ಉಚಿತ ಹೊಲಿಗೆ ಯಂತ್ರ ಪಡೆಯಲು ಕೇಂದ್ರ ಸರ್ಕಾರದಿಂದ ಅರ್ಜಿ ಆಹ್ವಾನ! ಹೀಗೆ ಅಪ್ಲೈ ಮಾಡಿ

IMG 20240810 WA0004

ಉಚಿತ ಹೊಲಿಗೆ ಯಂತ್ರ ಮತ್ತು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ :

ಕೇಂದ್ರ ಸರ್ಕಾರವು ಮಹಿಳೆಯರ ಸ್ವಾವಲಂಬನೆ ಮತ್ತು ಆರ್ಥಿಕ ಪ್ರಗತಿಯ ಮೇಲೆ ಹೆಚ್ಚು ಒತ್ತು ನೀಡುತ್ತಿದೆ. ಈ ಹಿನ್ನೆಲೆ, ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆ ಪರಿಚಯಿಸಲಾಗಿದೆ. ಈ ಯೋಜನೆಯ ಮುಖ್ಯ ಉದ್ದೇಶ ಮಹಿಳೆಯರು ಸ್ವಯಂ ಉದ್ಯೋಗವನ್ನು ಅಳವಡಿಸಿಕೊಂಡು ತಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುವುದು.ಇದೀಗ ಉಚಿತ ಹೊಲಿಗೆ ಯಂತ್ರದ (free Sewing Machine) ಜೊತೆಗೆ 1 ಲಕ್ಷ ರೂ ಸಾಲ(loan)ವನ್ನು ಕೊಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ :

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ (PM Vishwakarma Yojana) ಒಂದು ಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿದ್ದು, ಇದು ವಿವಿಧ ವೃತ್ತಿಗಳಿಗೆ ಸಂಬಂಧಿಸಿದಂತೆ ವಿಶೇಷ ಉಪಕರಣಗಳು ಮತ್ತು ಯಂತ್ರಗಳನ್ನು ಒದಗಿಸುತ್ತದೆ. ಈ ಯೋಜನೆಯಡಿ ಹೊಲಿಗೆ ಯಂತ್ರಗಳನ್ನು ಮಹಿಳೆಯರು ಹಾಗೂ ಪುರುಷರು ಎರಡೂ ಪಡೆದುಕೊಳ್ಳಬಹುದು.

ಯೋಜನೆಯ ಮುಖ್ಯಾಂಶಗಳು:

ಆರ್ಥಿಕ ನೆರವು: ಯೋಜನೆಯಡಿ, ಹೊಲಿಗೆ ಯಂತ್ರವನ್ನು ಖರೀದಿಸಲು 15,000 ರೂ.ಗಳ ಸಹಾಯಧನವನ್ನು ನೇರವಾಗಿ ಅರ್ಜಿದಾರರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.

ಡಿಜಿಟಲ್ ತರಬೇತಿ: ಒಬ್ಬ ಮಹಿಳೆಯರು ಒಂದೊಮ್ಮೆ ತರಬೇತಿಯಲ್ಲಿ ಭಾಗವಹಿಸುವ ಮೂಲಕ ದಿನಕ್ಕೆ 500 ರೂ.ಗಳ ಪಾವತಿಯನ್ನು ಪಡೆದುಕೊಳ್ಳಬಹುದು.

ಸಾಲ ವ್ಯವಸ್ಥೆ: ಯೋಜನೆಯಡಿ ಮೊದಲ ಬಾರಿಗೆ 1 ಲಕ್ಷ ರೂ.ಗಳ ಸಾಲವನ್ನು 18 ತಿಂಗಳಲ್ಲಿ ಮರುಪಾವತಿ ಮಾಡುವ ವ್ಯವಸ್ಥೆ ಇದೆ. ಮರುಪಾವತಿಯನ್ನು ಯಶಸ್ವಿಯಾಗಿ ಮಾಡಿದ ನಂತರ ಇನ್ನೂ 2 ಲಕ್ಷ ರೂ.ಗಳವರೆಗೆ ಸಾಲವನ್ನು ಪಡೆಯಬಹುದು, ಇದನ್ನು 30 ತಿಂಗಳಲ್ಲಿ ಪಾವತಿಸಬೇಕು.

