತಕ್ಷಣ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಮಳೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ಕೊಡಲಾಗುವುದು ಎಂದಿದ್ದಾರೆ.

ಸಂಪೂರ್ಣ ಹಾನಿಗೊಳಗಾದ ಮನೆಗಳಿಗೆ 1.2 ಲಕ್ಷ ರೂ. ಪರಿಹಾರ ನೀಡಲಾಗುವುದು ಮತ್ತು ಹೊಸ ಮನೆಗಳನ್ನು ಕಟ್ಟಿಕೊಡಲಾಗುವುದು. ಭಾಗಶಃ ಹಾನಿಯಾದ ಮನೆಗಳಿಗೆ 50,000 ರೂ. ಪರಿಹಾರ ನೀಡಲಾಗುವುದು. ಕೊಡಗು ಜಿಲ್ಲೆಯಲ್ಲಿ ಮಳೆಯಿಂದಾಗಿ 16 ಜಾನುವಾರುಗಳು ಮೃತಪಟ್ಟಿದ್ದು, ಪ್ರತಿಯೊಂದು ಜಾನುವಾರಿಗೆ 33 ಸಾವಿರ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ 14 ಕಡೆಯಲ್ಲಿ ಕಾಳಜಿ ಕೇಂದ್ರವನ್ನು ಸ್ಥಾಪಿಸಲಾಗಿದ್ದು, 186 ಜನರು ಆ ಕೇಂದ್ರಗಳಲ್ಲಿ ಇದ್ದಾರೆ. ಈ ಜಿಲ್ಲೆಯಲ್ಲಿ ಶೇ. 50% ಮಳೆಯು ಹೆಚ್ಚಾಗಿದೆ, ಹೀಗಾಗಿ ಅನೇಕ ಕಡೆಗಳಲ್ಲಿ ಭೂಕುಸಿತ ಸಂಭವಿಸಿದೆ. ಕಳೆದ 24 ಗಂಟೆಗಳಲ್ಲಿ 2 ಕಡೆಗಳಲ್ಲಿ ಭೂಕುಸಿತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ, ಆದರೆ ಕೆಲವರಿಗೆ ಗಾಯಗಳಾಗಿವೆ. ಮಳೆ ನಿಂತ ತಕ್ಷಣವೇ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಮಳೆಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಕಸ್ತೂರಿ ರಂಗನ್ ಅವರ ವರದಿಯನ್ನು ತಿರಸ್ಕರಿಸಬೇಕೆಂಬುದು ನಮ್ಮ ನಿಲುವಾಗಿದೆ. ಈ ವಿಷಯವನ್ನು ಅರಣ್ಯ ಸಚಿವರ ಜೊತೆ ಮತ್ತೊಮ್ಮೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ₹746 ಕೋಟಿ ರೂಪಾಯಿ ಹಾಗೂ ಮಡಿಕೇರಿಗೆ ಜಿಲ್ಲಾ ವಿಪತ್ತು ನಿರ್ವಹಣಾ ನಿಧಿಯಿಂದ ₹46 ಕೋಟಿ ರೂಪಾಯಿ ಮೀಸಲಾಗಿರುತ್ತವೆ. ಅಗತ್ಯವಿದ್ದರೆ ಹೆಚ್ಚುವರಿ ಹಣವನ್ನು ಒದಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!