ಬೆಂಗಳೂರಿನಿಂದ ವಿಶೇಷ ರೈಲುಗಳು(Special trains from Bengaluru): ಹಬ್ಬದ ದಟ್ಟಣೆ ನಿವಾರಣೆಗೆ ನೈಋತ್ಯ ರೈಲ್ವೆಯ ಹೊಸ ಕ್ರಮ
ಸ್ನೇಹಿತರೆ, ಹಬ್ಬದ ಸೀಸನ್(festive season) ಇನ್ನೇನು ಶುರುವಾಗಿದೆ. ಹಬ್ಬದ ದಿನಗಳಲ್ಲಿ, ಬೇರೆಯಡೆ ಕೆಲಸ ನಿರ್ವಹಿಸುತ್ತಿರುವವರು ತಮ್ಮ ಮನೆಯನ್ನು ನೆನಪಿಸುತ್ತಾರೆ. ಹಬ್ಬದ ಸಂಭ್ರಮವನ್ನು ತಮ್ಮ ಕುಟುಂಬದೊಂದಿಗೆ ಹಂಚಿಕೊಳ್ಳಲು, ಮನೆಗೆ ತೆರಳಿ, ಹಬ್ಬವನ್ನು ಸಂತಸದಿಂದ ಆಚರಿಸಲು ಬಯಸುತ್ತಾರೆ. ಈ ಕಾರಣಕ್ಕಾಗಿ, ನೈಋತ್ಯ ರೈಲ್ವೆ (South Western Railway) ಊರಿಗೆ ತೆರಳುವ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಹೊಸ ಕ್ರಮಗಳನ್ನು ಕೈಗೊಂಡಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರಿನಿಂದ ಪ್ರಯಾಣಿಕರಿಗೆ ಸಂತಸದ ಸುದ್ದಿ ನೀಡಿದ ನೈಋತ್ಯ ರೈಲ್ವೆ, ಮುಂಬರುವ ಹಬ್ಬದ ಸೀಸನ್‍ನಲ್ಲಿ(festival season) ಹೆಚ್ಚುವರಿ ದಟ್ಟಣೆಯನ್ನು ಸಮರ್ಥವಾಗಿ ನಿರ್ವಹಿಸಲು ಹೊಸ ವಿಶೇಷ ರೈಲುಗಳನ್ನು ಪರಿಚಯಿಸಿದೆ. ಯಶವಂತಪುರದಿಂದ ಬೆಳಗಾವಿ ಮತ್ತು ವಿಜಯಪುರದ ಕಡೆಗೆ ವಿಶೇಷ ರೈಲುಗಳ ವ್ಯವಸ್ಥೆಯನ್ನು ಮಾಡಲಾಗಿದ್ದು, ಇದು ಪ್ರಯಾಣಿಕರಿಗೆ ಅನುಕೂಲಕರವಾಗಲಿದೆ.
ಯಶವಂತಪುರ-ಬೆಳಗಾವಿ-ಯಶವಂತಪುರ ವಿಶೇಷ ರೈಲುಗಳು:
06555 ಯಶವಂತಪುರ-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್:
ಸೆಪ್ಟೆಂಬರ್ 5 ರಂದು ಸಂಜೆ 7.30 ಕ್ಕೆ ಯಶವಂತಪುರದಿಂದ ಹೊರಟು, ಈ ರೈಲು ಮರುದಿನ ಬೆಳಗ್ಗೆ 7.15 ಕ್ಕೆ ಬೆಳಗಾವಿಗೆ ತಲುಪಲಿದೆ.
06556 ಬೆಳಗಾವಿ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್:
ಸಪ್ಟೆಂಬರ್ 6 ರಂದು ಬೆಳಿಗ್ಗೆ 8.45 ಕ್ಕೆ ಬೆಳಗಾವಿಯಿಂದ ಹೊರಟು, ಅದೇ ದಿನ ರಾತ್ರಿ 8 ಗಂಟೆಗೆ ಯಶವಂತಪುರವನ್ನು ತಲುಪಲಿದೆ.
