SSC Recruitment 2024:  ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ! ಹೀಗೆ ಅಪ್ಲೈ ಮಾಡಿ

IMG 20240810 WA0002

ಈ ವರದಿಯಲ್ಲಿ SSC Recruitment 2024 ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

Staff Selection Commission (SSC Recruitment 2024) ಅವಲೋಕನ:

Staff Selection Commission (SSC) ಪ್ರತಿ ವರ್ಷದಂತೆ ಈ ವರ್ಷವೂ ಹೊಸ ನೇಮಕಾತಿ ಅಧಿಸೂಚನೆಯ ಪ್ರಕಟಣೆ ಹೊರಡಿಸಿದೆ, ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (Staff Selection Commission) ಈ ಬಾರಿ 2006 ಖಾಲಿ ಇರುವ ಸ್ಟೆನೋಗ್ರಾಫರ್ (Stenographer) ಹುದ್ದೆಗಳ ನೇಮಕಾತಿಗಾಗಿ ಆನ್‌ಲೈನ್ ನೋಂದಣಿ ಈಗಾಗಲೇ ಪ್ರಾರಂಭಗೊಂಡಿದೆ  ಮತ್ತು 17 ಆಗಸ್ಟ್ 2024 ರಂದು ಕೊನೆಗೊಳ್ಳುತ್ತದೆ. ಹುದ್ದೆಗಳ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಕೆಳಗೆ ನೀಡಲಾದ ಮಾಹಿತಿಯನ್ನು ಕೊನೆವರೆಗೂ ಓದಿ.

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಇಲಾಖೆ ಹೆಸರು ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (Staff Selection Commission) SSC
ಹುದ್ದೆಗಳ ಹೆಸರು –SSC ಸ್ಟೆನೋಗ್ರಾಫರ್ ಗ್ರೇಡ್ ‘C’ & ‘D’ ಹುದ್ದೆಗಳು
ಒಟ್ಟು ಹುದ್ದೆಗಳು – 2006
ಅಪ್ಲಿಕೇಶನ್ ವಿಧಾನ– ಆನ್ಲೈನ್ (Online)
ಉದ್ಯೋಗ ಸ್ಥಳ – ಭಾರತ

ವಿದ್ಯಾರ್ಹತೆ :

ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಎಸ್‌ಎಸ್‌ಸಿ(SSC) ಸ್ಟೆನೋಗ್ರಾಫರ್‌ ಗ್ರೂಪ್‌ ಸಿ ಮತ್ತು ಡಿ(Stenographer group C and group D) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರು.

ವಯೋಮಿತಿ :

ಸ್ಟೆನೋಗ್ರಾಫರ್ ಗ್ರೇಡ್ ಸಿ ಹುದ್ದೆಗೆ ಅರ್ಜಿ ಸಲ್ಲಿಸುವವರ ವಯಸ್ಸು 18-30 ವರ್ಷದೊಳಗಿರಬೇಕು.
ಸ್ಟೆನೋಗ್ರಾಫರ್ ಗ್ರೇಡ್ ಡಿ ಹುದ್ದೆಗೆ ಅರ್ಜಿ ಸಲ್ಲಿಸುವವರ ವಯಸ್ಸು 18-27 ವರ್ಷದೊಳಗಿರಬೇಕು.

ವಯೋಮಿತಿ ಸಡಿಲಿಕೆ :

SC/ST  5 ವರ್ಷ
OBC  3 ವರ್ಷ
PwD  10 ವರ್ಷ.
PwD(OBC) 13 ವರ್ಷ
PwD(Sc/St) 15 ವರ್ಷಗಳ

ಸಂಬಳದ ಪ್ಯಾಕೆಜ್ ಎಷ್ಟು?

ಸಂಬಳ – SSC ಸ್ಟೆನೋಗ್ರಾಫರ್ ಗ್ರೇಡ್ C- ರೂ 9,300 ರಿಂದ ರೂ 34,800 ನೀಡಲಾಗುತ್ತದೆ.
ಸಂಬಳ – ಎಸ್‌ಎಸ್‌ಸಿ ಸ್ಟೆನೋಗ್ರಾಫರ್ ಗ್ರೇಡ್ ಡಿ- ರೂ 5,200 ರಿಂದ ರೂ 20,200 ನೀಡಲಾಗುತ್ತದೆ.

ಅರ್ಜಿ ಶುಲ್ಕ  :

ಜನರಲ್ ಮತ್ತು OBC – 100/-ಮತ್ತು ಇತರೆ ವರ್ಗ ಯಾವುದೇ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ :

ಕಂಪ್ಯೂಟರ್ ಆಧಾರಿತ ಆನ್‌ಲೈನ್‌ ಪರೀಕ್ಷೆ (Computer based online exam)
ಸ್ಟೆನೋಗ್ರಾಫಿ ಸ್ಕಿಲ್‌ ಟೆಸ್ಟ್‌(Stenographer skill test)
ಈ ಮೇಲಿನ ಎರಡು ಪರೀಕ್ಷೆಗಳಲ್ಲಿ ಅರ್ಹತೆ ಪಡೆದವರ ಮೂಲ ದಾಖಲೆಗಳ ಪರಿಶೀಲಿಸಲಾಗುತ್ತದೆ.(Document verification)
ಕೊನೆಗೆ ವೈದ್ಯಕೀಯ ಪರೀಕ್ಷೆ (Medical test) ನಡೆಸಿ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ (Official Website) ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
https://ssc.gov.in/login

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ.

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 26 ಜುಲೈ 2024 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 17 ಆಗಸ್ಟ್ 2024

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ವರದಿಯನ್ನು ಎಲ್ಲರಿಗೂ ಶೇರ್ ಮಾಡಿ.

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!