ಕರ್ನಾಟಕ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಬಗ್ಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಕಾಂಗ್ರೆಸ್ ಸರ್ಕಾರ.
ಇದೀಗ ಈ ಹಿಂದೆ ರಾಜ್ಯದ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ(7th pay commission) ಬಗ್ಗೆ ಹಲವಾರು ಸಿಹಿ ಸುದ್ದಿ ತಿಳಿದು ಬಂದಿದೆ. ಹಾಗೆಯೇ 7ನೇ ವೇತನದ ಬಗ್ಗೆ ಅನೇಕ ಶಿಫರಸ್ಸುಗಳು, ಬೇಡಿಕೆಗಳು ಜಾರಿಯಾಗಿವೆ. ಇದೀಗ ಮತ್ತೊಂದು ಸಿಹಿ ಸುದ್ದಿ ಏನೆಂದರೆ, ಕರ್ನಾಟಕದ ಸರ್ಕಾರಿ ನೌಕರರ (karnataka government employees) ಬಹುದಿನದ ಬೇಡಿಕೆಯಾಗಿದ್ದ ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಶಿಫಾರಸುಗಳನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಂಗೀಕರಿಸಿ, ಜಾರಿಗೊಳಿಸಿದೆ. ತುಟ್ಟಿಭತ್ಯೆ (dearness allowance) ಸೇರಿದಂತೆ ಇತರ ಭತ್ಯೆ, ವೇತನ ಶ್ರೇಣಿ ಎಷ್ಟು ಏರಿಕೆಯಾಗಲಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ರಾಜ್ಯದ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿಸಿದ ಸಿದ್ದರಾಮಯ್ಯ ಸರ್ಕಾರ :
7ನೇ ವೇತನ ಆಯೋಗದ ವರದಿ ಶಿಫಾರಸುಗಳನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಂಗೀಕರಿಸಿ ಜಾರಿಗೊಳಿಸಿ ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದೆ. ಅಲ್ಲದೇ ಎನ್ ಪಿಎಸ್ (NPS) ರದ್ದುಗೊಳಿಸಿ ಓಪಿಎಸ್ (OPS) ಜಾರಿಗೊಳಿಸುವ ಬಗ್ಗೆಯೂ ಸಮಿತಿಯನ್ನು ರಚಿಸಲಾಗಿದೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಜಾರಿ ಮತ್ತೊಂದು ಸಿಹಿ ಸುದ್ದಿ ನೀಡಿದೆ. ವೈದ್ಯಕೀಯ ಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆರೋಗ್ಯ ಸಂಜೀವಿನಿ ಯೋಜನೆ ಜಾರಿವರೆಗೂ ಮಾಸಿಕ 200 ರೂಪಾಯಿಂದ 500 ರೂ.ಗೆ ಹೆಚ್ಚಿಸಿ ಆದೇಶಿಸಿದೆ.
ನಗದುರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (Arogya Sanjeevini Scheme) ಅನುಷ್ಠಾನಗೊಳಿಸಲು ಜಂಟಿ ಕಾರ್ಯದರ್ಶಿಯಿಂದ ಆದೇಶ :
ಈ ಬಗ್ಗೆ ಆರ್ಥಿಕ ಇಲಾಖೆಯ ಜಂಟಿ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರದ ನೀತಿ ನಿರ್ಣಯದಂತೆ 05-09-2022ರ ಸರ್ಕಾರಿ ಆದೇಶದಲ್ಲಿ ನಗದುರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (KASS) ಅನುಷ್ಠಾನಗೊಳಿಸಲು ಆದೇಶಗಳನ್ನು ಹೊರಡಿಸಲಾಗಿರುತ್ತದೆ. ಅದರಂತೆ, ಸರ್ಕಾರದ ನೀತಿಯಲ್ಲಿ ವಿವರಿಸಿರುವಂತೆ ಸದರಿ ಯೋಜನೆಯನ್ನು ಅನುಷ್ಠಾನಗೊಳಿಸಲು ವಿಸ್ತೃತವಾದ ಮಾರ್ಗಸೂಚಿಗಳನ್ನು ಸಹ ಹೊರಡಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.