ಈ ರೈಲುಗಳು ಮಧ್ಯೆ ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲುತ್ತವೆ.
06557ಯಶವಂತಪುರ-ಬೆಳಗಾವಿ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್:
ಸೆಪ್ಟೆಂಬರ್ 6 ರಂದು ರಾತ್ರಿ 10.15 ಕ್ಕೆ ಯಶವಂತಪುರದಿಂದ ಹೊರಟು, ಈ ರೈಲು ಮರುದಿನ ಬೆಳಿಗ್ಗೆ 10.15 ಕ್ಕೆ ಬೆಳಗಾವಿಗೆ ತಲುಪಲಿದೆ.
06558 ಬೆಳಗಾವಿ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್:
ಸೆಪ್ಟೆಂಬರ್ 8 ರಂದು ಸಂಜೆ 5.30 ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಗ್ಗೆ 4.30 ಕ್ಕೆ ಯಶವಂತಪುರವನ್ನು ತಲುಪಲಿದೆ.
ಎಸ್ಎಂವಿಟಿ ಬೆಂಗಳೂರು-ವಿಜಯಪುರ-ಎಸ್ಎಂವಿಟಿ ಬೆಂಗಳೂರು ವಿಶೇಷ ರೈಲುಗಳು(special trains):
06577 ಎಸ್ಎಂವಿಟಿ ಬೆಂಗಳೂರು-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್:
ಸೆಪ್ಟೆಂಬರ್ 5 ಮತ್ತು 7 ರಂದು ರಾತ್ರಿ 9 ಗಂಟೆಗೆ ಬೆಂಗಳೂರಿನಿಂದ ಹೊರಟು, ಮರುದಿನ ಮಧ್ಯಾಹ್ನ 2.05 ಕ್ಕೆ ವಿಜಯಪುರ ತಲುಪಲಿದೆ.
06578 ವಿಜಯಪುರ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್:
ಸೆಪ್ಟೆಂಬರ್ 6 ಮತ್ತು 8 ರಂದು ಸಂಜೆ 7 ಗಂಟೆಗೆ ವಿಜಯಪುರದಿಂದ ಹೊರಟು, ಮರುದಿನ ಬೆಳಗ್ಗೆ 11.15 ಕ್ಕೆ ಬೆಂಗಳೂರು ತಲುಪಲಿದೆ.
ಈ ವಿಶೇಷ ರೈಲುಗಳು ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕ್ಯಾಂಟ್, ತೊರ್ನಗಲ್ಲು, ಹೊಸಪೇಟೆ, ಗದಗ, ಬಾದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿಯಲ್ಲಿ ನಿಲುಗಡೆ ಹೊಂದಿವೆ.
ಪ್ರಯಾಣಿಕರಿಗಿರುವ ಪ್ರಯೋಜನ:
ಈ ಹೊಸ ರೈಲುಗಳ ಆರಂಭದಿಂದ ಬೆಂಗಳೂರಿನಿಂದ ಬೆಳಗಾವಿ ಮತ್ತು ವಿಜಯಪುರಕ್ಕೆ ಪ್ರಯಾಣಿಸುವ ಪ್ರಯಾಣಿಕರು ಹಬ್ಬದ ಸಮಯದಲ್ಲೂ ದಟ್ಟಣೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತದೆ. ಇದರಿಂದ ಪ್ರಯಾಣಿಕರಿಗೆ ತೊಂದರೆಯಾಗದೆ, ಸುಲಭ ಮತ್ತು ಸಕಾಲದಲ್ಲಿ ತಮ್ಮ ಪ್ರಯಾಣವನ್ನು ಪೂರ್ಣಗೊಳಿಸಲು ನೆರವಾಗುತ್ತದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.