ಕಡಿಮೆ ಬಡ್ಡಿ: ಈ ಸಾಲಗಳ ಮೇಲಿನ ಬಡ್ಡಿದರ ತುಂಬಾ ಕಡಿಮೆ ಇರುತ್ತದೆ ಮತ್ತು ಸರ್ಕಾರವು ಕ್ರೆಡಿಟ್ ಗ್ಯಾರಂಟಿ ಶುಲ್ಕಗಳನ್ನು ಪಾವತಿಸುತ್ತದೆ.

ಅರ್ಹತಾ ನಿಯಮಗಳು :

ಯಾರ್ಯಾರು ಅರ್ಜಿ ಸಲ್ಲಿಸಬಹುದು?

ಅರ್ಜಿದಾರರು ಭಾರತದ ಪ್ರಜೆಯಾಗಿರಬೇಕು.
18 ವರ್ಷಕ್ಕಿಂತ ಮೇಲ್ಪಟ್ಟವರು ಮಾತ್ರ ಅರ್ಜಿ ಸಲ್ಲಿಸಬಹುದು.
ಈಗಾಗಲೇ ಹೊಲಿಗೆ ವೃತ್ತಿಯಲ್ಲಿ ತೊಡಗಿಸಿಕೊಂಡಿರುವವರು.
ಟೈಲರ್ ಆಗಿ ಕೆಲಸ ಮಾಡುವ ಯಾವುದೇ ವ್ಯಕ್ತಿಯು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿಯು ಸಲ್ಲಿಸಲು ಅಗತ್ಯ ದಾಖಲೆಗಳು:

ಆಧಾರ್ ಕಾರ್ಡ್
ವಿಳಾಸ ಪುರಾವೆ
ಗುರುತಿನ ಚೀಟಿ
ಜಾತಿ ಪ್ರಮಾಣಪತ್ರ
ಪಾಸ್ಪೋರ್ಟ್ ಗಾತ್ರದ ಫೋಟೋ
ಮೊಬೈಲ್ ಸಂಖ್ಯೆ
ಬ್ಯಾಂಕ್ ಪಾಸ್ಬುಕ್

ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗಿನಂತೆ:

ಅರ್ಜಿದಾರರು ಮೊದಲನೆಯದಾಗಿ pmvishwakarma.gov.in ಅಧಿಕೃತ ವೆಬ್ಸೈಟ್ಗೆ ಹೋಗಿ, ಅಲ್ಲಿ ನೀವು ನೋಂದಾಯಿಸಿಕೊಳ್ಳಬಹುದು.

ಆನ್‌ಲೈನ್‌ನಲ್ಲಿ (Online) ನೋಂದಾಯಿಸಲು ಸಾಧ್ಯವಾಗದಿದ್ದಲ್ಲಿ, ಹತ್ತಿರದ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಸಹಾಯ ಪಡೆಯಬಹುದು.

ಈ ಯೋಜನೆಯಡಿ ಕೇಂದ್ರ ಸರ್ಕಾರವು ಮಹಿಳೆಯರ ಬದುಕಿಗೆ ಹೊಸ ಆದಾಯದ ಹಾದಿಯನ್ನು ನೀಡುತ್ತಿದೆ. ಇದರಿಂದ ಮಹಿಳೆಯರು ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡು ತಮ್ಮ ಆರ್ಥಿಕ ಸ್ಥಿರತೆ ಮತ್ತು ಸಶಕ್ತಿಕರಣವನ್ನು ಸುಧಾರಿಸಿಕೊಳ್ಳಬಹುದು. ಮತ್ತು
ಇಂತಹ ಉತ್ತಮವಾದ ಮಾಹಿತಿ ಹೊಂದಿದ ಈ ವರದಿಯನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

One thought on “ಉಚಿತ ಹೊಲಿಗೆ ಯಂತ್ರ ಪಡೆಯಲು ಕೇಂದ್ರ ಸರ್ಕಾರದಿಂದ ಅರ್ಜಿ ಆಹ್ವಾನ! ಹೀಗೆ ಅಪ್ಲೈ ಮಾಡಿ

Leave a Reply

Your email address will not be published. Required fields are marked *

error: Content is protected !!