ಭತ್ಯೆಗಳ ಮತ್ತು ಪಿಂಚಣಿ ಪರಿಷ್ಕರಣೆ ಕುರಿತಂತೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಆದೇಶ :
ದಿನಾಂಕ 22-07-2024ರ ಸರ್ಕಾರಿ ಆದೇಶದಲ್ಲಿ ವೇತನ ಶ್ರೇಣಿಗಳ ಮತ್ತು ವೇತನಕ್ಕೆ ಹೊಂದಿಕೊಂಡಿರುವ ನಿರ್ದಿಷ್ಟ ಭತ್ಯೆಗಳ ಪರಿಷ್ಕರಣೆ ಮತ್ತು ಪಿಂಚಣಿ ಪರಿಷ್ಕರಣೆ ಕುರಿತಂತೆ 7ನೇ ರಾಜ್ಯ ವೇತನ ಆಯೋಗದ (7th pay commission) ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಆದೇಶಗಳನ್ನು ಹೊರಡಿಸಲಾಗಿರುತ್ತದೆ. ಅದರಂತೆ ದಿನಾಂಕ 23-08-2024ರ ಸರ್ಕಾರಿ ಆದೇಶದಲ್ಲಿ ಪರಿಷ್ಕೃತ ವೇತನ ಶ್ರೇಣಿಗಳನ್ನು ಅನುಷ್ಠಾನಗೊಳಿಸಿ ವಿಸ್ತೃತವಾದ ಆದೇಶಗಳನ್ನು ಹೊರಡಿಸಲಾಗಿರುತ್ತದೆ.
ಗ್ರೂಪ್ -ಸಿ (Group C) ಮತ್ತು ಗ್ರೂಪ್-ಡಿ (Group D) ವೃಂದದ ಸುತ್ತೋಲೆಗಳಲ್ಲಿ ತಿಳಿಸಿದ ವಿವರುಗಳು ಈ ಕೆಳಗಿನಂತಿವೆ :
ಗ್ರೂಪ್ -ಸಿ ಮತ್ತು ಗ್ರೂಪ್-ಡಿ ವೃಂದದ ರಾಜ್ಯ ಸರ್ಕಾರಿ ನೌಕರರುಗಳಿಗೆ ಲಭ್ಯವಿರುವ ವೈದ್ಯಕೀಯ ಭತ್ಯೆ ದರಗಳ ಪರಿಷ್ಕರಣೆ ಕುರಿತಂತೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಸರ್ಕಾರವು ಅಂಗೀಕರಿಸಿರುತ್ತದೆ. ಅದರಂತೆ ಈ ಕೆಳಕಂಡ ಆದೇಶವನ್ನು ಹೊರಡಿಸಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಗ್ರೂಪ್-‘ಸಿ’ ಮತ್ತು ಗ್ರೂಪ್-‘ಡಿ’ ವೃಂದದ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ ಲಭ್ಯವಿರುವ ವೈದ್ಯಕೀಯ ಭತ್ಯೆಯ ದರಗಳನ್ನು ಮಾಸಿಕ ರೂ.200/- ಗಳಿಂದ ಮಾಸಿಕ ರೂ.500/- ಗಳಿಗೆ 1ನೇ ಆಗಸ್ಟ್ 2024ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲು ಸರ್ಕಾರವು ಹರ್ಷಿಸುತ್ತದೆ.
ನಗದುರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ (ಕೆ.ಎ.ಎಸ್.ಎಸ್) ಸೌಲಭ್ಯವು ಅನುಷ್ಠಾನಗೊಳ್ಳುವವರೆಗೆ ಈ ವೈದ್ಯಕೀಯ ಸೌಲಭ್ಯವು ಲಭ್ಯವಿರುತ್ತದೆ.
ನಗದುರಹಿತ ವೈದ್ಯಕೀಯ ಸೌಲಭ್ಯ ಯೋಜನೆಯು ಅನುಷ್ಠಾನಗೊಂಡ ನಂತರದಲ್ಲಿ ವೈದ್ಯಕೀಯ ಭತ್ಯೆಯ ಮಂಜೂರಾತಿಯ ಈ ಆದೇಶವು ಜಾರಿಯಲ್ಲಿರುವುದು ಕೊನೆಗೊಳ್ಳುತ್ತದೆ ಮತ್ತು ನಗದುರಹಿತ (ಕೆ.ಎ.ಎಸ್.ಎಸ್) ಯೋಜನೆಯು ಅನುಷ್ಠಾನಗೊಂಡ ಬಳಿಕ ಯಾವುದೇ ಸರ್ಕಾರಿ ನೌಕರನು ಈ ಸೌಲಭ್ಯವನ್ನು ಪಡೆಯಲು ಅರ್ಹನಿರುವುದಿಲ್ಲ.
ಈ ಭತ್ಯೆಯನ್ನು ಕ್ರಮಬದ್ಧಗೊಳಿಸಲು ವಿಧಿಸಿರುವ ಇತರೆ ಷರತ್ತುಗಳು ಮುಂದುವರೆದು ಅನ್ವಯಿಸುತ್ತವೆ ಎಂದು ತಿಳಿಸಿದ್ದಾರೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